Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ ಮಳೆ-ಬೆಳೆ ಹಾನಿಗಳ...

ಉಡುಪಿ ಜಿಲ್ಲೆಯಲ್ಲಿ ಮಳೆ-ಬೆಳೆ ಹಾನಿಗಳ ನಿಖರ ಮಾಹಿತಿಗಳ ವರದಿ ನೀಡಿ: ಡಿಸಿ ಸ್ವರೂಪ ಟಿ.ಕೆ. ಸೂಚನೆ

ವಾರ್ತಾಭಾರತಿವಾರ್ತಾಭಾರತಿ6 Aug 2025 7:51 PM IST
share
ಉಡುಪಿ ಜಿಲ್ಲೆಯಲ್ಲಿ ಮಳೆ-ಬೆಳೆ ಹಾನಿಗಳ ನಿಖರ ಮಾಹಿತಿಗಳ ವರದಿ ನೀಡಿ: ಡಿಸಿ ಸ್ವರೂಪ ಟಿ.ಕೆ. ಸೂಚನೆ

ಉಡುಪಿ, ಆ.6:ಈ ಬಾರಿ ಇದುವರೆಗೆ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಹಾನಿಯ ವಿವರಗಳನ್ನು ನಿಖರವಾಗಿ ನಿಗದಿತ ಕಾಲಾವಧಿಯೊಳಗೆ ಪೂರ್ಣಗೊಳಿಸಿ, ವರದಿ ನೀಡಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ, ಈ ಬಾರಿ ಮಳೆ-ಬೆಳೆ ಹಾನಿಗಳ ವಿವರ ಪರಿಶೀಲಿಸಿ ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ವಾಡಿಕೆ ಮಳೆಗಿಂತ ಹೆಚ್ಚು ಮಳೆಯಿಂದಾಗಿ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಹಾನಿಯುಂಟಾ ಗಿದೆ. ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಬೆಳೆ ಹಾನಿಯ ಜಂಟಿ ಸರ್ವೇ ಕಾರ್ಯ ಗಳನ್ನು ಯಾವುದೇ ರೀತಿಯ ವ್ಯತ್ಯಯ ಆಗದಂತೆ ನಿಖರ ಮಾಹಿತಿಯನ್ನು ಸಂಗ್ರಹಿಸಿ, ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದರು.

ಅಡಿಕೆಗೆ ಕೊಳೆ ರೋಗ: ಈ ಬಾರಿ ಅಧಿಕ ಮಳೆಯಿಂದಾಗಿ ಅಡಿಕೆ ಬೆಳೆಗೆ ಕೊಳೆ ರೋಗಗಳು ಕಂಡುಬರುತ್ತಿದೆ. ಇವುಗಳ ನಿಯಂತ್ರಣಕ್ಕೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು, ವಿಜ್ಞಾನಿಗಳು, ಸಂಶೋಧಕರನ್ನು ಒಳಗೊಂಡ ತಂಡ ರೈತರ ತೋಟಗಳಿಗೆ ಭೇಟಿ ನೀಡಿ, ರೋಗ ನಿಯಂತ್ರಣಕ್ಕೆ ಕಂಡು ಕೊಳ್ಳಬಹುದಾದ ಪರಿಹಾರ ಕ್ರಮಗಳ ಮಾಹಿತಿ ನೀಡಬೇಕು. ರೈತರಿಗೆ ಬೋರ್ಡಲಿನ್ ದ್ರಾವಣ, ಕಾಪರ್ ಸಲ್ಪೈಟ್ ಸೇರಿದಂತೆ ವಿವಿಧ ಔಷಧಿಗಳ ಸಿಂಪರಣೆಗೆ ಸಹಾಯಧನ ಒದಗಿಸಬೇಕು ಎಂದರು.

ಮಳೆಯಿಂದ ಉಂಟಾಗಿರುವ ರಸ್ತೆ ಗುಂಡಿಗಳ ದುರಸ್ಥಿ ಕೈಗೊಳ್ಳಲು ನೀಡಿರುವ ಅಂದಾಜು ಮೊತ್ತದ ಪ್ರಸ್ತಾವನೆಯು ಹೆಚ್ಚು ಇರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಅಂದಾಜು ನಷ್ಟದ ನಿಖರ ಮೌಲ್ಯವನ್ನು ಪರಿಶೀಲಿಸಿ ನೀಡಬೇಕು ಎಂದು ಸೂಚನೆ ನೀಡಿದರು.

ಎನ್‌ಡಿಆರ್‌ಎಫ್ ತಂಡಗಳು ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ಕೈಗೊಳ್ಳಬೇಕಾಗಿರುವ ಮುನ್ನೆಚ್ಚರಿಕೆ ಕಾರ್ಯಗಳ ಬಗ್ಗೆ ಸಮುದಾಯ ಅರಿವು ಕಾರ್ಯಕ್ರಮಗಳನ್ನು ಮೀನುಗಾರರಿಗೆ, ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳುವು ದರಿಂದರೊಂದಿಗೆ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾ ಹಾಗೂ ತಾಲೂಕು ವಿಪತ್ತು ನಿರ್ವಹಣಾ ಕೇಂದ್ರಗಳ ಕಂಟ್ರೋಲ್ ರೂಂಗಳು ದಿನದ 24ಗಂಟೆಗಳ ಕಾಲವೂ ನಿರಂತರವಾಗಿ ಕಾರ್ಯ ನಿರ್ವಹಿಸುವಂತೆ ನೋಡಿಕೊಳ್ಳಬೇಕು ಹಾಗೂ ತಾಲೂಕು ಮಟ್ಟದ, ಗ್ರಾಮ ಪಂಚಾಯತಿ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳು ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಬೇಕು ಎಂದರು.

ಪ್ರಕೃತಿ ವಿಕೋಪದಿಂದ ಯಾವುದೇ ಅನಾಹುತಗಳು ಉಂಟಾದಲ್ಲಿ ಕೂಡಲೇ ಸ್ಪಂದಿಸಿ, ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು ಎಂದ ಅವರು, ಪರಿಹಾರದ ಚೆಕ್‌ಅನ್ನು ವಿತರಿಸುವ ಮುನ್ನ ಪ್ರಕೃತಿ ವಿಕೋಪದಿಂದಾಗಿರುವ ಬಗ್ಗೆ ನಿಖರ ಮಾಹಿತಿಯನ್ನು ಕ್ರೂಢೀಕರಿಸಿಕೊಳ್ಳುವುದು ಅಗತ್ಯ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಎಎಸ್‌ಪಿ ಸುಧಾಕರ್ ನಾಯಕ್, ಸಹಾಯಕ ಕಮಿಷನರ್ ರಶ್ಮಿ ಎಸ್, ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X