Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಕ್ಕಳ ರಕ್ಷಣೆ ಸಮಾಜದ ಜವಾಬ್ದಾರಿ: ಅಬೀದ್...

ಮಕ್ಕಳ ರಕ್ಷಣೆ ಸಮಾಜದ ಜವಾಬ್ದಾರಿ: ಅಬೀದ್ ಗದ್ಯಾಳ್

ಮಕ್ಕಳ ರಕ್ಷಣೆ, ಮಕ್ಕಳ ರಕ್ಷಣಾ ನೀತಿ ಕುರಿತ ಕಾರ್ಯಾಗಾರ

ಬಿ ಬಿ ಶೆಟ್ಟಿಗಾರ್ಬಿ ಬಿ ಶೆಟ್ಟಿಗಾರ್18 Nov 2026 7:32 PM IST
share
ಮಕ್ಕಳ ರಕ್ಷಣೆ ಸಮಾಜದ ಜವಾಬ್ದಾರಿ: ಅಬೀದ್ ಗದ್ಯಾಳ್

ಉಡುಪಿ, ನ.18: ಮಕ್ಕಳ ರಕ್ಷಣೆ ಸಮಾಜದ ಹೊಣೆಗಾರಿಕೆಯಾಗಿದೆ. ಮಕ್ಕಳ ಮೇಲಾಗುವ ಶೋಷಣೆ ಹಾಗೂ ದೌರ್ಜನ್ಯಗಳನ್ನು ತಡೆಯಲು ಜಾರಿಗೊಳಿಸಲಾಗಿರುವ ಮಕ್ಕಳ ರಕ್ಷಣಾ ನೀತಿ-2016ಯನ್ನು ಅನುಷ್ಠಾನ ಗೊಳಿಸುವಲ್ಲಿ ಪ್ರತಿಯೊಬ್ಬ ನಾಗರಿಕರೂ ಕೈಜೋಡಿಸಬೇಕಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಮಕ್ಕಳ ರಕ್ಷಣೆ ಹಾಗೂ ಮಕ್ಕಳ ರಕ್ಷಣಾ ನೀತಿ- 2016ರ ಕುರಿತು ಉಡುಪಿ ಜಿಲ್ಲೆಯ ಪದವಿ ಪೂರ್ವ ಕಾಲೇಜು ಪ್ರಿನ್ಸಿಪಾಲರಿಗೆ ಮಣಿಪಾಲ ರಜತಾದ್ರಿಯಲ್ಲಿರುವ ಜಿಪಂನ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸಮಾಜದಲ್ಲಿರುವ ಅಶಕ್ತರು, ದುರ್ಬಲರು, ಹಕ್ಕುಗಳ ಅರಿವು ಇಲ್ಲದವರ ರಕ್ಷಣೆಯೇ ಸರಕಾರದ ಧ್ಯೇಯವಾಗಿದ್ದು, ದೊಡ್ಡ ಮೀನು ಸಣ್ಣ ಮೀನನ್ನು ತಿನ್ನುವ ಮತ್ಸ್ಯ ನ್ಯಾಯದಿಂದ ಮಕ್ಕಳ ರಕ್ಷಣೆ ಅಗತ್ಯ. ಶಾಲೆ ತೊರೆವ, ದುಶ್ಚಟಕ್ಕೆ ಬೇಗ ಬಲಿಯಾಗುವ, ಬಾಲ್ಯ ವಿವಾಹ ಆಗದಂತೆ ಮಕ್ಕಳನ್ನು ತಡೆಯಬೇಕು. ಹದಿಹರೆಯದಲ್ಲಿ ದೈಹಿಕ, ಮಾನಸಿಕ ಬದಲಾವಣೆ ತರುವ ಗೊಂದಲ ನಿವಾರಿಸಿ, ಗುರಿ ಸಾಧನೆಗೆ ಮಾರ್ಗದರ್ಶನ ನೀಡುವಲ್ಲಿ ತಂದೆ- ತಾಯಿಯರ ಜೊತೆ ಶಿಕ್ಷಕರ ಪಾತ್ರ ಮಹತ್ವದ್ದು ಎಂದವರು ಹೇಳಿದರು.

ಮಕ್ಕಳ ರಕ್ಷಣೆಗಾಗಿ ಜಾರಿಗೊಳಿಸಲಾದ ಹಕ್ಕುಗಳ ಬಗ್ಗೆ ಮಕ್ಕಳಿಗೆ ಅರಿವು ಇರುವುದಿಲ್ಲ. ದುರ್ಬಲ ಹಾಗೂ ಅಶಕ್ತರಾದ ಮಕ್ಕಳಿಗೆ ಸಾಂವಿಧಾನಿಕವಾಗಿ ನೀಡಲಾದ ಹಕ್ಕುಗಳ ಬಗ್ಗೆ ತಿಳಿಸುವ ಹಾಗೂ ಅವುಗಳನ್ನು ಅನುಷ್ಠಾನ ಗೊಳಿಸುವುದು ಎಲ್ಲರ ಜವಾಬ್ದಾರಿ. ಈ ನಿಟ್ಟಿನಲ್ಲಿ ಇಂಥ ಕಾರ್ಯಾಗಾರಗಳು ಉಪಯುಕ್ತ ಎಂದು ಅಬೀದ್ ಗದ್ಯಾಳ್ ತಿಳಿಸಿದರು.

17ರಿಂದ 18 ವರ್ಷ ಹದಿಹರೆಯದ ಸೂಕ್ಷ್ಮವಾದ ವಯಸ್ಸು. ದೈಹಿಕ, ಮಾನಸಿಕ ಬದಲಾವಣೆಗಳಿಂದ ಈ ವಯೋಮಾನದವರಲ್ಲಿ ಗೊಂದಲಗಳು ಹೆಚ್ಚಿರುತ್ತವೆ. ಅವರಲ್ಲಿ ಸ್ಪಷ್ಟತೆ ಇರುವುದಿಲ್ಲ. ಜೀವನದಲ್ಲಿ ಗುರಿ ಇಟ್ಟು ಕೊಂಡರೂ, ಆ ಗುರಿ ಸಾಧನೆಗೆ ಮಾಹಿತಿ ಇರುವುದಿಲ್ಲ. ಇಂಥ ಹದಿ ಹರೆಯದ ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಲು ಪೋಷಕರೊಂದಿಗೆ ಕಾಲೇಜುಗಳಲ್ಲಿನ ಅಧ್ಯಾಪಕರುಗಳು ಪ್ರಮುಖ ಪಾತ್ರ ವಹಿಸಬೇಕಿದೆ. ಈ ದಿಶೆಯಲ್ಲಿ ಮಕ್ಕಳ ಸುರಕ್ಷತೆ ಮತ್ತು ಮಾನಸಿಕ ಆರೋಗ್ಯದ ದೃಷ್ಟಿಯಿಂದ ಈ ತರಬೇತಿ ಅತ್ಯಂತ ಮಹತ್ವದ್ದಾಗಿದೆ ಎಂದರು.

ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಉಪನಿರ್ದೇಶಕ ಸತೀಶ್ ಬಿ. ನಾಯಕ್ ಮಾತನಾಡಿ, ಪೋಷಕರೊಂದಿಗೆ ಹೇಳಿಕೊಳ್ಳದ ಎಷ್ಟೋ ವಿಷಯಗಳನ್ನು ಮಕ್ಕಳು ಅಧ್ಯಾಪಕರ ಬಳಿ ಹಂಚಿಕೊಳ್ಳುತ್ತಾರೆ. ಇಂಥ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಮಕ್ಕಳ ರಕ್ಷಣೆ ಮಾಡುವ ಹಕ್ಕುಗಳ ಮಾಹಿತಿ ಅವರಲ್ಲಿರಬೇಕಾಗುತ್ತದೆ. ಇದಕ್ಕಾಗಿ ಇಂದಿನ ತರಬೇತಿಯನ್ನು ಆಯೋಜಿಸಲಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರೇಮಮೂರ್ತಿ ಕೆ. ಮಾತನಾಡಿ, 18ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಅವರ ಹಕ್ಕುಗಳನ್ನು ಮುಕ್ತವಾಗಿ ಅನುಭವಿಸಲು ಅನುವು ಮಾಡಿಕೊಡಬೇಕು. ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗುವ ಕುಟುಂಬ, ಸಮಾಜ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಇವುಗಳ ನಿಯಂತ್ರಣಕ್ಕೆ ಈ ಕಾರ್ಯಾಗಾರ ಪ್ರಯೋಜನಕಾರಿ ಎಂದರು.

ಇದೇ ಸಂದರ್ಭದಲ್ಲಿ ದತ್ತು ಮಾಸಾಚರಣೆ ಕುರಿತ ಪೋಸ್ಟರ್‌ನ್ನು ಬಿಡುಗಡೆ ಗೊಳಿಸಿ ದತ್ತು ಮಾಸಾಚರಣೆಯ ಘೋಷ ವಾಕ್ಯದ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸದಸ್ಯರು ಉಪಸ್ಥಿತರಿದ್ದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳಾಡಿದರು. ಘಟಕದ ಯೋಜನಾ ಸಂಯೋಜಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಮಕ್ಕಳ ರಕ್ಷಣೆಗೆ ಉಡುಪಿ ಮಾದರಿ: ಡಾ.ತಿಪ್ಪೇಸ್ವಾಮಿ

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ.ಟಿ. ‘ಹದಿಹರೆಯದ ಕಾವಲುಗಾರ’ ಎಂಬ ವಿಷಯದ ಮೇಲೆ ಮಾತನಾಡಿ, ಮಕ್ಕಳ ರಕ್ಷಣೆಯಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಮಾದರಿ ಯಾಗಿದೆ ಎಂದರು.

ಬಾಲ ಕಾರ್ಮಿಕ ಪದ್ಧತಿ, ಬಾಲ್ಯವಿವಾಹ ಸಮಸ್ಯೆ, ಮಕ್ಕಳ ಭಿಕ್ಷಾಟನೆ ರಾಜ್ಯದಲ್ಲಿ ಅಧಿಕವಾಗಿ ಕಂಡುಬರುತ್ತಿದೆ ಎಂದ ಅವರು, ಮಕ್ಕಳ ರಕ್ಷಣೆಗೆ ಸಂಬಂಧಿಸಿದಂತೆ ಪ್ರಸ್ತುತ ಹದಿಹರೆಯದವರ ಪ್ರಕರಣಗಳೇ ಹೆಚ್ಚಿವೆ ಎಂದರು.

ಹದಿಹರೆಯ ಎಂಬುದು ಬಿರುಗಾಳಿ, ಚಂಡಮಾರುತದ ವಯಸ್ಸು. ಹದಿಹರೆಯದ 18ವರ್ಷದೊಳಗಿನ ಹೆಣ್ಣು ಮಕ್ಕಳು ಗರ್ಭಿಣಿಯರಾಗುವ ಪ್ರಕರಣಗಳು ಹೆಚ್ಚುತ್ತಿದೆ. ಇದನ್ನು ತಡೆಗಟ್ಟಿ ಅವರುಗಳು ಸುರಕ್ಷಿತ ವಾತಾವರಣದಲ್ಲಿರುವಂತೆ ನೋಡಿಕೊಳ್ಳಬೇಕಿದೆ ಎಂದು ಡಾ.ತಿಪ್ಪೇಸ್ವಾಮಿ, ದೇಶದ ಜನಸಂಖ್ಯೆಯ ಶೇ.42ರಷ್ಟು ಮಕ್ಕಳಿದ್ದಾರೆ ಎಂದರು.

ನ.14ರಿಂದ ಜ.24ರ ತನಕ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ನಡೆಯುತ್ತಿದ್ದು, ಒಂದು ದಿನ ಮಕ್ಕಳ ಹಕ್ಕುಗಳ ಗ್ರಾಮಸಭೆ ನಡೆಸಬೇಕು. ಮಕ್ಕಳ ಗ್ರಾಮ ಸಭೆ ಕಡ್ಡಾಯ ಸುತ್ತೋಲೆಗೆ 20ವರ್ಷ ಸಂದರೂ ಪರಿಸ್ಥಿತಿ ಸುಧಾರಿಸಿಲ್ಲ ಎಂದು ಹೇಳಿದರು.




Tags

ResponsibilityChild Protection SocietyAbid Gadyal
share
ಬಿ ಬಿ ಶೆಟ್ಟಿಗಾರ್
ಬಿ ಬಿ ಶೆಟ್ಟಿಗಾರ್
Next Story
X