Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಾಲಿನ್ಯ ನಿಯಂತ್ರಣ ಪ್ರತಿಯೊಬ್ಬ ನಾಗರಿಕರ...

ಮಾಲಿನ್ಯ ನಿಯಂತ್ರಣ ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯ: ಉಡುಪಿ ಸಿ.ಇ.ಓ

ವಾರ್ತಾಭಾರತಿವಾರ್ತಾಭಾರತಿ10 Nov 2023 9:39 PM IST
share
ಮಾಲಿನ್ಯ ನಿಯಂತ್ರಣ ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯ: ಉಡುಪಿ ಸಿ.ಇ.ಓ

ಉಡುಪಿ, ನ.10: ಮಾಲಿನ್ಯ ನಿಯಂತ್ರಣ ಮಾಡುವುದರೊಂದಿಗೆ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಉತ್ತಮವಾಗಿ ಇಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕರ ಆದ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಹೇಳಿದ್ದಾರೆ.

ಮಣಿಪಾಲದಲ್ಲಿರುವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರಿಗೆ ಇಲಾಖೆ ವತಿಯಿಂದ ಇಂದು ನಡೆದ ವಾಯು ಮಾಲಿನ್ಯ ನಿಯಂತ್ರಣ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ವಾಯು ಗುಣಮಟ್ಟ ಉತ್ತಮವಾಗಿದೆ. ಇದಕ್ಕೆ ಮುಖ್ಯ ಕಾರಣ ಇಲ್ಲಿನ ಪರಿಸರದಲ್ಲಿರುವ ಗಿಡ-ಮರಗಳಾಗಿವೆ. ಇವುಗಳನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿ. ನಾನು ಈ ಹಿಂದೆ ಹೊಸದಿಲ್ಲಿ ಯಲ್ಲಿ ಕಾರ್ಯನಿರ್ವಹಿಸುವಾಗ ಅಲ್ಲಿನ ವಾಯು ಮಾಲಿನ್ಯ ಎಷ್ಟಿತ್ತೆಂದರೆ ಮನೆಯಿಂದ ಹೊರಗೆ ಬಂದರೆ ಕಣ್ಣುರಿ ಉಂಟಾ ಗುತ್ತಿತ್ತು. ಕೆಲವರಿಗೆ ಉಸಿರಾಡಲು ತೊಂದರೆಯಾಗುತ್ತಿತ್ತು. ಇದಕ್ಕೆಲ್ಲಾ ಕಾರಣ ವಾಹನಗಳು ಹೊರಸೂಸುವ ಹೊಗೆ ಹಾಗೂ ನೆರೆಯ ಪಂಜಾಬ್ ಹಾಗೂ ಹರಿಯಾಣದಲ್ಲಿ ಕೊಳೆ ಸುಡುವ ಪರಿಪಾಠ ಎಂದರು.

ಕಳೆದ ಜೂನ್ ತಿಂಗಳಲ್ಲಿ ಸರಕಾರ ಒಂದು ಕೋಟಿಗೂ ಹೆಚ್ಚು ಗಿಡ- ಮರಗಳನ್ನು ನೆಟ್ಟಿದೆ. ಇದು ಪರಿಸರ ಸಂರಕ್ಷಣೆಗೆ ಸಹಕಾರಿಯಾಗಲಿದೆ. ಗಿಡ-ಮರಗಳ ಬೆಳೆಸುವುದರಿಂದ ವಾಯು ಮಾಲಿನ್ಯವನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ವಾಯು ಮಾಲಿನ್ಯ ಹಾಗೂ ಪರಿಸರ ಮಾಲಿನ್ಯಕ್ಕೆ ಶಿಕ್ಷಿತರು ಹಾಗೂ ಶ್ರೀಮಂತರೇ ಮುಖ್ಯ ಕಾರಣ. ಬಡಗುಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಣಿಪಾಲದ ಕೆಲವು ಶಿಕ್ಷಿತರು ತಮ್ಮ ಮನೆಯ ಕಸವನ್ನು ಕಸ ಸಂಗ್ರಹಣಾಗಾರರಿಗೆ ನೀಡದೇ, ಕಸವನ್ನು ಸುಡುತ್ತಿರುವುದು ಪರಿಸರ ಮಾಲಿನ್ಯಕ್ಕೆ ಕಾರಣವಾಗಿದೆ. ಕೆಲವು ಶ್ರೀಮಂತರು ಬೆಳಗಿನ ವಾಯುವಿಹಾರಕ್ಕೆ ಜಿಲ್ಲಾ ಆಟದ ಮೈದಾನಕ್ಕೆ ವಾಹನಗಳಲ್ಲಿ ಬಂದು ಅಲ್ಲಿನ ಜಿಮ್‌ನಲ್ಲಿ ಥ್ರೆಡ್‌ಮಿಲ್‌ಗಳನ್ನು ಬಳಸುತ್ತಾರೆ. ವಾಹನಗಳಲ್ಲಿ ಬರುವ ಬದಲು ಅವರು ಮನೆಯಿಂದಲೇ ನಡೆದು ಬಂದರೆ ವಾಹನದಿಂದ ಹೊರಸೂಸುವ ಹೊಗೆ ಯನ್ನು ನಿಯಂತ್ರಿಸಿ, ಮಾಲಿನ್ಯ ಕಡಿಮೆಗೊಳಿಸಬಹುದು ಎಂದರು.

ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಬಿ ಮಾತನಾಡಿ, ಇತ್ತೀಚೆಗೆ ವಾಯು ಮಾಲಿನ್ಯದಿಂದ ಹವಾಮಾನ ಬದಲಾವಣೆ ಸೇರಿದಂತೆ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಇದರ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಮುಂದಾಗುವ ಮೂಲಕ ಪರಿಸರಕ್ಕೆ ಕೊಡುಗೆ ನೀಡಬೇಕು ಎಂದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಪಿ. ರವಿಶಂಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತುತ ದೆಹಲಿಯ ವಾಯು ಮಾಲಿನ್ಯ ಸೂಚ್ಯಂಕವು 400ರ ಗಡಿ ದಾಟಿದ್ದು, ಗಂಭೀರ ಸ್ಥಿತಿ ಪರಿಣಮಿಸಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹೀಗಾಗದಂತೆ ಜಾಗೃತರಾಗುವುದು ಅತಿಅಗತ್ಯ ಎಂದರು.

ಕಾರ್ಯಕ್ರಮದಲ್ಲಿ ದಂತ ವೈದ್ಯ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಘಟಕದ ಮುಖ್ಯಸ್ಥ ಡಾ.ವಿಜಯೇಂದ್ರ, ಕರಾವಳಿ ಬಸ್ಸು ಮಾಲಕರ ಸಂಘದ ಜಿಲ್ಲಾ ಅಧ್ಯಕ್ಷ ರಾಘವೇಂದ್ರ ಭಟ್, ಕೆಎಸ್‌ಆರ್‌ಟಿಸಿ ಉಡುಪಿ ವಿಭಾಗ ಘಟಕದ ವ್ಯವಸ್ಥಾಪಕ ಶಿವರಾಮ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಶಾಂತರಾಜು ಸ್ವಾಗತಿಸಿ, ವಾಹನ ನಿರೀಕ್ಷಕ ಸಂತೋಷ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸರಸ್ವತಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X