ಪ್ರತಿಭಾ ಕಾರಂಜಿ: ಕೋಡಿ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಕುಂದಾಪುರ: ಕುಂದಾಪುರ ಸುಜ್ಞಾನ ಎಜುಕೇಶನ್ ಟ್ರಸ್ಟ್ ವತಿಯಿಂದ ನ.29ರಂದು ಹಮ್ಮಿಕೊಳ್ಳಲಾದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕೋಡಿ ಎಚ್.ಕೆ.ಎಂ.ಬ್ಯಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ವಿಶಿಷ್ಟ ಪ್ರತಿಭೆಯನ್ನು ಪ್ರದರ್ಶಿಸುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕವಾಲಿ ಸ್ಪರ್ಧೆಯಲ್ಲಿ ಮೊಹಮ್ಮದ್ ಝಿಫಾನ್, ಉಮರುಲ್ ಫಾರೂಕ್, ಮೊಹಮ್ಮದ್ ಶಿಹಾಬ್, ಮೊಹಮ್ಮದ್ ಅನಾಸ್, ಮೊಹಮ್ಮದ್ ಆತಿಷ್, ಮೊಹಮ್ಮದ್ ರಿಲಾ ಪ್ರಥಮ ಸ್ಥಾನವನ್ನು, ಅರೇಬಿಕ್ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಮೊಹಮ್ಮದ್ ರಿಲಾ ಪ್ರಥಮ ಸ್ಥಾನವನ್ನು, ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಸಿಮ್ರ ಪ್ರಥಮ ಸ್ಥಾನವನ್ನು, ಹಿಂದಿ ಭಾಷಣ ಸ್ಪರ್ಧೆಯಲ್ಲಿ ಆಯಿಷಾ ಮಿನ್ಹಾ ತೃತೀಯ ಸ್ಥಾನವನ್ನು ಹಾಗೂ ಜಾನಪದ ಗೀತೆಯಲ್ಲಿ ಮೌಲಾನ ಇಸ್ರಾ ತೃತೀಯ ಸ್ಥಾನವನ್ನು ಗಳಿಸುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ಯಶಸ್ವಿಗೆ ಕಾರಣರಾದ ಎಲ್ಲ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದದವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿ ಮುಂದಿನ ದಿನಗಳಲ್ಲಿ ಇನ್ನಷ್ಟು ಯಶಸ್ಸು ಗಳಿಸಲಿ ಎಂದು ಹಾರೈಸಿದ್ದಾರೆ.





