Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಕ್ಕಳ ಸುರಕ್ಷತೆಗೆ ನೀತಿ-ನಿಯಮಗಳು...

ಮಕ್ಕಳ ಸುರಕ್ಷತೆಗೆ ನೀತಿ-ನಿಯಮಗಳು ತಳಮಟ್ಟದಲ್ಲಿ ಜಾರಿಯಾಗಲಿ: ತಿಪ್ಪೇಸ್ವಾಮಿ ಕೆ.ಟಿ.

ವಾರ್ತಾಭಾರತಿವಾರ್ತಾಭಾರತಿ21 Jan 2026 9:39 PM IST
share
ಮಕ್ಕಳ ಸುರಕ್ಷತೆಗೆ ನೀತಿ-ನಿಯಮಗಳು ತಳಮಟ್ಟದಲ್ಲಿ ಜಾರಿಯಾಗಲಿ: ತಿಪ್ಪೇಸ್ವಾಮಿ ಕೆ.ಟಿ.
ಪೋಕ್ಸೋ ಕಾಯ್ದೆ ಹಾಗೂ ಬಾಲನ್ಯಾಯ ಕಾಯ್ದೆ ತರಬೇತಿ

ಉಡುಪಿ, ಜ.21: ಸರಕಾರ ಮಕ್ಕಳ ರಕ್ಷಣೆಗಾಗಿ ಜಾರಿಗೆ ತಂದಿರುವ ನೀತಿ ನಿಯಮಾವಳಿಗಳನ್ನು ತಳಮಟ್ಟದಲ್ಲಿ ಪ್ರತಿಶತಃ ನೂರರಷ್ಟು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ. ಹೇಳಿದ್ದಾರೆ.

ಇಂದು ಮಣಿಪಾಲದ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಪೋಕ್ಸೋ ಕಾಯ್ದೆ ಹಾಗೂ ಬಾಲನ್ಯಾಯ ಕಾಯ್ದೆ ಕುರಿತು ಮಕ್ಕಳು ಹಾಗೂ ಮಕ್ಕಳ ರಕ್ಷಣಾಧಿಕಾರಿಗಳಿಗೆ ನಡೆದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮಕ್ಕಳು ಶಾಲೆಗೆ ಬಂದು ಮರಳಿ ಮನೆಗೆ ಹೋಗುವವರೆಗೆ ಶಿಕ್ಷಕರು ಅವರ ಕಾನೂನಾತ್ಮಕ ಪೋಷಕರಾಗಿರು ತ್ತಾರೆ. ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಮಕ್ಕಳ ಸುರಕ್ಷತೆಯ ಬಗ್ಗೆಯೂ ಗಮನಹರಿಸಬೇಕು. ಮಕ್ಕಳ ಸುರಕ್ಷತೆ ತುರ್ತು ಆದ್ಯತೆಯ ವಿಷಯ. ಮಕ್ಕಳ ರಕ್ಷಣಾ ನೀತಿಯನ್ನು ಪರಿಣಾಮಕಾರಿ ಯಾಗಿ ಅನುಷ್ಠಾನಗೊಳಿಸಲು ಈ ತರಬೇತಿ ಸಹಕಾರಿ ಎಂದರು.

ಮಕ್ಕಳ ರಕ್ಷಣಾಧಿಕಾರಿಗಳಿಗೆ ಬಾಲ ನ್ಯಾಯ ಕಾನೂನಿನ ಅರಿವು ಇರಬೇಕು. ಪ್ರಾಯೋಗಿಕವಾಗಿ ಕೆಲವು ಜಿಲ್ಲೆಗಳಲ್ಲಿ ಪ್ರಾರಂಭಿಸಲಾದ ತರಬೇತಿ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಇಡೀ ರಾಜ್ಯಕ್ಕೆ ವಿಸ್ತರಿಸಲಾ ಗುವುದು. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಕ್ಕಳ ರಕ್ಷಣಾ ಕಾನೂನು ಅನುಷ್ಠಾನ ಉತ್ತಮವಾಗಿದೆ ಎಂದ ಅವರು ಮುಂದಿನ ವಷರ್ದಿಂದ ಶಾಲಾ-ಕಾಲೇಜುಗಳಲ್ಲಿ ನಿಯಮಿತವಾಗಿ ಇಂತಹ ತರಬೇತಿ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಬೇಕು ಎಂದರು.

ರಾಜ್ಯ ಸರಕಾರ ಮಕ್ಕಳ ರಕ್ಷಣಾ ನೀತಿ 2016ಕ್ಕೆ ತಿದ್ದುಪಡಿ ತಂದು 2023 ರಲ್ಲಿ ಪರಿಷ್ಕಿರಿಸಿ ಇದನ್ನು ರಾಜ್ಯ ದಾದ್ಯಂತ ಅನುಷ್ಠಾಾನಗೊಳಿಸಿದೆ. ಈ ನೀತಿ ಮಕ್ಕಳಿಗೆ ಕಡ್ಡಾಯ ಶಿಕ್ಷಣ, ಆರೋಗ್ಯ ಮತ್ತು ಸುರಕ್ಷತೆ, ಅಪರಾಧ ತಡೆಗಟ್ಟುವುದು ಮತ್ತು ಬಾಲ ನ್ಯಾಯ ಕಾಯ್ದೆ 2015ರ ಅಂಶಗಳನ್ನು ಒಳಗೊಂಡಿದೆ ಎಂದರು.

ಈ ನೀತಿಯನ್ವಯ ರಾಜ್ಯದ 31 ಜಿಲ್ಲೆಗಳ ಎಲ್ಲಾ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಆಯಾ ಶಾಲೆಯ ಒಬ್ಬ ಶಿಕ್ಷಕ ಮತ್ತು ಇಬ್ಬರು ವಿದ್ಯಾರ್ಥಿಗಳನ್ನು ಮಕ್ಕಳ ರಕ್ಷಣಾಧಿಕಾರಿಯಾಗಿ ನೇಮಿಸಲಾಗುವುದು. ಸರಕಾರ ರೂಪಿಸುವ ನೀತಿಗಳು ತಳಮಟ್ಟದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು ಎನ್ನುವ ಉದ್ದೇಶದಿಂದ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಾ.ತಿಪ್ಪೇಸ್ವಾಮಿ ನುಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ವಕೀಲ ವೈ.ಟಿ ರಾಘವೇಂದ್ರ ಬಾಲ ನ್ಯಾಯ ಕಾಯ್ದೆ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಚಂದ್ರಶೇಖರ್, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಉಪನಿರ್ದೇಶಕ ಮಾರುತಿ, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಎಲ್ಲಮ್ಮ, ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಉಪಸ್ಥಿತರಿದ್ದರು.


Tags

ruleschild safetyimplementgrassroot
share
ವಾರ್ತಾಭಾರತಿ
ವಾರ್ತಾಭಾರತಿ
Next Story
X