Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಚುನಾವಣೆಯಲ್ಲಿ ಮಾತ್ರ ರಾಜಕೀಯ,...

ಚುನಾವಣೆಯಲ್ಲಿ ಮಾತ್ರ ರಾಜಕೀಯ, ಅಭಿವೃದ್ಧಿಗಿಲ್ಲ: ಸಚಿವೆ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ26 Jan 2026 1:59 PM IST
share
ಚುನಾವಣೆಯಲ್ಲಿ ಮಾತ್ರ ರಾಜಕೀಯ, ಅಭಿವೃದ್ಧಿಗಿಲ್ಲ: ಸಚಿವೆ ಹೆಬ್ಬಾಳ್ಕರ್

ಬೈಂದೂರು, ಜ.26: ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡಬೇಕು. ಉಳಿದ ಸಮಯದಲ್ಲಿ ಅಭಿವೃದ್ಧಿ ಕಡೆಗಷ್ಟೆ ಗಮನ ಹರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೈಂದೂರು ಉತ್ಸವದಲ್ಲಿ ರವಿವಾರ ಭಾಗವಹಿಸಿ ಅವರು ಮಾತನಾಡುತಿದ್ದರು. ಅಭಿವೃದ್ಧಿ ವಿಚಾರದಲ್ಲಿ ನಾನು ಎಂದಿಗೂ ರಾಜಕಾರಣ ಮಾಡಿಲ್ಲ, ಮಾಡುವುದೂ ಇಲ್ಲ, ಅಭಿವೃದ್ಧಿಗಷ್ಟೇ ಆದ್ಯತೆ ನೀಡುತ್ತೇನೆ ಎಂದು ಅವರು ತಿಳಿಸಿದರು.

ಮಹಾತ್ಮ ಗಾಂಧಿ ಹೇಳಿದಂತೆ, ಭಾರತದ ಹಳ್ಳಿಗಳ ದೇಶ. ಹಳ್ಳಿಗಳು ಅಭಿವೃದ್ಧಿಯಾಗಬೇಕು, ಮಹಿಳೆಯರು ಸಬಲೀಕರಣ ಆಗಬೇಕು ಎಂದ ಅವರು, ನಾವು ಜನಪ್ರತಿನಿಧಿಗಳಾಗಿ ಸಾಮಾಜಿಕ ದೃಷ್ಟಿಯಿಂದ ನೋಡಬೇಕು, ಸಾಮಾಜಿಕ ಕಾಳಜಿ, ಬದ್ಧತೆ ಕೆಲಸ ಮಾಡಬೇಕು. ಚುನಾವಣೆ ಸಂದರ್ಭದಲ್ಲಿ ರಾಜಕೀಯ ಮಾಡಿ, ಉಳಿದ ಸಮಯದಲ್ಲಿ ಅಭಿವೃದ್ಧಿಗೆ ಗಮನಹರಿಸಬೇಕು ಎಂದರು.

ಈ ಸಂದರ್ಭದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಮೋಹನ್ ಆಳ್ವ, ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ, ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್, ಎಎಸ್ಪಿ ಸುಧಾಕರ್ ನಾಯ್ಕ್, ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಮೊದಲಾದವರು ಉಪಸ್ಥಿತರಿದ್ದರು.

‘ಸಿದ್ದರಾಮಯ್ಯ ನೇತೃತ್ವದ ನಮ್ಮ ಸರಕಾರ, ಮಹಿಳೆಯರ ಸಬಲೀಕರಣ ಕ್ಕಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಗೃಹಲಕ್ಷ್ಮಿ, ಶಕ್ತಿ, ಗೃಹ ಜ್ಯೋತಿ ಯೋಜನೆಗಳಿಂದ ಮಹಿಳೆಯರಿಗೆ ಸಾಕಷ್ಟು ಪ್ರಯೋಜನ ಆಗಿದೆ. ನಮ್ಮ ಇಲಾಖೆಯಿಂದ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಮುಂದುವರಿದ ಭಾಗವಾಗಿ ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್, ಗೃಹಲಕ್ಷ್ಮಿ ಡಿಜಿಟಲ್ ಆ್ಯಪ್ ಶೀಘ್ರವೆ ಜಾರಿಗೆ ಬರಲಿವೆ’

-ಲಕ್ಷ್ಮೀ ಹೆಬ್ಬಾಳ್ಕರ್, ಸಚಿವರು

ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ

ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಬರುವ ಗ್ರಾಮೀಣ ಪ್ರದೇಶವನ್ನು ಪಂಚಾಯತ್ ಆಗಿ ರಚನೆ ಮಾಡುವಂತೆ ಆಗ್ರಹಿಸಿ ತಾಲೂಕು ಕಚೇರಿ ಆವರಣದಲ್ಲಿ ಬೈಂದೂರು ತಾಲೂಕು ರೈತ ಸಂಘದ ವತಿಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಸಚಿವರು ಭೇಟಿ ನೀಡಿ ಮನವಿ ಸ್ವೀಕರಿಸಿದರು.

ರೈತರಿಗೆ ಅನ್ಯಾಯ ಆಗದಂತೆ ಕ್ರಮಕೈಗೊಳ್ಳಲಾಗುವುದು, ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Tags

PoliticselectionsMinister Hebbalkar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X