Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಧರ್ಮ -ಸಂವಿಧಾನ ಒಂದಕ್ಕೊಂದು ಪೂರಕ : ನಟ...

ಧರ್ಮ -ಸಂವಿಧಾನ ಒಂದಕ್ಕೊಂದು ಪೂರಕ : ನಟ ಪವನ್ ಕಲ್ಯಾಣ್

ವಾರ್ತಾಭಾರತಿವಾರ್ತಾಭಾರತಿ7 Dec 2025 8:23 PM IST
share
ಧರ್ಮ -ಸಂವಿಧಾನ ಒಂದಕ್ಕೊಂದು ಪೂರಕ : ನಟ ಪವನ್ ಕಲ್ಯಾಣ್
►"ನಮ್ಮ ಧರ್ಮವನ್ನು ಉಳಿಸುವುದು ಅಂದರೆ ಇತರ ಧರ್ಮಗಳನ್ನು ಅವಮಾನಿಸುವುದಲ್ಲ" ►ಉಡುಪಿ ಶ್ರೀಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವ ಸಮಾರೋಪ

ಉಡುಪಿ, ಡಿ.7: ಸನಾತನ ಧರ್ಮದ ಮೇಲೆ ನಡೆಯುವ ಟೀಕೆಗಳಿಗೆ ಮೌನವಾಗಿರಲು ಸಾಧ್ಯ ಇಲ್ಲ. ನಮ್ಮ ಧರ್ಮವನ್ನು ಉಳಿಸುವುದು ಅಂದರೆ ಇತರ ಧರ್ಮಗಳನ್ನು ಅವಮಾನಿಸುವುದಲ್ಲ. ಧರ್ಮ ಮತ್ತು ಸಂವಿಧಾನ ಒಂದಕ್ಕೊಂದು ಪೂರಕವಾಗಿದೆ. ಧರ್ಮ ನೈತಿಕ ಮಾರ್ಗ ತೋರಿಸಿದರೆ, ಸಂವಿಧಾನವು ಕಾನೂನು ಮಾರ್ಗ ತೋರಿಸುತ್ತದೆ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಹೇಳಿದ್ದಾರೆ.

ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠದ ವತಿಯಿಂದ ರವಿವಾರ ರಾಜಾಂಗಣದಲ್ಲಿ ನಡೆದ ಬೃಹತ್ ಗೀತೋತ್ಸವ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.

ಇಂಗ್ಲಿಷ್ ಭಾಷೆ ಭಾರತೀಯ ಸಮಾಜವನ್ನು ನಾಶಮಾಡಬಹುದು ಎಂಬ ಕಲ್ಪನೆ ತಪ್ಪು. ಏಕೆಂದರೆ ಭಾರತವು ಇಂಗ್ಲಿಷರ ಆಡಳಿತವನ್ನೇ ಪತನಗೊಳಿಸಿದೆ. ವಿದೇಶಿ ಸಂಸ್ಕೃತಿಯನ್ನು ಬಲವಂತವಾಗಿ ಹೇರಲು ಮಾಡಿದ ಪ್ರಯತ್ನಗಳು ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಅವರು ಅಭಿಪ್ರಾಯ ಪಟ್ಟರು.

ಗೋ ಸಂರಕ್ಷಣೆ ಎಂಬುದು ಧರ್ಮ ಮತ್ತು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸರಕಾರದ ಸಹಾಯದಿಂದ ಗೋಶಾಲೆಗಳ ನಿರ್ಮಾಣ ಮಾಡಬೇಕು. ಪ್ರತಿಯೊಂದು ಹಿಂದೂಗಳು ತಮ್ಮ ಮನೆಗಳಲ್ಲಿ ಕನಿಷ್ಟ ಒಂದು ಹಸುವನ್ನು ಸಾಕಬೇಕು. ಇತರ ಸಮುದಾಯಗಳತ್ತ ಬೆರಳು ತೋರಿಸುವ ಮೊದಲು ನಾವು ನಮ್ಮ ಜವಾಬ್ದಾರಿಯನ್ನು ನಿಭಾಯಿಸಬೇಕು ಎಂದು ಅವರು ತಿಳಿಸಿದರು.

ಭಾರತ ಯುವ ಶಕ್ತಿಯ ದೇಶ. ಮಧ್ವಾಚಾರ್ಯರಂತಹ ಮಹಾನ್ ಚಿಂತಕರು ಬೌದ್ಧಿಕ ಹಾಗೂ ಆಧ್ಯಾತ್ಮಿಕ ಶಕ್ತಿಯನ್ನು ನೀಡಿದ್ದಾರೆ. ಭಗವದ್ಗೀತೆ ಕೇವಲ ಆಚರಣೆಯ ಗ್ರಂಥವಲ್ಲ, ನೀತಿಪರ ಜೀವನಕ್ಕೆ ಮಾರ್ಗದರ್ಶನ ನೀಡುವ ಗ್ರಂಥವಾಗಿದೆ. ಸನಾತನ ಧರ್ಮದ ಶಕ್ತಿ ವೇದಗಳಲ್ಲಿ ಹಾಗೂ ಗೀತೆಯ ಶಾಶ್ವತ ಜ್ಞಾನದಲ್ಲಿ ಅಡಕವಾಗಿದೆ ಎಂದು ಅವರು ಹೇಳಿದರು.

ದೇಶದ ಭದ್ರತೆಗೂ ಗೀತೆಯಲ್ಲಿ ಮಾರ್ಗದರ್ಶನವಿದೆ ಎಂಬ ನರೇಂದ್ರ ಮೋದಿ ಅವರ ಅಭಿಪ್ರಾಯಕ್ಕೆ ನನ್ನ ಸಹಮತ ಇದೆ. ಗೀತೆ ಮಾನವ ಮೌಲ್ಯಗಳನ್ನು ರೂಪಿಸುವ, ದಿನನಿತ್ಯದ ನಿರ್ಧಾರಗಳಿಗೂ ದಾರಿ ತೋರಿಸುವ ವಿಶ್ವಮಾನವೀಯ ಗ್ರಂಥ. ಇಂದಿನ ಯುವ ಪೀಳಿಗೆ ಭಾವನಾತ್ಮಕ ಸ್ಥೈರ್ಯ ಮತ್ತು ಮಾನಸಿಕ ಶಿಸ್ತುಗಾಗಿ ಗೀತೆಯತ್ತ ಮುಖ ಮಾಡಬೇಕು ಎಂದು ಅವರು ತಿಳಿಸಿದರು.

ಉಡುಪಿ ದೇಶದ ಪ್ರಮುಖ ಆಧ್ಯಾತ್ಮಿಕ ಕೇಂದ್ರಗಳಲ್ಲಿ ಒಂದಾಗಿದೆ. ಮಧ್ವಾಚಾರ್ಯರ ದ್ವೈತ ತತ್ವಶಾಸ್ತ್ರದಿಂದ ಉಡುಪಿ ಮಹಿಮೆಯು ಹೆಚ್ಚಾಗಿದೆ. ಹಿಂದು ಧರ್ಮದ ಪ್ರಚಾರವನ್ನು ದೇಶದ ಗಡಿ ದಾಟಿಸಿ ವಿಸ್ತರಿಸಿರುವ ಸುಗುಣೇಂದ್ರ ತೀರ್ಥ ಸ್ವಾಮೀಜಿಯ ಕಾರ್ಯ ಶ್ಲಾಘನೀಯ ಎಂದು ಅವರು ಹೇಳಿದರು.

ಪುತ್ತಿಗೆ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥ, ಸುಬ್ರಹ್ಮಣ್ಯ ಮಠದ ಶ್ರೀವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಮಾಯಾಪುರಿ ಶ್ರೀಸುಭಾಗ ಸ್ವಾಮಿ ಗುರುಮಹಾರಾಜ್, ಪುತ್ತಿಗೆ ಮಠದ ಕಿರಿಯ ಯತಿ ಶ್ರೀಸುಶೀಂದ್ರತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.

ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಟಿಟಿಡಿ ಬೋರ್ಡ್ ಸದಸ್ಯರಾದ ಬಿ.ಆನಂದ ಸಾಯಿ, ನರೇಶ್ ಕುಮಾರ್, ಉದ್ಯಮಿಗಳಾದ ರಾಘವೇಂದ್ರ ರಾವ್, ಮುರಳಿ ಬಲ್ಲಾಳ್ ಮೊದಲಾದವರು ಉಪಸ್ಥಿತರಿದ್ದರು. ಡಾ.ವಿಜಯೇಂದ್ರ ಸ್ವಾಗತಿಸಿದರು. ಗೋವಿಂದಾಚಾರ್ಯ ಕಾರ್ಯಕ್ರಮ ನಿರೂಪಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X