ಬಸ್ ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು

ಕಾಪು, ಜ.5: ಬಸ್ಸೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರೊಬ್ಬರು ಮೃತಪಟ್ಟ ಘಟನೆ ಪಾಂಗಾಳ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಮಲ್ಪೆ ಪಡುಕೆರೆ ಮೂಲದ ಕಾಪು ಮೂಳೂರು ನಿವಾಸಿ ಕೃಷ್ಣರಾಜ ಎಸ್.ಕರ್ಕೇರ(50) ಎಂದು ಗುರುತಿಸಲಾಗಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆ ಬರುತ್ತಿದ್ದ ಖಾಸಗಿ ಬಸ್, ಎದುರಿನಲ್ಲಿ ಹೋಗುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ರಸ್ತೆಗೆ ಬಿದ್ದು ಗಾಯಗೊಂಡ ಸವಾರ ಕೃಷ್ಣರಾಜ ಕರ್ಕೇರ ಅವರನ್ನು ಮೂಳೂರಿನ ಎಸ್‌ಡಿಪಿಐ ಅಂಬುಲೆನ್ಸ್ ನಲ್ಲಿ ಚಾಲಕ ಹಮೀದ್ ಹಾಗೂ ಸಾಮಾಜಿಕ ಕಾರ್ಯಕರ್ತ ಜಲಾಲುದ್ದೀನ್ ಕೂಡಲೇ ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸಿದರು. ಗಂಭೀರ ಸ್ಥಿತಿಯಲ್ಲಿದ್ದ ಕೃಷ್ಣರಾಜ ಕರ್ಕೇರ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





