Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬ್ರಹ್ಮಾವರದಲ್ಲಿ ರಸ್ತೆ ಅಪಘಾತ: ಹುಲಿ...

ಬ್ರಹ್ಮಾವರದಲ್ಲಿ ರಸ್ತೆ ಅಪಘಾತ: ಹುಲಿ ವೇಷದ ಕಲಾವಿದ ಮಂಜುನಾಥ್ ಸ್ಥಳದಲ್ಲೇ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ1 July 2026 6:02 PM IST
share
ಬ್ರಹ್ಮಾವರದಲ್ಲಿ ರಸ್ತೆ ಅಪಘಾತ: ಹುಲಿ ವೇಷದ ಕಲಾವಿದ ಮಂಜುನಾಥ್  ಸ್ಥಳದಲ್ಲೇ ಮೃತ್ಯು

ಉಡುಪಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖ್ಯಾತ ಹುಲಿ ವೇಷದ ಕಲಾವಿದರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬ್ರಹ್ಮಾವರದ ಹೇರೂರು ರೂಡ್‌ಸೆಟ್ ಕ್ರಾಸಿಂಗ್ ಸಮೀಪ ನಡೆದಿದೆ.

ಮೃತರನ್ನು ಉಡುಪಿಯ ಸಂತೆಕಟ್ಟೆ ಲಕ್ಷ್ಮೀನಗರ ನಿವಾಸಿ ಮಂಜುನಾಥ್ (43) ಎಂದು ಗುರುತಿಸಲಾಗಿದೆ.

ಗೋವಾದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಕಾರಿನಲ್ಲಿ ಐವರು ಉಡುಪಿಗೆ ಹಿಂದಿರುಗುತ್ತಿದ್ದರು. ಈ ವೇಳೆ ಉಡುಪಿ ಕಡೆಗೆ ಸಂಚರಿಸುತ್ತಿದ್ದ ವೇಗದೂತ ಬಸ್ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಬಸ್ಸಿಗೆ ಢಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಮಂಜುನಾಥ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಉಳಿದ ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಮಂಜುನಾಥ್ ಕರಾವಳಿಯ ಖ್ಯಾತ ಹುಲಿ ವೇಷದ ಕಲಾವಿದರಾಗಿದ್ದು, ಹಲವು ವರ್ಷಗಳಿಂದ ಹುಲಿ ವೇಷಧಾರಿಗಳಿಗೆ ಆಕರ್ಷಕ ಪೈಂಟಿಂಗ್‌ ಮಾಡುವ ಮೂಲಕ ಗುರುತಿಸಿಕೊಂಡಿದ್ದರು.

ಘಟನೆ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Tags

Road accidentBrahmavarTiger costumeartistManjunath
share
ವಾರ್ತಾಭಾರತಿ
ವಾರ್ತಾಭಾರತಿ
Next Story
X