Udupi | ಪ್ರಚೋದನಕಾರಿ ಭಾಷಣ ಆರೋಪ: ಹಿಂಜಾವೇ ಮುಖಂಡ ರತ್ನಾಕರ್ ಅಮೀನ್ ಬಂಧನ

ರತ್ನಾಕರ್ ಅಮೀನ್(49) ಬಂಧಿತ ಆರೋಪಿ
ಉಡುಪಿ : ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಹಿಂದೂ ಜಾಗರಣಾ ವೇದಿಕೆಯ ಮುಖಂಡನೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಅಜೆಕಾರು ಮರ್ಣೆ ನಡಿಬೆಟ್ಟು ನಿವಾಸಿ ರತ್ನಾಕರ್ ಅಮೀನ್(49) ಬಂಧಿತ ಆರೋಪಿ. ನ.15ರಂದು ಉಡುಪಿ ನಗರದ ಜಟ್ಕಾ ನಿಲ್ದಾಣದ ಬಳಿ ಹಿಂದೂ ಜಾಗರಣಾ ವೇದಿಕೆ ಉಡುಪಿ ವತಿಯಿಂದ ದೆಹಲಿ ಬಾಂಬ್ ಸ್ಪೋಟ ಕೃತ್ಯವನ್ನು ಖಂಡಿಸಿ ಪ್ರತಿಭಟನಾ ಸಭೆಯನ್ನು ಆಯೋಜಿಸಲಾಗಿತ್ತು. ಪ್ರತಿಭಟನೆಯಲ್ಲಿ ರತ್ನಾಕರ ಅಮೀನ್, ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಭಾಷಣ ಮಾಡಿದ್ದು, ಈ ಬಗ್ಗೆ ರತ್ನಾಕರ ಅಮೀನ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ತನಿಖೆ ನಡೆಸಿದ ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ್ ವಿ.ಬಡಿಗೇರ ನೇತೃತ್ವದ ವಿಶೇಷ ತಂಡವು ಖಚಿತ ಮಾಹಿತಿಯ ಆಧಾರದ ಮೇರೆಗೆ ನ.18ರಂದು ಬೆಳಗ್ಗೆ ಆರೋಪಿ ರತ್ನಾಕರ್ ಅಮೀನ್ನನ್ನು ಮಂಗಳೂರು ಸೆಂಟ್ರಲ್ ರೈಲ್ವೆ ಸ್ಟೇಷನ್ ನಲ್ಲಿ ವಶಕ್ಕೆ ಪಡೆದು ಬಂಧಿಸಿ, ನ್ಯಾಯಲಯಕ್ಕೆ ಹಾಜರು ಪಡಿಸಿದೆ.





