Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶೀಘ್ರವೇ 10 ಸಾವಿರ ಅಂಗನವಾಡಿಗಳಲ್ಲಿ...

ಶೀಘ್ರವೇ 10 ಸಾವಿರ ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಪ್ರಾರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ15 Aug 2025 6:54 PM IST
share
ಶೀಘ್ರವೇ 10 ಸಾವಿರ ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಪ್ರಾರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ರಾಜ್ಯದ ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ನಡೆಸಲು ಈಗಾಗಲೇ 10 ಸಾವಿರ ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದ್ದು, 4ರಿಂದ 5 ಸಾವಿರ ಅಂಗನವಾಡಿಗಳಲ್ಲಿ ಸದ್ಯದಲ್ಲಿಯೇ ತರಗತಿಗಳನ್ನು ಪ್ರಾರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲ ಅಂಗನವಾಡಿ ಕೇಂದ್ರಗಳಿಗೂ ಇದನ್ನು ವಿಸ್ತರಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಅಜ್ಜರಕಾಡಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ 79ನೇ ಜಿಲ್ಲಾ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೇರವೇರಿಸಿ, ಗೌರವ ರಕ್ಷೆ ಸ್ವೀಕರಿಸಿದ ಬಳಿಕ ಸ್ವಾತಂತ್ರ್ಯೋತ್ಸವ ದಿನ ಸಂದೇಶ ನೀಡಿ ಅವರು ಮಾತನಾಡುತಿದ್ದರು. ರಾಜ್ಯದ ಶಾಲಾ ಮಕ್ಕಳಿಗೆ ವರ್ಷಕ್ಕೊಮ್ಮೆ ಇಲಾಖೆಯಿಂದಲೇ ಆರೋಗ್ಯ ತಪಾಸಣೆ ನಡೆಸಲು ತೀರ್ಮಾನಿಸಲಾಗಿದೆ ಎಂದೂ ಅವರು ಹೇಳಿದರು.

2024-25ನೇ ಆರ್ಥಿಕ ವರ್ಷದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಅತೀ ಹೆಚ್ಚು ತಲಾ ಆದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ. ರಾಜ್ಯ ಸರಕಾರ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವ ದೃಷ್ಠಿಯಿಂದ ವಿತ್ತೀಯ ನಿರ್ವಹಣೆಯಲ್ಲಿ ತನ್ನ ಕಾರ್ಯಕ್ಷಮತೆಯನ್ನು ತೋರಿಸಿದೆ. ಜಿಎಸ್‌ಟಿ ಸಂಗ್ರಹದಲ್ಲಿ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿರುವುದು ರಾಜ್ಯದ ಅರ್ಥ ವ್ಯವಸ್ಥೆ ಆರೋಗ್ಯವಂತವಾಗಿದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆ ಎಂದವರು ತಿಳಿಸಿದರು.

ಎಲ್ಲಾ ಮಾಸಿಕ ಪಿಂಚಣಿ ಯೋಜನೆಗಳನ್ನು ಡಿಬಿಟಿ ವ್ಯಾಪ್ತಿಗೆ ತರುವು ದರೊಂದಿಗೆ ಪ್ರತಿ ತಿಂಗಳು ರಾಜ್ಯದಲ್ಲಿ ಅಂದಾಜು 82.57 ಲಕ್ಷ ಫಲಾನುಭವಿ ಗಳಿಗೆ ಆಧಾರ್ ಆಧಾರಿತ ಪಿಂಚಣಿ ವ್ಯವಸ್ಥೆ ಯೋಜನೆಯಡಿ ನೇರವಾಗಿ ಅವರ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ ಎಂದು ಹೆಬ್ಬಾಳ್ಕರ್ ತಿಳಿಸಿದರು.

ಡಿಜಿಟಲೀಕರಣ: ಕರ್ನಾಟಕ ಭೂದಾಖಲೆಗಳು ದಶಕಗಳಿಂದ ಕಗ್ಗಂಟಿ ನಲ್ಲಿದ್ದು, ಜನರು ಕಚೇರಿಗಳಿಗೆ ಅಲೆದಾಡಬೇಕಿತ್ತು. ಇದಕ್ಕೆ ಪರಿಹಾರವಾಗಿ ಈಗ ಎಲ್ಲಾ ದಾಖಲೆಗಳನ್ನು ಡಿಜಿಟಲೀಕರಣ ಮಾಡುವುದರೊಂದಿಗೆ ಸುರಕ್ಷಿತಗೊಳಿಸ ಲಾಗುತ್ತಿದೆ. ಚುನಾವಣೆ ಸಂದರ್ಭದಲ್ಲಿ ಘೋಷಿಸಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಮುಂದುವರೆಸಿಕೊಂಡು ಹೋಗುತ್ತಿರುವ ಸರಕಾರದ ಕಾರ್ಯವೈಖರಿಗೆ ದೇಶ-ವಿದೇಶಗಳ ತಜ್ಞರಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ ಎಂದು ಸಚಿವೆ ಹೇಳಿದರು.

ಬಡತನ ನಿವಾರಣೆಗೆ ನೇರ ನಗದು ನೀಡುವ ಗೃಹಲಕ್ಷ್ಮೀ ಯೋಜನೆ ಅಡಿಯಲ್ಲಿ ರಾಜ್ಯದಾದ್ಯಂತ 1.23 ಕೋಟಿ ಫಲಾನುಭವಿಗಳಿಗೆ ಈವರೆಗೆ 47,400 ಕೋಟಿ ರೂ.ಗಳನ್ನು ಜಮಾ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ 2,25,131 ಫಲಾನುಭವಿಗಳಿಗೆ 870.83 ಕೋಟಿಯಷ್ಟು ಹಣ ಸಂದಾಯ ವಾಗಿದೆ. ಅಕ್ಕ ಕೋ-ಆಪರೇಟಿವ್ ಸೊಸೈಟಿಗಳನ್ನು ಸ್ಥಾಪಿಸುವುದರೊಂದಿಗೆ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನು ಅದರ ಸದಸ್ಯರನ್ನಾಗಿ ಮಾಡಲಾಗುತ್ತಿದೆ ಎಂದರು.

ಪಶ್ಚಿಮ ವಾಹಿಗೆ 151 ಕೋಟಿ: ಪ್ರಸಕ್ತ ಸಾಲಿನಲ್ಲಿ ಕರಾವಳಿ ಭಾಗದ ಪಶ್ಚಿಮ ವಾಹಿನಿ ಯೋಜನೆಯಡಿ ಜಿಲ್ಲೆಯಲ್ಲಿ 151 ಕೋಟಿ ವೆಚ್ಚದಲ್ಲಿ ಉಪ್ಪು ನೀರು ತಡೆ ಆಣೆಕಟ್ಟು ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಇದರಿಂದ ಸುಮಾರು 192.52 ಹೆಕ್ಟೇರ್ ರೈತರ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ದೊರಕಲಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೋಮು ಹಿಂಸೆ ನಿಗ್ರಹಕ್ಕಾಗಿ ವಿಶೇಷ ಕಾರ್ಯಪಡೆ ರಚನೆ ಮಾಡಲಾಗಿದೆ ಎಂದರು.

ಜಿಲ್ಲೆಯಲ್ಲಿ ಈಗಾಗಲೇ 4 ಇಂದಿರಾ ಕ್ಯಾಂಟೀನ್‌ಗಳು ಬಡವರ ಹಸಿವನ್ನು ನೀಗಿಸುತ್ತಿದ್ದು, ಬೈಂದೂರು ಪಟ್ಟಣ ಪಂಚಾಯತ್ ಹಾಗೂ ಕಾಪು ಪುರಸಭಾ ವ್ಯಾಪ್ತಿಯಲ್ಲಿ 2 ಹೊಸ ಇಂದಿರಾ ಕ್ಯಾಂಟೀನ್‌ಗೆ ಕಳೆದ ಜೂನ್‌ನಲ್ಲಿ ಚಾಲನೆ ನೀಡಿದ್ದೇನೆ ಎಂದವರು ಸಚಿವರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬಹುಮುಖ್ಯ ಕ್ಷೇತ್ರವನ್ನಾಗಿ ರೂಪಿಸಲು ಸರಕಾರ ವಿಶೇಷ ಮುತುವರ್ಜಿ ವಹಿಸಿದೆ ಎಂದರು.

ಕಾರ್ಯಕ್ರಮದಲ್ಲಿ ಈ ವರ್ಷದ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿದ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳನ್ನು ಗೌರವಿಸಿದ ಸಚಿವರು, ಬಳಿಕ ಪಥ ಸಂಚಲನ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದ ಶಾಲಾ ತಂಡಗಳಿಗೆ ಬಹುಮಾನವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಶಾಸಕ ಯಶ್‌ಪಾಲ್ ಸುವರ್ಣ, ಉಡುಪಿ ನಗರಾಭಿ ವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಭಿದ್ ಗದ್ಯಾಳ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ನಗರದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X