Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರ...

ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿ: ಉಡುಪಿ ಡಿಸಿ ಡಾ.ವಿದ್ಯಾಕುಮಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ25 Aug 2023 8:41 PM IST
share
ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಿ: ಉಡುಪಿ ಡಿಸಿ ಡಾ.ವಿದ್ಯಾಕುಮಾರಿ ಸೂಚನೆ

ಉಡುಪಿ : ಮಲ್ಪೆ ಕಡಲ ತೀರಕ್ಕೆ ಹೆಚ್ಚೆಚ್ಚು ಪ್ರವಾಸಿಗರು ಆಗಮಿಸುತ್ತಿದ್ದು, ಅವರುಗಳ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವು ದರ ಜೊತೆಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಲ್ಪೆ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಲ್ಪೆ ಬೀಚ್‌ಗೆ ವಾರಾಂತ್ಯದಲ್ಲಿ ಹೆಚ್ಚು ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಪಾರ್ಕಿಂಗ್ ವ್ಯವಸ್ಥೆಗೆ ಸಹ ತೊಂದರೆಯಾಗುತ್ತಿರುವ ಕಾರಣ ಪಡುಕೆರೆ ಕಡಲ ತೀರವನ್ನು ಅಭಿವೃದ್ಧಿ ಪಡಿಸಿ, ಸೂಕ್ತ ವ್ಯವಸ್ಥೆ ಕಲ್ಪಿಸಿದ್ದಲ್ಲಿ ಪ್ರವಾಸಿಗರ ಜನದಟ್ಟಣೆಯನ್ನು ಕಡಿಮೆ ಮಾಡಲು ಸಾಧ್ಯವಾಗಲಿದೆ. ಇದಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ಬೀಚ್‌ನಲ್ಲಿ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ವಾಹನ ಪಾರ್ಕಿಂಗ್ ಸೇರಿದಂತೆ ಇತರ ಸೌಲಭ್ಯಗಳನ್ನು ಒದಗಿಸಬೇಕು. ಅಪಘಾತಗಳು ಸಂಭವಿಸಿದ್ದಲ್ಲಿ ಚಿಕಿತ್ಸೆ ನೀಡಲು ಅಲ್ಲಿನ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ, ಎಲ್ಲಾ ರೀತಿಯ ಔಷಧ ಹಾಗೂ ವೈದ್ಯಕೀಯ ಉಪಕರಣಗಳು ಲಭ್ಯವಿರು ವಂತೆ ನೋಡಿ ಕೊಳ್ಳಬೇಕು ಎಂದರು.

ಮಲ್ಪೆ ಬೀಚ್ ಪ್ರದೇಶದಲ್ಲಿರುವ ಹೈಮಾಸ್ಟ್ ಕಂಬಗಳಿಗೆ ದೀಪ ಅಳವಡಿಸುವಂತೆ ಹಾಗೂ ಬೀಚ್‌ನ ಉತ್ತರ ಭಾಗದಲ್ಲಿ ಹೊಸದಾಗಿ ಹೈಮಾಸ್ಟ್ ಕಂಬಗಳನ್ನು ಹಾಗೂ ದಾರಿದೀಪಗಳನ್ನು ಅಳವಡಿಸಲು ಯೋಜನೆಯನ್ನು ಸಿದ್ಧಪಡಿಸುವಂತೆ ಅವರು ತಿಳಿಸಿದರು.

ಮಲ್ಪೆ ಬೀಚ್, ಸೀವಾಕ್, ಸೈಂಟ್ ಮೇರೀಸ್ ದ್ವೀಪಗಳಿಗೆ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಿದ್ದು ಹಾಗೂ ಇಲ್ಲಿನ ಮೀನುಗಾರಿಕಾ ಚಟುವಟಿಕೆಗಳಿಂದಾಗಿ ಕಲ್ಮಾಡಿ ಭಾಗದಲ್ಲಿ ಹೆಚ್ಚು ಟ್ರಾಫಿಕ್ ಸಮಸ್ಯೆ ಗಳುಂಟಾಗುತ್ತಿದೆ. ಇದರ ನಿರ್ವ ಹಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನೇಮಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಪ್ರವಾಸಿಗರ ಸುರಕ್ಷತೆ ಹಾಗೂ ಭದ್ರತೆಯ ದೃಷ್ಟಿಯಿಂದ ಸೈಂಟ್ ಮೇರೀಸ್ ದ್ವೀಪಕ್ಕೆ ಬೋಟ್‌ಗಳಲ್ಲಿ ತೆರಳುವ ಪ್ರಯಾಣಿ ಕರ ಬ್ಯಾಗ್ ಹಾಗೂ ಲಗೇಜ್‌ಗಳನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸುವಂತೆ ಮತ್ತು ಮಲ್ಪೆ ಬೀಚ್, ಸೈಂಟ್ ಮೇರೀಸ್ ದ್ವೀಪದಲ್ಲಿ ನಿಯೋಜನೆಗೊಂಡ ಟೂರಿಸ್ಟ್ ಗೈಡ್‌ಗಳಿಗೆ ಇಲಾಖೆಯ ವತಿಯಿಂದ ಸೂಕ್ತ ತರಬೇತಿ ನೀಡುವಂತೆ ಹಾಗೂ ಪ್ರವಾಸಿಗರ ಸುರಕ್ಷತೆಗೆ ಬೀಚ್ ನಿರ್ವಹಣಾದಾರರು ನಿಯೋಜಿಸಲ್ಪಟ್ಟ ಜೀವರಕ್ಷಕ ಸಿಬ್ಬಂದಿಗಳಿಗೆ ಸುರಕ್ಷತೆ ನಿರ್ವಹಿಸುವ ಕುರಿತು ಹೆಚ್ಚಿನ ತರಬೇತಿ ನೀಡುವಂತೆ ಸೂಚಿಸಿದರು.

ಬೀಚ್‌ನ ಸಮೀಪದಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಹೆಚ್ಚುವರಿ ಗೂಡಂಗಡಿಗಳ ಕುರಿತು ಪೊಲೀಸ್ ಇಲಾಖೆ, ನಗರಸಭೆ ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳು ತಪಾಸಣೆ ನಡೆಸಿ, ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ, ಮಲ್ಪೆ ಬೀಚ್ ಉತ್ತರ ಭಾಗದಲ್ಲಿನ ಖಾಲಿ ಜಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಹಾಗೂ ಪ್ರವಾಸಿಗರ ವಾಹನಗಳ ಪಾರ್ಕಿಂಗ್ ಮಾಡಲು ಅನುಕೂಲವಾಗುವಂತೆ ಬೀಚ್ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದ ಮಾಸ್ಟರ್ ಪ್ಲಾನ್ ಅನ್ನು ರೂಪಿಸಿ, ಅದನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್, ಪೌರಾಯುಕ್ತ ರಾಯಪ್ಪ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಮಲ್ಪೆ ಭಾಗದ ನಗರಸಭಾ ಸದಸ್ಯರು, ಭಜನಾ ಮಂಡಳಿಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಮಲ್ಪೆ ಸೀವಾಕ್ ಹಾಗೂ ಬೀಚ್‌ನಿಂದ ಸೈಂಟ್ ಮೇರೀಸ್ ದ್ವೀಪಕ್ಕೆ ಪ್ರವಾಸಿಗರನ್ನು ಕರೆದೊಯ್ಯುವ ಪ್ರವಾಸಿ ಬೋಟು ಗಳು, ಸಾಮರ್ಥ್ಯಕ್ಕೆ ಅನುಸಾರವಾಗಿ ನಿಗದಿತ ಜನಕ್ಕಿಂತ ಹೆಚ್ಚಿನ ಜನರನ್ನು ಕೊಂಡೊಯ್ಯಬಾರದು. ಎಲ್ಲಾ ಪ್ರಯಾಣಿಕರು ಲೈಫ್ ಜಾಕೆಟ್ ಅನ್ನು ಕಡ್ಡಾಯವಾಗಿ ಧರಿಸುವಂತೆ ನೋಡಿಕೊಳ್ಳಬೇಕು. ಈ ಬಗ್ಗೆ ನಿರ್ಲಕ್ಷ್ಯ ಕಂಡುಬಂದಲ್ಲಿ ಆ ಬೋಟಿನ ಪರವಾನಿಗೆಯನ್ನು ರದ್ದುಪಡಿಸುವುದರ ಜೊತೆಗೆ, ಷರತ್ತು ಉಲ್ಲಂಘಿಸುವ ಬೋಟಿನ ಮಾಲಕರಿಗೆ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗುವುದು.

-ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾಧಿಕಾರಿ ಉಡುಪಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X