Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾಂಗ್ರೆಸ್ ನಾಯಕರ ಸಾಮಾಜಿಕ ಜಾಲತಾಣ ಖಾತೆ...

ಕಾಂಗ್ರೆಸ್ ನಾಯಕರ ಸಾಮಾಜಿಕ ಜಾಲತಾಣ ಖಾತೆ ನಿರ್ಬಂಧ ವಿರೋಧಿಸಿ ಪ್ರತಿಭಟನೆ

ನಝೀರ್ ಪೊಲ್ಯ/ವಾರ್ತಾಭಾರತಿನಝೀರ್ ಪೊಲ್ಯ/ವಾರ್ತಾಭಾರತಿ27 Nov 2026 7:01 PM IST
share
ಕಾಂಗ್ರೆಸ್ ನಾಯಕರ ಸಾಮಾಜಿಕ ಜಾಲತಾಣ ಖಾತೆ ನಿರ್ಬಂಧ ವಿರೋಧಿಸಿ ಪ್ರತಿಭಟನೆ

ಉಡುಪಿ, ನ.27: ಕಾಂಗ್ರೆಸ್ ನಾಯಕರ ಸಾಮಾಜಿಕ ಜಾಲತಾಣ ಖಾತೆಗಳನ್ನು ನಿರ್ಬಂಧಿಸುವ ಮೂಲಕ ಮೆಟಾ ಸಂಸ್ಥೆ ರಾಜಕೀಯ ಪ್ರೇರಿತವಾಗಿ ವರ್ತಿಸುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಶುಕ್ರವಾರ ನಗರದ ಬ್ರಹ್ಮಗಿರಿಯ ಕಾಂಗ್ರೆಸ್ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಸಾಮಾಜಿಕ ಜಾಲತಾಣ ಗಳು ಸಮಾಜದ ಎಲ್ಲ ವರ್ಗಗಳ ಧ್ವನಿಯಾಗಬೇಕೇ ಹೊರತು, ಯಾವುದೇ ರಾಜಕೀಯ ಪಕ್ಷದ ಮುಖವಾಣಿ ಯಾಗಬಾರದು. ಆದರೆ, ಮೆಟಾ ಸಂಸ್ಥೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಏಜೆಂಟ್‌ನಂತೆ ವರ್ತಿಸುತ್ತಿದೆ. ಕಾಂಗ್ರೆಸ್‌ನ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಬಿಜೆಪಿ ವಿರುದ್ಧ ಧ್ವನಿ ಎತ್ತುವವರ ಅಭಿಪ್ರಾಯಗಳಿಗೆ ಕಡಿವಾಣ ಹಾಕಲಾಗುತ್ತಿದೆ. ಮೆಟಾ ಸಂಸ್ಥೆ ಬಿಜೆಪಿ ಬೇಟಾ’ ಆಗಿ ಕೆಲಸ ಮಾಡುತ್ತಿರುವುದು ದುರದೃಷ್ಟಕರ ಎಂದು ಆರೋಪಿಸಿದರು.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ಮಾತನಾಡಿ, ಯುವ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ನಿರ್ಬಂಧಿಸಲಾಗಿದೆ. ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ಧ್ವನಿ ಎತ್ತುವ ನಾಯಕರ ವಿಡಿಯೊ ಮತ್ತು ಬರಹಗಳನ್ನು ಅಳಿಸಲಾಗುತ್ತಿದೆ. ಬಳಿಕ ಅವರ ಖಾತೆಗಳನ್ನೇ ಸ್ಥಗಿತಗೊಳಿಸುವ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಕೆಲಸವನ್ನು ಮೆಟಾ ಸಂಸ್ಥೆ ಮಾಡುತ್ತಿದೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಸುರೇಶ್ ಶೆಟ್ಟಿ ಬನ್ನಂಜೆ, ನವೀನ್ ಸಾಲಿಯಾನ್, ಡಾ. ಸುನೀತಾ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Tags

ProtestrestrictionCongressleaderssocial media
share
ನಝೀರ್ ಪೊಲ್ಯ/ವಾರ್ತಾಭಾರತಿ
ನಝೀರ್ ಪೊಲ್ಯ/ವಾರ್ತಾಭಾರತಿ

ನಝೀರ್ ಪೊಲ್ಯ ಅವರು ಕಳೆದ 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದಾರೆ. ಉಡುಪಿಯಲ್ಲಿ ಸಂಜೆ ಪತ್ರಿಕೆಯಲ್ಲಿ ಮಾಧ್ಯಮ ವೃತ್ತಿ ಆರಂಭಿಸಿದ ಇವರು, ಒಂದೂವರೆ ವರ್ಷಗಳ ಕಾಲ ಸ್ಥಳೀಯ ಖಾಸಗಿ ಸುದ್ದಿ ವಾಹಿನಿಯಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಕಳೆದ 20 ವರ್ಷಗಳಿಂದ ವಾರ್ತಾಭಾರತಿ ಪತ್ರಿಕೆಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇವರ ಹವ್ಯಾಸ ಚಿಟ್ಟೆಗಳ ಬಗ್ಗೆ ಅಧ್ಯಯನ ಹಾಗೂ ವನ್ಯಜೀವಿಗಳ ಬಗ್ಗೆ ವಿಶೇಷ ಆಸಕ್ತಿ. ಅದರೊಂದಿಗೆ ಫೋಟೋಗ್ರಫಿ ಕೂಡ ಇವರ ಆಸಕ್ತಿಯ ಕ್ಷೇತ್ರ. ಈವರೆಗೆ 250 ಪ್ರಬೇಧದ ಚಿಟ್ಟೆಗಳ ಛಾಯಾಚಿತ್ರವನ್ನು ಇವರು ಸಂಗ್ರಹಿಸಿದ್ದಾರೆ. ಇವರು ಕರ್ನಾಟಕ ಬ್ಯಾರಿ ಅಕಾಡೆಮಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು

Next Story
X