Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಯಕ್ಷಗಾನ ಪ್ರದರ್ಶನಕ್ಕೆ ಪೋಲೀಸರ ತಡೆ...

ಯಕ್ಷಗಾನ ಪ್ರದರ್ಶನಕ್ಕೆ ಪೋಲೀಸರ ತಡೆ ಘಟನೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ: ಶುಭದ ರಾವ್

"ಕಾರ್ಲೋತ್ಸವದ ತಡೆಗೆ ಶತ ಪ್ರಯತ್ನಪಟ್ಟು ಮಾರ್ಯಾದೆ ಕಳೆದುಕೊಂಡವರಿಂದ ನೈತಿಕತೆಯ ಪಾಠದ ಅಗತ್ಯವಿಲ್ಲ"

ವಾರ್ತಾಭಾರತಿವಾರ್ತಾಭಾರತಿ16 Jan 2025 10:27 AM IST
share
ಯಕ್ಷಗಾನ ಪ್ರದರ್ಶನಕ್ಕೆ ಪೋಲೀಸರ ತಡೆ ಘಟನೆಗೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ: ಶುಭದ ರಾವ್

ಕಾರ್ಕಳ: ಮುಂಡ್ಳಿ ಪರಿಸರದಲ್ಲಿ ಆಯೋಜಿಸಿದ್ದ ಯಕ್ಷಗಾನ ಪ್ರದರ್ಶನಕ್ಕೆ ಧ್ವನಿ ವರ್ಧಕದ ಬಳಕೆಗೆ ಅನುಮತಿ ಪಡೆದಿಲ್ಲ ಎನ್ನುವ ಕಾರಣಕ್ಕೆ ಪೋಲೀಸರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಘಟನೆಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ, ವೈಯಕ್ತಿಕ ಮನಸ್ಥಾಪದ ಕಾರಣಕ್ಕೆ ಯಾರೋ ನೀಡಿದ ದೂರಿಗೆ ಪಕ್ಷ ಹೊಣೆಯಾಗುವುದಿಲ್ಲ. ಆದ್ದರಿಂದ ಈ ಬಗ್ಗೆ ಕಾಂಗ್ರೆಸ್ ಪಕ್ಷದ ಮೇಲೆ ಶಾಸಕರು ಮತ್ತು ಕ್ಷೇತ್ರಾಧ್ಯಕ್ಷರು ಮಾಡಿದ ಮಿಥ್ಯ ಆರೋಪವನ್ನು ಸಹಿಸಲು ಸಾದ್ಯವಿಲ್ಲ ಎಂದು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಶುಭದರಾವ್ ತಿಳಿಸಿದ್ದಾರೆ.

ಯಕ್ಷಗಾನ ಕರಾವಳಿಯ ಗಂಡು ಕಲೆ, ನಮ್ಮ ಸಂಸ್ಕೃತಿಯ ಪ್ರತೀಕ, ಅದಕ್ಕೆ ತನ್ನದೇ ಆದ ಪಾವಿತ್ರ್ಯತೆ ಇದೆ, ಅದರ ಪ್ರದರ್ಶನವನ್ನು ಮತ್ತು ಕಲಾವಿದರನ್ನು ಕಾಂಗ್ರೆಸ್ ನಿರಂತರ ಪ್ರೋತ್ಸಾಹಿಸುತ್ತಾ ಬಂದಿದೆ. ಅದರ ಪ್ರದರ್ಶನವನ್ನು ಯಾರು ತಡೆದರೂ‌ ನಮ್ಮ ಆಕ್ಷೇಪವಿದೆ. ಒಂದು ವೇಳೆ ಕಾಂಗ್ರೆಸ್ ನಾಯಕ ತಡೆದಿದ್ದರೆ ಯಾರೆಂದು ದಾಖಲೆ ಸಹಿತ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದ್ದಾರೆ.

ಆದರೆ ಈ ಘಟನೆಯನ್ನು ಬಿಜೆಪಿ ರಾಜಕೀಯಗೊಳಿಸುತ್ತಿದೆ ಎನ್ನುವುದು ಶಾಸಕರ ಮತ್ತು ಕ್ಷೇತ್ರಾಧ್ಯಕ್ಷರ ಹೇಳಿಕೆಯಿಂದ ಸ್ಪಷ್ಟವಾಗುತ್ತದೆ. ತಡೆಯೊಡ್ಡುವ ಚಾಳಿ ಕಾಂಗ್ರೆಸಿಗಿಲ್ಲ. ಅದು ಬಿಜೆಪಿಯ ಸಂಸ್ಕೃತಿ ಎನ್ನುವುದು ಇತೀಚಿಗೆ ನಡೆದ ಕಾರ್ಲೋತ್ಸವದ ಕಾರ್ಯಕ್ರಮವೇ ಸಾಕ್ಷಿಯಾಗಿದೆ. ಕಾರ್ಲೋತ್ಸವದ ಕಾರ್ಯಕ್ರಮಕ್ಕೆ ತಡೆ ಮಾಡುವ ಪ್ರಯತ್ನ ಪಟ್ಟು ಕೈ ಸುಟ್ಟುಕೊಂಡಿರುವ ಬಿಜೆಪಿ‌ ನಾಯಕರ ಮಾನ‌ ಬೀದಿ ಪಾಲಾಗಿದೆ. ಎರಡನೇ ಸಾಲಿನ ನಾಯಕರು ಬೆಳೆದರೆ ನಮಗೆ ಕಷ್ಟ ಎಂದು ತನ್ನ ಪಕ್ಷ ಅಧಿಕಾರಕ್ಕೆ ಬರಲು ಹಗಲು ರಾತ್ರಿ ದುಡಿದ ಪಕ್ಷದ ಹಿರಿಯ, ಕಿರಿಯ ನಾಯಕರು ಮತ್ತು ಸಾರ್ವಜನಿಕರ ಸಹಕಾರದಲ್ಲಿ ಅಯೋಜಿಸಿದ್ದ ಕಾರ್ಲೋತ್ಸವಕ್ಕೆ ಎಷ್ಟೆಲ್ಲಾ ತಡೆ ನೀಡಿದ್ದರು ಎನ್ನುವುದು ಎಲ್ಲರಿಗೆ ತಿಳಿದಿರುವ ವಿಚಾರ. ಈ ಕಾರ್ಯಕ್ರಮಕ್ಕೆ ತಡೆಯೊಡ್ಡುವ ಮೂಲಕ ಮನೆಯವರನ್ನೆ ಪರಸ್ಪರ ಎತ್ತಿ ಕಟ್ಟುವ ಪ್ರಯತ್ನ ಮಾಡಿರುವುದೂ ಗುಟ್ಟಾಗಿ ಉಳಿದಿಲ್ಲ ಎಂದರು.

ಕಾರ್ಯಕ್ರಮ ಯಾವುದೇ ಆಗಿರಲಿ, ಯಾರೇ ಮಾಡಿರಲಿ ಅದರ ಹಿಂದೆ ಅನೇಕರ ಶ್ರಮವಿದೆ. ಅದನ್ನು ಅರ್ಧಕ್ಕೆ ನಿಲ್ಲಿಸುವ ಪ್ರಯತ್ನವನ್ನು ಶತ್ರುಗಳು ಮಾಡಬಾರದು. ಆದರೆ ಬಿಜೆಪಿಯ ಕೆಲ ನಾಯಕರಿಂದ ಅದಕ್ಕೆ ತಡೆಯಾದಾಗ ಕಾಂಗ್ರೆಸ್ ಪಕ್ಷವು ಆಯೋಜಕರ ಬೆನ್ನಿಗೆ ನಿಂತು ಕಾರ್ಯಕ್ರಮ ಸಾಂಗವಾಗಿ ನೆರವೇರಲು ಸಹಕಾರ ಮಾಡಿದೆ ಎನ್ನುವುದನ್ನು ಶಾಸಕರು ಮತ್ತು ಕ್ಷೇತ್ರಾಧ್ಯಕ್ಷರು ನೆನಪು‌ ಮಾಡಿಕೊಳ್ಳಲಿ ಎಂದು ಶುಭದರಾವ್ ತಿಳಿಸಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X