Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೋಟ್ ಅಗ್ನಿದುರಂತದಿಂದ 13 ಕೋಟಿ...

ಬೋಟ್ ಅಗ್ನಿದುರಂತದಿಂದ 13 ಕೋಟಿ ರೂ.ನಷ್ಟದ ಅಂದಾಜು: ಗಂಗೊಳ್ಳಿಯಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ17 Nov 2023 9:24 PM IST
share
ಬೋಟ್ ಅಗ್ನಿದುರಂತದಿಂದ 13 ಕೋಟಿ ರೂ.ನಷ್ಟದ ಅಂದಾಜು: ಗಂಗೊಳ್ಳಿಯಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಗಂಗೊಳ್ಳಿ (ಕುಂದಾಪುರ): ಕಳೆದ ಸೋಮವಾರ ಗಂಗೊಳ್ಳಿ ಮ್ಯಾಂಗನೀಸ್ ವಾರ್ಫ್‌ನ ಬಂದರು ಇಲಾಖೆಗೆ ಸೇರಿದ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಮೀನುಗಾರಿಕಾ ಬೋಟುಗಳಿಗೆ ಬೆಂಕಿ ಹತ್ತಿ ಸಂಭವಿಸಿದ ಭೀಕರ ದುರಂತದಿಂದ ಸುಮಾರು 13ರಿಂದ 15 ಕೋಟಿ ರೂ.ನಷ್ಟದ ಅಂದಾಜು ಮಾಡಲಾಗಿದೆ. ಇನ್ನು 15 ದಿನದೊಳಗೆ ಎಲ್ಲರಿಗೂ ಪರಿಹಾರ ಒದಗಿಸಲು ಬೇಕಾದ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆಯನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ವ್ಯಕ್ತಪಡಿಸಿದ್ದಾರೆ.

ದುರಂತ ಸಂಭವಿಸಿದ ಪ್ರದೇಶಕ್ಕೆ ಇಂದು ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು ಈ ವಿಷಯ ತಿಳಿಸಿದರು. ಅಗ್ನಿ ದುರಂತದಲ್ಲಿ 9 ಬೋಟುಗಳು, ಒಂದು ದೋಣಿ, 2 ಡಿಂಗಿ ದೋಣಿ, 8-10 ಬಲೆ ರಾಶಿ ಹಾಗೂ 2 ಬೈಕ್ ಸೇರಿದಂತೆ ಇತರ ವಸ್ತುಗಳು ಸಂಪೂರ್ಣ ಸುಟ್ಟು ಹೋಗಿರುವ ಬಗ್ಗೆ ಅವರಿಗೆ ಮಾಹಿತಿ ನೀಡಲಾಯಿತು.

ದುರಂತದ ಬಗ್ಗೆ ತಮ್ಮ ಬೇಸರ ವ್ಯಕ್ತಪಡಿಸಿದ ಸಚಿವರು, ಈ ಕುರಿತು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಮೀನುಗಾರಿಕೆ ಮತ್ತು ಬಂದರು ಸಚಿವರೊಂದಿಗೆ ಚರ್ಚಿಸಿ ಪರಿಹಾರ ಒದಗಿಸುವ ಬಗ್ಗೆ ಅಂತಿಮವಾಗಿ ನಿರ್ಧರಿಸಲಾಗುವುದು ಎಂದು ಉಸ್ತುವಾರಿ ಸಚಿವರು ತಿಳಿಸಿದರು.

ದುರಂತ ಸಂಭವಿಸಿದ ದಿನದಂದೇ ಮೀನುಗಾರಿಕಾ ಸಚಿವರು ಇಲ್ಲಿಗೆ ಭೇಟಿ ನೀಡಿ ಪರಿಶೀಲಿಸಿ, ತ್ವರಿತಗತಿಯಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅವರು ಖಂಡಿತ ಮೀನುಗಾರರಿಗೆ ಪರಿಹಾರ ನೀಡುವ ಬಗ್ಗೆ ಸೂಕ್ತ ಕ್ರಮಕೈಗೊಳ್ಳುತ್ತಾರೆ. ಗೋಪಾಲ ಪೂಜಾರಿ ಅವರೂ ಈಗಾಗಲೇ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಅಗ್ನಿ ದುರಂತದ ಮಾಹಿತಿಯನ್ನು ನೀಡಿದ್ದಾರೆ ಎಂದರು.

ಇನ್ನೊಂದೆರಡು ದಿನಗಳಲ್ಲಿ ನಾವೆಲ್ಲರೂ ಮತ್ತೊಮ್ಮೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮೀನುಗಾರರಿಗ ಗರಿಷ್ಠ ಪರಿಹಾರ ದೊರೆಯುವಂತೆ ಪ್ರಯತ್ನಿಸುತ್ತೇವೆ. ಬದುಕು ಕಳೆದುಕೊಂಡ ಮೀನುಗಾರ ಕುಟುಂಬಗಳಿಗೆ ಮತ್ತೆ ಬದುಕು ಕಟ್ಟಲು ನಾವು ಜೊತೆಗಿರುತ್ತೇವೆ. ಸರಕಾರ ಎಂದೆಂದಿಗೂ ಅವರೊಂ ದಿಗಿರುತ್ತದೆ ಎಂದು ಹೆಬ್ಬಾಳ್ಕರ್ ತಿಳಿಸಿದರು.

ಇನ್ನು ಮುಂದೆ ಇಂತಹ ದುರ್ಘಟನೆ ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬಂದರಿನಲ್ಲಿ ಅಗ್ನಿ ಶಾಮಕ ದಳ ಸ್ಥಾಪನೆಗೆ ಕ್ರಮ ವಹಿಸಲಾ ಗುವುದು ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X