PM Modi | ಉಡುಪಿಗೆ ಆಗಮಿಸಿದ ಪ್ರಧಾನಿ ಮೋದಿ: ರೋಡ್ ಶೋ ಆರಂಭ

ಉಡುಪಿ: ಪರ್ಯಾಯ ಪುತ್ತಿಗೆ ಮಠದಲ್ಲಿ ನಡೆಯುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ ಉಡುಪಿಗೆ ಆಗಮಿಸಿದ್ದಾರೆ.
ಭಾರತೀಯ ವಾಯುಪಡೆ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ, ಅಲ್ಲಿಂದ ವಾಯುಪಡೆಯ ಹೆಲಿಕಾಪ್ಟರ್ ನಲ್ಲಿ ಆದಿಉಡುಪಿಯಲ್ಲಿರುವ ಹೆಲಿಪ್ಯಾಡ್ ನಲ್ಲಿ ಬಂದಿಳಿದರು.
ಬಳಿಕ ಬನ್ನಂಜೆಯಿಂದ ಕಲ್ಸಂಕದವರೆಗೆ ಪ್ರಧಾನಿ ಮೋದಿ ರೋಡ್ ಶೋ ನಡೆಸಿದರು. ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನರತ್ತ ಅವರು ಕೈಬೀಸಿದರು.
Next Story







