ಸೈಕಲ್‌ನಿಂದ ಬಿದ್ದು ಸವಾರ ಮೃತ್ಯು

ಕೋಟ, ಫೆ.18: ಸೈಕಲ್‌ನಿಂದ ಬಿದ್ದು ಸವಾರರೊಬ್ಬರು ಮೃತಪಟ್ಟ ಘಟನೆ ಫೆ.18ರಂದು ಬೆಳಗ್ಗೆ 8.30ರ ಸುಮಾರಿಗೆ ಸಾಲಿಗ್ರಾಮದ ಡಿವೈನ್ ಪಾರ್ಕ್ ಬಳಿ ನಡೆದಿದೆ.
ಮೃತರನ್ನು ಮೂಡಹಡು ಗ್ರಾಮದ ನಾರಾಯಣ ಪೂಜಾರಿ(69) ಎಂದು ಗುರುತಿಸಲಾಗಿದೆ. ಮೇಸ್ತ್ರಿ ಕೆಲಸ ಮಾಡಿ ಕೊಂಡಿದ್ದ ಇವರು ಸೈಕಲ್‌ನಲ್ಲಿ ಕೆಲಸಕ್ಕೆ ಹೊರಟಿದ್ದರು. ದಾರಿ ಮಧ್ಯೆ ತಲೆ ತಿರುಗಿ ಸೈಕಲ್‌ನಿಂದ ಬಿದ್ದರೆನ್ನಲಾಗಿದೆ. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಅವರು, ಬ್ರಹ್ಮಾವರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




