Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ...

ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸಿ: ಉಡುಪಿ ಡಿಸಿ ಸ್ವರೂಪ

ವಾರ್ತಾಭಾರತಿವಾರ್ತಾಭಾರತಿ1 April 2026 7:48 PM IST
share
ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸಿ: ಉಡುಪಿ ಡಿಸಿ ಸ್ವರೂಪ
ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಸಮಿತಿ ಸಭೆ

ಉಡುಪಿ, ಎ.1: ಜಿಲ್ಲೆಯ ಎಲ್ಲಾ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ವಸತಿ ಸೌಲಭ್ಯಗಳನ್ನು ಆದ್ಯತೆಯ ಮೇಲೆ ನೀಡುವಂತೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರ ಮಕ್ಕಳಿಗೆ ಸರಕಾರದ ಆದೇಶದಂತೆ ಪ್ರತಿಭಾ ಪುರಸ್ಕಾರ ವಿತರಿಸುವಂತೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿಯ ಮೊದಲನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಸ್ಥಳೀಯ ಸಂಸ್ಥೆಗಳಲ್ಲಿ ಹಾಗೂ ಪಂಚಾಯತ್ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರು ದೈನಂದಿನ ಸ್ವಚ್ಛತಾ ಕಾರ್ಯದ ಕರ್ತವ್ಯ ನಿರ್ವಹಿಸುವಾಗ ಕಡ್ಡಾಯವಾಗಿ ಸುರಕ್ಷತಾ ಪರಿಕರಗಳನ್ನು ಧರಿಸಿ, ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ಇಲ್ಲದಿದ್ದಲ್ಲಿ ಅದು ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದ್ದು, ಇವುಗಳ ಬಗ್ಗೆ ಮೇಲುಸ್ತುವಾರಿಯನ್ನು ಅಧಿಕಾರಿಗಳು ನೋಡಿಕೊಳ್ಳಬೇಕು ಎಂದರು.

ಪ್ರತಿಯೊಬ್ಬ ಪೌರಕಾರ್ಮಿಕರನ್ನೂ ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ ಗಳಿಗೆ ಕಡ್ಡಾಯವಾಗಿ ನೊಂದಾಯಿಸಿಕೊಳ್ಳಬೇಕು. ಇದರಿಂದ ಭವಿಷ್ಯದಲ್ಲಿ ಅವರಿಗೆ ಅನುಕೂಲವಾಗಲಿದೆ. ಹೀಗಾಗಿ ಎಲ್ಲಾ ಅಧಿಕಾರಿಗಳು ತಮ್ಮ ಪೌರಕಾರ್ಮಿಕರಿಗೆ ಹಾಗೂ ಸಫಾಯಿ ಕರ್ಮಚಾರಿ ಗಳೊಂದಿಗೆ ಹೊರಗುತ್ತಿಗೆ ಸಿಬ್ಬಂದಿಗಳಿಗೂ ಈ ಯೋಜನೆಯನ್ನು ಮಾಡಿಸಲು ಕ್ರಮವಹಿಸಬೇಕು ಎಂದರು.

ಸಮಾಜದ ನೈರ್ಮಲ್ಯ ಕಾಪಾಡುವಲ್ಲಿ ಅಪಾರ ಶ್ರಮ ವಹಿಸುವ ಸಫಾಯಿ ಕರ್ಮಚಾರಿಗಳ ಆರೋಗ್ಯ ತಪಾಸಣೆ ಯನ್ನು ಕಾಲಕಾಲಕ್ಕೆ ನಿಯಮಿತವಾಗಿ ನಡೆಸುವುವ ಮೂಲಕ ಅವರ ಆರೋಗ್ಯ ರಕ್ಷಣೆಗೂ ಆದ್ಯತೆ ನೀಡಬೇಕು ಎಂದ ಜಿಲ್ಲಾಧಿಕಾರಿ, ಪೌರಕಾರ್ಮಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಪೌರಾಡಳಿತ ಇಲಾಖೆ ನಿರ್ದೇಶನ ದಂತೆ ಪ್ರತೀ ಮೂರು ತಿಂಗಳಿಗೊಮ್ಮೆ ಅವರ ಆರೋಗ್ಯ ತಪಾಸಣೆ ಹಾಗೂ ವರ್ಷಕ್ಕೆ ಒಂದು ಬಾರಿ ಮಾಸ್ಟರ್ ಹೆಲ್ತ್‌ಚೆಕ್‌ಅಪ್ ಮಾಡಿಸಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಪೌರ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಯುವ ದಿನ ಹಾಗೂ ಸ್ಥಳದ ಬಗ್ಗೆ ಸೂಚನಾ ಫಲಕಗಳಲ್ಲಿ ಮುಂಚಿತವಾಗಿ ಪ್ರಕಟಿಸಬೇಕು ಎಂದರು.

ಮಾನ್ಯುಯಲ್ ಸ್ಕ್ಯಾವೆಂಜರ್ಸ್ ಪದ್ಧತಿಗೆ ಈಗಾಗಲೇ ದೇಶಾದ್ಯಂತ ನಿಷೇಧವಿದೆ. ನಗರ ಹಾಗೂ ಸ್ಥಳೀಯ ಸಂಸ್ಥೆ ಗಳ ವ್ಯಾಪ್ತಿಯಲ್ಲಿ ಮಾನ್ಯುಯಲ್ ಸ್ಕ್ಯಾವೆಂಜರ್‌ನ್ನು ನೇಮಿಸಿಕೊಂಡು ಕೆಲಸ ಮಾಡಿಸಿದ್ದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಗಳಲ್ಲಿ ಕಡ್ಡಾಯವಾಗಿ ಸಕ್ಕಿಂಗ್ ಹಾಗೂ ಜೆಟ್ಟಿಂಗ್ ಯಂತ್ರಗಳ ಬಳಕೆಯೊಂದಿಗೆ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಸ್ವರೂಪಾ ಅವರು ಸ್ಪಷ್ಟ ನಿರ್ದೇಶನ ನೀಡಿದರು.

ಮನೆಗಳು, ಕಂಪೆನಿ, ಆಸ್ಪತ್ರೆ, ಅಪಾರ್ಟ್‌ಮೆಂಟ್ ಸೇರಿದಂತೆ ಇತರೆಡೆ ಮ್ಯಾನ್‌ಹೋಲ್, ಸೆಪ್ಟಿಕ್ ಟ್ಯಾಂಕ್, ತೆರೆದ ಚರಂಡಿ, ಪಿಟ್ ಗುಂಡಿಗಳನ್ನು ಕಟ್ಟಿಕೊಂಡಲ್ಲಿ ಸ್ವಚ್ಛಗೊಳಿಸಲು ಮಹಾನಗರ ಪಾಲಿಕೆ ವ್ಯಾಪ್ತಿಗಳಲ್ಲಿ 14420 ಮತ್ತು ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ 9480985555ನ್ನು ಸಂಪರ್ಕಿಸ ಬಹುದಾಗಿದ್ದು, ಈ ಸಹಾಯವಾಣಿಗಳ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಲೋಡರ್ಸ್, ಕ್ಲೀನರ್ಸ್ ಹಾಗೂ ಚಾಲಕರಿಗೆ ಪ್ರತೀ ತಿಂಗಳ ವೇತನವನ್ನು ಸಕಾಲದಲ್ಲಿ ಪಾವತಿಸಿರುವ ಬಗ್ಗೆ ಹಾಗೂ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವೇತನ ಪಾವತಿ, ಸಾಮಾಜಿಕ ಭದ್ರತೆ ಒದಗಿಸಿರುವ ಬಗ್ಗೆ ಅಧಿಕಾರಿಗಳು ತಪ್ಪದೇ ಪರಿಶೀಲಿಸಬೇಕು ಎಂದರು.

ಸಭೆಯಲ್ಲಿ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಎಎಸ್‌ಪಿ ಸುಧಾಕರ ನಾಯಕ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾರಾಯಣ ಸ್ವಾಮಿ, ಸಮಿತಿಯ ಸದಸ್ಯರಾದ ಪ್ರಶಾಂತಿ, ನಾಗರಾಜ, ಕೊಟ್ರಿಬಾಯಿ ಹಾಗೂ ಶಂಕರ ಅಲ್ಲದೇ ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.







Tags

ProvidehousingfacilitiescivicworkersGriha Bhagya scheme
share
ವಾರ್ತಾಭಾರತಿ
ವಾರ್ತಾಭಾರತಿ
Next Story
X