ರಸ್ತೆ ಅಪಘಾತ: ಸ್ಕೂಟರ್ ಸವಾರ ಮೃತ್ಯು

ಪಡುಬಿದ್ರಿ, ನ.16: ಸ್ಕೂಟರೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ತೆಂಕ ಎರ್ಮಾಳು ಗ್ರಾಮದ ಎರ್ಮಾಳು ಕಲ್ಯಾಣಿ ಪೆಟ್ರೋಲ್ ಬಂಕ್ ಬಳಿ ನ.15ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಪಿ.ಎ.ಮಾದವ ರಾವ್(68) ಎಂದು ಗುರುತಿಸಲಾಗಿದೆ. ಇವರು ಬೈಕಿನಲ್ಲಿ ಪಡುಬಿದ್ರೆ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದು, ಆಗ ಬೈಕಿನ ಹ್ಯಾಂಡಲ್ ಹಿಂದಿನಿಂದ ಬರುತ್ತಿದ್ದ ಕಾರಿನ ಎಡಭಾಗಕ್ಕೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಮಾದವ ರಾವ್ ಸ್ಕೂಟರ್ ಸಮೇತ ರಸ್ತೆಗೆ ಬಿದ್ದರು. ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು, ಚಿಕಿತ್ಸೆ ಫಲಕಾರಿ ಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




