ಪ್ರಧಾನಿ ಉಡುಪಿ ಭೇಟಿ: ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

ಉಡುಪಿ, ನ.23: ಪ್ರಧಾನಿ ನರೇಂದ್ರ ಮೋದಿ ನ.28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಪರಿಶೀಲನೆ ನಡೆಸಿದರು.
ಅಧಿಕಾರಿಗಳೊಂದಿಗೆ ಆದಿಉಡುಪಿ ಹೆಲಿಪ್ಯಾಡ್ಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಅಲ್ಲಿನ ಸುರಕ್ಷತ ಕ್ರಮ, ಕಾಮಗಾರಿಗಳನ್ನು ವೀಕ್ಷಿಸಿದರು. ಬಳಿಕ ಮಠದ ರಾಜಾಂಗಣ ಪಾರ್ಕಿಂಗ್ ಸಮೀಪ ಹಾಕಲಾದ ಚಪ್ಪರವನ್ನು ವೀಕ್ಷಿಸಿ, ಮಠದವರಿಂದ ಅಗತ್ಯ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ್, ಡಿವೈಎಸ್ಪಿ ಪ್ರಭು ಡಿ.ಟಿ., ಪೌರಾಯುಕ್ತ ಮಹಾಂತೇಶ್ ಹಂಗರಗಿ, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಇಂಜಿನಿಯರ್ ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.
Next Story





