ಮುಂದುವರೆದ ಕೊರಗರ ಧರಣಿ: ಗ್ಯಾರಂಟಿ ಸಮಿತಿ ಭೇಟಿ

ಉಡುಪಿ, ಡಿ.30: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ(ಕರ್ನಾಟಕ- ಕೇರಳ)ದ ವತಿಯಿಂದ ಕೊರಗ ಸಮುದಾಯದ ಯುವಜನರಿಗೆ ಉದ್ಯೋಗ ಭದ್ರತೆ, ನೇರ ನೇಮಕಾತಿಗೆ ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ 16ನೆ ದಿನವಾದ ಮಂಗಳವಾರವೂ ಮುಂದುವರೆದಿದೆ.
ಈ ಹಿನ್ನೆಲೆಯಲ್ಲಿ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಧರಣಿ ಸ್ಥಳಕ್ಕೆ ಭೇಟಿ ನೀಡಿ, ಧರಣಿನಿರತರ ಅಹವಾಲು ಆಲಿಸಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ತಾಲೂಕು ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್, ಉಡುಪಿ ತಾಲೂಕು ಸಮಿತಿ ಅಧ್ಯಕ್ಷೆ ಸುನೀತಾ ಶೆಟ್ಟಿ ಬ್ರಹ್ಮಾವರ, ಪ್ರಮುಖರಾದ ಪ್ರಶಾಂತ್ ಜತ್ತನ್, ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತಿ ಉಪಾಧ್ಯಕ್ಷ ಸತೀಶ್ ಜಪ್ತಿ, ಜಿಲ್ಲಾ ಸದಸ್ಯ ಮಂಜುನಾಥ ಕುಲಾಲ್, ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಸುಶೀಲಾ ನಾಡ ಮೊದಲಾದವರು ಉಪಸ್ಥಿತರಿದ್ದರು.
Next Story





