ಸೌಜನ್ಯ ಪ್ರಕರಣ: ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಎಬಿವಿಪಿ ಆಗ್ರಹ

ಉಡುಪಿ, ಸೆ.16: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ಸೌಜನ್ಯ ಪ್ರಕರಣದಲ್ಲಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ವಿದ್ಯಾರ್ಥಿ ಸಭೆಯನ್ನು ಉಡುಪಿ ಬೋರ್ಡ್ ಹೈಸ್ಕೂಲ್ ಮೈದಾನದಲ್ಲಿ ಇಂದು ಆಯೋಜಿಸಲಾಗಿತ್ತು.
ನಗರ ಕಾರ್ಯದರ್ಶಿ ಶ್ರೀವತ್ಸ ಮಾತನಾಡಿ, ಸೌಜನ್ಯ ಪ್ರಕರಣದ ಗಂಭೀರತೆ ಯನ್ನು ಅರಿತು ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ನ್ಯಾಯಾಲಯದಲ್ಲಿ ಮೇಲ್ಮನವಿಯನ್ನು ಸಲ್ಲಿಸಬೇಕು. ಇಲ್ಲದಿದ್ದರೆ ಸಮಾಜದಲ್ಲಿ ಈ ರೀತಿ ದ್ವಂದ್ವ ಧ್ವೇಷ ಆವೇಶದ ವಾತಾವರಣವು ಮುಂದುವರೆಯಲಿದೆ ಎಂದು ಹೇಳಿದರು.
ಎಬಿವಿಪಿ ತಾಲೂಕು ಸಂಚಾಲಕ ಅಜಿತ್ ಜೋಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ನಗರ ಸಹ ಕಾರ್ಯದರ್ಶಿ ಕಾರ್ತಿಕ್, ಭಾವನಾ, ನಗರ ವಿದ್ಯಾರ್ಥಿನಿ ಪ್ರಮುಖ್ ಸಂಹಿತಾ, ಕೃತಿ, ನಗರ ಹೋರಾಟ ಪ್ರಮುಖ್ ಭೂಷಣ್, ಪ್ರಸನ್ನ ಮತ್ತು ಪ್ರಮುಖರಾದ ಮಂಗಳಗೌರಿ, ಮನು, ಶಶಾಂಕ್, ಸ್ವಸ್ತಿಕ್, ನವೀನ್, ಪ್ರದೀಪ್, ಅನೀಶ್, ಸಂದೀಪ್, ಶ್ರೀಹರಿ ಮೊದಲಾದವರು ಉಪಸ್ಥಿತರಿದ್ದರು.
Next Story





