Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕರಾವಳಿಯಲ್ಲಿ ಏರುತ್ತಿರುವ ತಾಪಮಾನ: ಶಾಖದ...

ಕರಾವಳಿಯಲ್ಲಿ ಏರುತ್ತಿರುವ ತಾಪಮಾನ: ಶಾಖದ ಹೊಡೆತದಿಂದ ಆರೋಗ್ಯ ಕಾಪಾಡಲು ಸಲಹೆ - ಸೂಚನೆ

ವಾರ್ತಾಭಾರತಿವಾರ್ತಾಭಾರತಿ16 April 2026 7:17 PM IST
share
ಕರಾವಳಿಯಲ್ಲಿ ಏರುತ್ತಿರುವ ತಾಪಮಾನ: ಶಾಖದ ಹೊಡೆತದಿಂದ ಆರೋಗ್ಯ ಕಾಪಾಡಲು ಸಲಹೆ - ಸೂಚನೆ

ಉಡುಪಿ, ಎ.16: ಪ್ರಸ್ತುತ ಕರಾವಳಿ ಜಿಲ್ಲೆಗಳಲ್ಲಿ ಸೂರ್ಯನ ತಾಪಮಾನ ಏರುತಿದ್ದು, ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಅಪರಾಹ್ನ 3 ಗಂಟೆಯವರೆಗೆ ತಾಪಮಾನ 33ರಿಂದ 34 ಡಿಗ್ರಿ ತಲುಪುತ್ತಿದೆ. ಆದರೆ ಗಾಳಿಯಲ್ಲಿರುವ ಅಧಿಕ ತೇವಾಂಶದಿಂದಾಗಿ ಉಷ್ಣತೆಯ ನಿಜವಾದ ಅನುಭವ 38 ಡಿಗ್ರಿಯಷ್ಟಿರುತ್ತದೆ ಎಂದು ಹವಾಮಾನ ಮಾಪಕಗಳು ಸೂಚಿಸುತ್ತಿವೆ.

ಈಗಾಗಲೇ ಹವಾಮಾನ ಇಲಾಖೆ ಈ ಬಾರಿಯ ಬೇಸಿಗೆಯಲ್ಲಿ (ಮಾರ್ಚ್‌ನಿಂದ ಮೇ ಕೊನೆಯವರಿಗೆ ಅಥವಾ ಮಳೆಗಾಲ ಪ್ರಾರಂಭ ಗೊಳ್ಳುವ ಜೂನ್ ಮೊದಲ ವಾರದವರೆಗೆ) ರಾಜ್ಯದ ಬಹುತೇಕ ಭಾಗಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿರುವ ಸಾಧ್ಯತೆ ಇದ್ದು, ಕರಾವಳಿಯಲ್ಲೂ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ಸೂಚನೆ ನೀಡಿದೆ.

ಹೀಗಾಗಿ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ಮೇಲೆ ವಿಶೇಷ ಪರಿಣಾಮ ಬೀರುತ್ತಿದೆ. ವಿಶೇಷವಾಗಿ ಮಕ್ಕಳು, ವೃದ್ಧರು ಹಾಗೂ ಅನಾರೋಗ್ಯ ಪೀಡಿತರ ಮೇಲೆ ಇದು ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ಬಿರು ಬಿಸಿಲಿನಿಂದ ಉಂಟಾಗುವ ಬಳಲಿಕೆ, ನಿರ್ಜಲೀಕರಣ ಹಾಗೂ ಶಾಖಾ ಘಾತ (ಹೀಟ್ ಸ್ಟ್ರೋಕ್)ಗಳನ್ನು ತಡೆಯಲು ಜಿಲ್ಲೆಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಜನತೆಗೆ ಹಲವು ಸಲಹೆ-ಸೂಚನೆಗಳನ್ನು ನೀಡಿದೆ.

ಅತೀ ಹೆಚ್ಚಿನ ತಾಪಮಾನದಿಂದಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾರ್ವಜನಿಕರು ಸಾಧ್ಯವಾದಷ್ಟು ಗರಿಷ್ಠ ತಾಪಮಾನದ ಅವಧಿಯಾದ ಅಪರಾಹ್ನ 12ರಿಂದ 3:00ಗಂಟೆಯವರೆಗೆ ಬಿಸಿಲಿಗೆ ಹೋಗುವುದನ್ನು ಕಡಿಮೆ ಮಾಡ ಬೇಕು. ಬಾಯಾರಿಕೆಯ ಅನುಭವವಾಗದಿದ್ದರೂ ಸಹ ಸಾಕಷ್ಟು ನೀರು ಕುಡಿಯುತ್ತಿರಬೇಕು. ಸಾಧ್ಯವಾದಷ್ಟು ಹಗುರ ವಾದ, ತಿಳಿಬಣ್ಣದ, ಸಡಿಲವಾದ ಹತ್ತಿಬಟ್ಟೆಗಳನ್ನು ಧರಿಸಬೇಕು.ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕ, ಛತ್ರಿ/ಟೋಪಿ, ಬೂಟು ಅಥವಾ ಚಪ್ಪಲಿಗಳನ್ನು ಬಳಸಬೇಕು.

ವಾತಾವರಣದ ಉಷ್ಣತೆ ಹೆಚ್ಚಿರುವಾಗ ಅಂದರೆ 11:00ಗಂಟೆಯಿಂದ 3:00ರವರೆಗೆ ಶ್ರಮದಾಯಕ ಚಟುವಟಿಕೆ ಗಳನ್ನು ಆದಷ್ಟು ತಪ್ಪಿಸಬೇಕು. ಇದೇ ಅವಧಿಯಲ್ಲಿ ಹೊರಾಂಗಣಗಳಲ್ಲಿ ನಡೆಯುವ ಸಭಾ, ಸಮಾರಂಭಗಳು ನಡೆಯುವ ಪ್ರದೇಶದಲ್ಲಿ ಸಾರ್ವಜನಿಕರಿಗೆ ಬಿಸಿಲಿನಿಂದ ರಕ್ಷಣೆಯನ್ನು ನೀಡಲು ಅಗತ್ಯ ಶಾಮಿಯಾನ/ಪೆಂಡಾಲ್ ವ್ಯವಸ್ಥೆ ಮಾಡಬೇಕು. ಉತ್ತಮ ಗಾಳಿಯಾಡುವ ವ್ಯವಸ್ಥೆ ಹಾಗೂ ಸಭಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಬೇಕು. ಪ್ರಯಾಣಿಸುವಾಗ ನೀರನ್ನು ಜೊತೆಯಲ್ಲಿ ಕೊಂಡೊಯ್ಯಬೇಕು.

ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೋನೇಟೆಡ್ ತಂಪು ಪಾನೀಯ ಗಳನ್ನು ಸೇವಿಸಬಾರದು. ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸಬೇಕು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬಾರದು. ಮೂರ್ಛೆ ಅಥವಾ ಅನಾರೋಗ್ಯ ಅನಿಸಿದ್ದಲ್ಲಿ ತಕ್ಷಣ ವೈದ್ಯರನ್ನು ಭೇಟಿ ಮಾಡಿ ಸೂಕ್ತ ಚಿಕಿತ್ಸೆ ಪಡೆಯಬೇಕು.

ಮಜ್ಜಿಗೆ ಕುಡಿಯಿರಿ: ಸಾಧ್ಯವಿದ್ದಷ್ಟು ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ಓಆರ್‌ಎಸ್‌ನ್ನು ಬಳಸ ಬೇಕು. ಋತುಮಾನದಲ್ಲಿ ಲಭ್ಯವಿರುವ ಹಾಗೂ ಅಧಿಕ ನೀರಿನ ಅಂಶವನ್ನು ಹೊಂದಿರುವ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್ ಹಣ್ಣುಗಳನ್ನು, ತರಕಾರಿ, ಸೊಪ್ಪು, ಎಳನೀರು ಗಳನ್ನು ಹೆಚ್ಚಾಗಿ ಸೇವಿಸಬೇಕು. ಸಾಕುಪ್ರಾಣಿಗಳನ್ನು ಸಹ ನೆರಳಿನಲ್ಲಿ ಇರಿಸಿ, ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸುತ್ತಿರಬೇಕು.

ಮನೆಯನ್ನು ತಂಪಾಗಿರಿಸಲು ಪರದೆ, ಶಟರ್ ಅಥವಾ ಸನ್‌ಶೇಡ್‌ಗಳನ್ನು ಬಳಸಬೇಕು. ಹೊರಗೆ ತೆರಳುವಾಗ ನೀರಿನ ಬಾಟೆಲ್, ಛತ್ರಿ, ಟೋಪಿ ಅಥವಾ ಕ್ಯಾಪ್, ಹೆಡ್‌ಕವರ್, ಹ್ಯಾಂಡ್‌ಟವೆಲ್, ಹ್ಯಾಂಡ್ ಫ್ಯಾನ್, ಎಲೆಕ್ಟ್ರೋಲೈಟ್, ಗ್ಲೂಕೋಸ್, ಓಆರ್‌ಎಸ್‌ನ್ನು ಒಳಗೊಂಡಿರುವ ಅತೀ ಹೆಚ್ಚು ತಾಪಮಾನವನ್ನು ತಡೆಗಟ್ಟುವ ಕಿಟ್ ಅನ್ನು ಒಯ್ಯುವುದು ಉತ್ತಮ. ಅಲ್ಲದೇ ಆರೋಗ್ಯ ಇಲಾಖೆ ಆಗಾಗ ನೀಡುವ ಮಾರ್ಗಸೂಚಿಗಳನ್ನು ಪಾಲಿಸಬೇಕು.

ಅತೀ ಹೆಚ್ಚು ತಾಪಮಾನದಿಂದ ಸಾಮಾನ್ಯವಾಗಿ ಆರೋಗ್ಯದ ಮೇಲೆ ನಿರ್ಜಲೀಕರಣ, ಶಾಖಸೆಳೆತ, ಶಾಖದ ಬಳಲಿಕೆ ಮತ್ತು ಶಾಖದ ಆಘಾತ ದಂತಹ ವ್ಯತಿರಿಕ್ತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇರುತ್ತದೆ. ತಾಪಮಾನದಿಂದ ಆಘಾತಕ್ಕೊಳಗಾದ ವ್ಯಕ್ತಿಯನ್ನು ನೆರಳಿನ ಅಡಿಯಲ್ಲಿ ತಂಪಾದ ಸ್ಥಳಕ್ಕೆ ಸ್ಥಳಾಂತರಿಸಬೇಕು. ಒದ್ದೆಯಾದ ಬಟ್ಟೆಯಿಂದ ಮೈ ಒರೆಸಬೇಕು ಹಾಗೂ ದೇಹದ ಉಷ್ಣತೆಯನ್ನು ತಗ್ಗಿಸಲು ತಲೆಯ ಮೇಲೆ ನೀರನ್ನು ಹಾಕುತ್ತಿರಬೇಕು. ನೀರು ಅಥವಾ ಪುನರ್ಜಲೀಕರಣ ಪಾನೀಯ ಗಳಾದ ಓಆರ್‌ಎಸ್, ನಿಂಬೆ ಪಾನಕ ನೀಡಬೇಕು. ವ್ಯಕ್ತಿಗೆ ತಂಪಾದ ಗಾಳಿಯ ವ್ಯವಸ್ಥೆ ಮಾಡಬೇಕು. ರೋಗಲಕ್ಷಣಗಳು ಉಲ್ಬಣಿಸಿದರೆ ವೈದ್ಯರನ್ನು ಸಂಪರ್ಕಿಸಬೇಕು. ಅತೀ ಹೆಚ್ಚು ತಾಪಮಾನದಿಂದ ಉದ್ಭವಿಸುವ ರೋಗ ಲಕ್ಷಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ನೀಡುವ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

Tags

temperaturescoastAdviceprotecthealthheatstroke
share
ವಾರ್ತಾಭಾರತಿ
ವಾರ್ತಾಭಾರತಿ
Next Story
X