ಪಿಕಪ್ ವಾಹನ ಹರಿದು ಸ್ಕೂಟರ್ ಸವಾರ ಮೃತ್ಯು

ಉಡುಪಿ, ಫೆ.12: ಪಿಕಪ್ ವಾಹನವೊಂದು ಮೈಮೇಲೆ ಹರಿದ ಪರಿಣಾಮ ಅಪಘಾತದಿಂದ ರಸ್ತೆಗೆ ಬಿದ್ದ ಸ್ಕೂಟರ್ ಸವಾರರೊಬ್ಬರು ಮೃತಪಟ್ಟ ಘಟನೆ ಉಡುಪಿ ಎಂಜಿಎಂ ಕಾಲೇಜಿನ ಎದುರು ರಾಷ್ಟ್ರೀಯ ಹೆದ್ದಾರಿ 169(ಎ)ರಲ್ಲಿ ಗುರುವಾರ ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಗೋಪಾಲ್ ಮೂಲ್ಯ ಸಗ್ರಿ(71) ಎಂದು ಗುರುತಿಸಲಾಗಿದೆ. ಮಣಿಪಾಲ ಕಡೆಗೆ ಹೋಗುತ್ತಿದ್ದ ಸ್ಕೂಟರ್‌ಗೆ ಬುಲೆಟ್ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರಿಂದ ರಸ್ತೆಗೆ ಬಿದ್ದ ಸ್ಕೂಟರ್ ಸವಾರ ಗೋಪಾಲ ಅವರ ಮೇಲೆ ಹಿಂದಿ ನಿಂದ ಬರುತ್ತಿದ್ದ ಪಿಕಪ್ ವಾಹನ ಹರಿಯಿತ್ತೆನ್ನಲಾಗಿದೆ. ಅಪಘಾತದಿಂದ ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.
ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




