Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಾರ್ವಜನಿಕರ ಸಮಸ್ಯೆ ಸ್ಥಳೀಯ ಮಟ್ಟದಲ್ಲಿ...

ಸಾರ್ವಜನಿಕರ ಸಮಸ್ಯೆ ಸ್ಥಳೀಯ ಮಟ್ಟದಲ್ಲಿ ಬಗೆಹರಿಸಲು ಆದ್ಯತೆ: ಬೈಂದೂರು ಜನತಾ ದರ್ಶನದಲ್ಲಿ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ21 Nov 2023 7:59 PM IST
share
ಸಾರ್ವಜನಿಕರ ಸಮಸ್ಯೆ ಸ್ಥಳೀಯ ಮಟ್ಟದಲ್ಲಿ ಬಗೆಹರಿಸಲು ಆದ್ಯತೆ: ಬೈಂದೂರು ಜನತಾ ದರ್ಶನದಲ್ಲಿ ಜಿಲ್ಲಾಧಿಕಾರಿ

ಬೈಂದೂರು, ನ.21: ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿ ಪರಿಹರಿಸಲು ಆದ್ಯತೆ ನೀಡುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ತಾಲೂಕು ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದ್ದಾರೆ.

ಬೈಂದೂರಿನ ತಾಲೂಕು ಆಡಳಿತ ಸೌಧದ ಸಭಾಭವನದಲ್ಲಿ ಮಂಗಳವಾರ ನಡೆದ ಜನತಾ ದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಜನರ ದೈನಂದಿನ ಸಾಮಾನ್ಯ ಸಮಸ್ಯೆಗಳನ್ನು ಅಧಿಕಾರಿಗಳ ಹಾಗೂ ದೂರುದಾರರ ಸಮ್ಮುಖದಲ್ಲಿ ಇತ್ಯರ್ಥಗೊಳಿಸಲು ನಿಯಮಾನುಸಾರ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಅವರು ನುಡಿದರು.

ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಗಳಿಗೆ ಅಧಿಕಾರಿಗಳು ಸಕಾಲದಲ್ಲಿ ಸ್ಪಂದಿಸಿ, ಅವರ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಮುಂದಾಗಬೇಕು ಎಂದೂ ಅವರು ತಿಳಿಸಿದರು.

ದೊಡ್ಡ ಮಟ್ಟದ ಕಾಮಗಾರಿ ಹಾಗೂ ಇನ್ನಿತರ ಸಮಸ್ಯೆಗಳನ್ನು ತಕ್ಷಣ ಬಗೆಹರಿಸಲು ಸಾಧ್ಯವಿಲ್ಲದಿರುವುದರಿಂದ ಅಂತಹ ವುಗಳನ್ನು ಸರಕಾರದ ಮಟ್ಟದಲ್ಲಿ ಬಗೆಹರಿಸಲು ಸಂಬಂಧಪಟ್ಟ ಇಲಾಖೆಗೆ ಸಲ್ಲಿಸಲಾಗುವುದು. ಇದಕ್ಕಾಗಿ ಪೋರ್ಟಲ್ ಒಂದನ್ನು ತೆರೆಯಲಾಗಿದ್ದು, ಸಾರ್ವಜನಿಕರ ಮನವಿಗಳನ್ನು ಅದರಲ್ಲಿ ದಾಖಲಿಸಿ, ಅವರ ಸಮಸ್ಯೆಗಳಿಗೆ ಪರಿಹಾರವನ್ನು ಅದರಲ್ಲಿಯೇ ಅಳವಡಿಸಲಾಗುತ್ತಿದೆ ಎಂದರು.

ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಪಟ್ಟ ಅರ್ಜಿಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡು ವಂತೆ ಹಾಗೂ ಇಲಾಖೆಯ ಎಲ್ಲಾ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುವಂತೆ ಅವರು ಕಿವಿಮಾತು ಹೇಳಿದರು.

ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಮಾತನಾಡಿ, ಜನರ ಬಳಿಗೆ ಅಧಿಕಾರಿಗಳು, ಜನರ ಬಳಿಗೆ ಅಧಿಕಾರ ಎಂಬ ಕಲ್ಪನೆಯೊಂದಿಗೆ ಸಮಸ್ಯೆಗಳನ್ನು ಹೊತ್ತು ತರುವ ಸಾರ್ವಜನಿಕರನ್ನು, ಅಧಿಕಾರಿಗಳ ಬಳಿ ಹಾಗೂ ಕಚೇರಿಗಳಿಗೆ ಅಲೆದಾಡಿಸದೇ ಅವರ ಸಮಸ್ಯೆಗಳಿಗೆ ಶೀಘ್ರವಾಗಿ ಪರಿಹಾರ ದೊರೆಯುವುದರೊಂದಿಗೆ ಯೋಜನೆ ಯಶಸ್ವಿಯಾಗಲಿ ಎಂದರು.

ಇಂದಿನ ಜನತಾ ದರ್ಶನ ಕಾರ್ಯಕ್ರಮದಲ್ಲಿ ಒಟ್ಟು 171 ಅರ್ಜಿಗಳು ಬಂದಿದ್ದು, ಹೆಚ್ಚಾಗಿ ಕಂದಾಯ ಇಲಾಖೆ, ಗ್ರಾಮೀಣಾ ಭಿವೃದ್ಧಿ ಇಲಾಖೆ, ಭೂ ದಾಖಲೆಗಳ ಇಲಾಖೆ, ಮೆಸ್ಕಾಂ, ಅರಣ್ಯ ಇಲಾಖೆಗಳಿಗೆ ಅರ್ಜಿಗಳು ಬಂದಿವೆ. ಇತರೆ ಇಲಾಖೆ ಗಳಿಗೆ ಕಡಿಮೆ ಸಂಖ್ಯೆಯ ಅರ್ಜಿಗಳು ಬಂದಿದ್ದವು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಡಾ. ಅರುಣ್ ಕೆ, ಕುಂದಾಪುರ ಉಪಭಾಗಾಧಿಕಾರಿ ರಶ್ಮಿ ಎಸ್, ತಾಲೂಕು ತಹಶೀಲ್ದಾರ್ ಪ್ರದೀಪ್ ಆರ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X