Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜಿಲ್ಲಾ ಮಾನವ ಅಭಿವೃದ್ಧಿ-2025 ವರದಿಗೆ...

ಜಿಲ್ಲಾ ಮಾನವ ಅಭಿವೃದ್ಧಿ-2025 ವರದಿಗೆ ಸಿದ್ಧತೆ ಆರಂಭ: ಉಡುಪಿ ಡಿಸಿ ಸ್ವರೂಪ ಟಿ.ಕೆ

ವಾರ್ತಾಭಾರತಿವಾರ್ತಾಭಾರತಿ19 Jan 2026 8:38 PM IST
share
ಜಿಲ್ಲಾ ಮಾನವ ಅಭಿವೃದ್ಧಿ-2025 ವರದಿಗೆ ಸಿದ್ಧತೆ ಆರಂಭ: ಉಡುಪಿ ಡಿಸಿ ಸ್ವರೂಪ ಟಿ.ಕೆ

ಉಡುಪಿ, ಜ.19: ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಪ್ರಮುಖ ದಾಖಲೆಯಾಗಿರುವ ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031ರ ವರದಿ ತಯಾರಿಗೆ ಸಿದ್ಧತೆಗಳು ಪ್ರಾರಂಭಗೊಂಡಿವೆ. ಈ ವರದಿ ಸಿದ್ಧ ಪಡಿಸಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ನಿಖರ ದತ್ತಾಂಶ ವನ್ನು ಕಾಲಮಿತಿಯೊಳಗೆ ಒದಗಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ನಿರ್ದೇಶನ ನೀಡಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್‌ನ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಇಂದು ನಡೆದ ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 ವರದಿಯನ್ನು ಸಿದ್ಧಪಡಿಸುವ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯ ಸಮಗ್ರ ಮಾಹಿತಿಗಳು, ದತ್ತಾಂಶಗಳು ನಿಖರವಾಗಿ, ಒಂದೇ ಕಡೆ ದೊರೆಯುವ ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ-2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031ರ ವರದಿ ಅತೀ ಪ್ರಮುಖ ದಾಖಲೆಯಾಗಿರುತ್ತದೆ. ಇದರ ತಯಾರಿಯಲ್ಲಿ ಎಲ್ಲಾ ಇಲಾಖಾಧಿಕಾರಿಗಳು ಇದರ ತಯಾರಿಕೆಯ ಪ್ರಕ್ರಿಯೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕ್ಲಪ್ತ ಸಮಯದಲ್ಲಿ ಒದಗಿಸುವುದರೊಂದಿಗೆ ಗ್ರಾಮ ಪಂಚಾಯತ್ ಹಂತದಿಂದಲೇ ಮಾನವ ಅಭಿವೃದ್ಧಿಗೆ ಒತ್ತು ನೀಡುವಂತಿರಬೇಕು ಎಂದರು.

ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 ವರದಿಗಾಗಿ ಹಲವು ಅಂಶಗಳ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ. ಶಿಕ್ಷಣ, ಆರೋಗ್ಯ, ಪೋಷಣಾಸ್ಥಿತಿ, ಮೂಲಸೌಕರ್ಯ, ಸಾಮಾಜಿಕ ಒಳಗೊಳ್ಳುವಿಕೆ ಹಾಗೂ ಪರಿಸರದ ಸುಸ್ಥಿರತೆ ಸೇರಿದಂತೆ ವಿವಿಧ ಮಾನವ ಅಭಿವೃದ್ಧಿ ಸೂಚ್ಯಂಕಗಳ ಆಧಾರದಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ಸಾಧಿಸುವುದು ಈ ವರದಿಗಳ ಪ್ರಮುಖ ಗುರಿಯಾಗಿದೆ ಎಂದು ಸ್ವರೂಪ ಟಿ.ಕೆ. ತಿಳಿಸಿದರು.

ಅಧಿಕಾರಿಗಳು, ದತ್ತಾಂಶ ಸಂಗ್ರಹ, ವಿಶ್ಲೇಷಣೆ, ಇಲಾಖಾವಾರು ಸಹಕಾರದೊಂದಿಗೆ ಎಲ್ಲಾ ಮಾಹಿತಿಗಳನ್ನು ಸಂಬಂಧಿತರಿಗೆ ಒದಗಿಸಬೇಕು. ಜಿಲ್ಲೆಯ ಸಮಗ್ರ ಹಾಗೂ ಸಮತೋಲನೆಯ ಅಭಿವೃದ್ಧಿಗೆ ಇಲಾಖೆಗಳ ನಡುವೆ ಪರಸ್ಪರ ಸಮನ್ವಯತೆಯ ಅಗತ್ಯವಿದೆ ಎಂದವರು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 ವರದಿ ನೀಡುವಾಗ ಎಲ್ಲಾ ಇಲಾಖೆಗಳು ಸಂಬಂಧಪಟ್ಟ ಮಾಹಿತಿಯೊಂದಿಗೆ ಭಾಗವಹಿಸಬೇಕು. ಇದರೊಂದಿಗೆ ಫೀಡ್‌ಬ್ಯಾಕ್‌ಗಳನ್ನು ಸಹ ನೀಡಬೇಕು ಎಂದರು.

ಜಿಲ್ಲಾ ಮಾನವ ಅಭಿವೃದ್ಧಿ ವರದಿಗೆ ಇತ್ತೀಚೆಗೆ ಹೆಚ್ಚಿನ ಬೇಡಿಕೆ ಇದ್ದು, ಇದು ಭವಿಷ್ಯದ ಯೋಜನೆಗಳನ್ನು ರೂಪಿಸಲು ರೆಫರ್ ಮಾಡಬಹುದಾಗಿದೆ. ಈ ಸಾಲಿನ ಜಿಲ್ಲಾ ಮಾನವ ಅಭಿವೃದ್ಧಿ ವರದಿ ಭಿನ್ನವಾಗಿದ್ದು, ಸುಸ್ಥಿರ ಅಭಿವೃದ್ಧಿ ಬೆಳವಣಿಗೆ ಅಭಿವೃದ್ಧಿಗೆ ಇದು ಸಹಕಾರಿಯಾಗಲಿದೆ. ಜನಸಾಮಾನ್ಯರಿಗೆ ಅವರ ಕೈಗೆಟುವ ಹಾಗೆ ಹೆಚ್ಚಿನ ಆಯ್ಕೆಗಳಿದ್ದಲ್ಲಿ ಮಾನವ ಅಭಿವೃದ್ಧಿ ಸಾಧ್ಯವಾಗಲಿದೆ. ಶಿಕ್ಷಣ, ಆರೋಗ್ಯ ವಿಷಯಗಳಲ್ಲಿ ಜನರ ಜೀವನ ಮಟ್ಟದ ಮೇಲೆ ಅಭಿವೃದ್ಧಿಯ ಅಂಶಗಳು ಆಧಾರಿತವಾಗಿವೆ ಎಂದು ಪ್ರತೀಕ್ ಬಾಯಲ್ ನುಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಜಂಟಿ ನಿರ್ದೇಶಕ (ನಿವೃತ್ತ) ಶ್ರೀನಿವಾಸ್ ರಾವ್ ಮಾತನಾಡಿ, ಜಿಲ್ಲಾ ಮಾನವ ಅಭಿವೃದ್ಧಿ ವರದಿಗೆ ಅತ್ಯಂತ ಮಹತ್ವದ ಮೌಲ್ಯವಿದೆ. ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಅಚ್ಚುಕಟ್ಟಾಗಿ ಸ್ಪಷ್ಟ ಮಾಹಿತಿ ನೀಡಿದಲ್ಲಿ ಇದು ಜಿಲ್ಲೆಯು ಅಭಿವೃದ್ಧಿ ಹೊಂದಲು ಸಹಕಾರಿಯಾಗಲಿದೆ ಎಂದರು.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಯೋಜನೆ ರೂಪಿಸುವಾಗ ಎದುರಾಗುವ ಸಮಸ್ಯೆಗಳನ್ನು ಸಹ ತಿಳಿಸಬಹುದು. ಹೊಸ ನೂತನ ಯೋಜನೆಗಳನ್ನೂ ಸಹ ಗುರುತಿಸಿ, ಮಾಹಿತಿ ನೀಡಬಹುದು. ಜೊತೆಗೆ ವರದಿಯೊಂದಿಗೆ ಜನರನ್ನು ಆರ್ಕಸುವಂತಹ ಸ್ಥಳೀಯ ಕಲೆ, ಸಂಸ್ಕೃತಿ, ವೇಷಭೂಷಣಗಳನ್ನು ಒಳಗೊಂಡ ಛಾಯಾಚಿತ್ರಗಳನ್ನು ನೀಡಿದ್ದಲ್ಲಿ ವರದಿಗೆ ಹೆಚ್ಚಿನ ಮಹತ್ವ ದೊರೆಯಲಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಉದಯ್‌ಕುಮಾರ್, ಯೋಜನೆಯ ಅನುಷ್ಠಾನಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.




Tags

PreparationsDistrictHumanDevelopment
share
ವಾರ್ತಾಭಾರತಿ
ವಾರ್ತಾಭಾರತಿ
Next Story
X