Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ತಲ್ಲೂರಿನಲ್ಲಿ ಪರಿಶಿಷ್ಟ ಜಾತಿ/ಪಂಗಡದ...

ತಲ್ಲೂರಿನಲ್ಲಿ ಪರಿಶಿಷ್ಟ ಜಾತಿ/ಪಂಗಡದ ಕುಂದುಕೊರತೆ ಸಭೆ; ಹೆಚ್ಚುತ್ತಿರುವ ಗಾಂಜಾ ಹಾವಳಿಗೆ ಕಡಿವಾಣ ಹಾಕಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ12 July 2026 9:30 PM IST
share
ತಲ್ಲೂರಿನಲ್ಲಿ ಪರಿಶಿಷ್ಟ ಜಾತಿ/ಪಂಗಡದ ಕುಂದುಕೊರತೆ ಸಭೆ; ಹೆಚ್ಚುತ್ತಿರುವ ಗಾಂಜಾ ಹಾವಳಿಗೆ ಕಡಿವಾಣ ಹಾಕಲು ಆಗ್ರಹ

ಕುಂದಾಪುರ: ಕುಂದಾಪುರ ಪೊಲೀಸ್ ಠಾಣೆಯ ವತಿಯಿಂದ ಪರಿಶಿಷ್ಟ ಜಾತಿ/ಪಂಗಡದ ಮಾಸಿಕ ಕುಂದುಕೊರತೆ ಸಭೆಯನ್ನು ತಲ್ಲೂರು ಗ್ರಾಮದ ಕೋಟೆಬಾಗಿಲಿನ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಠಾಣಾಧಿಕಾರಿ ನಂಜನಾಯ್ಕ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಸಭೆಯಲ್ಲಿ ಗ್ರಾಮಸ್ಥರು ತಮ್ಮ ಸಮಸ್ಯೆಗಳು ಹಾಗೂ ಸಾರ್ವಜನಿಕ ಹಿತಾಸಕ್ತಿಯ ಹಲವು ವಿಷಯಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ಗ್ರಾಮದಲ್ಲಿ ಹೆಚ್ಚುತ್ತಿರುವ ಗಾಂಜಾ ಹಾವಳಿಗೆ ತಕ್ಷಣ ಕಡಿವಾಣ ಹಾಕುವಂತೆ ವಿಜೇಂದ್ರ ಆಗ್ರಹಿಸಿದ್ದು, ಚೇತನ್ ಸೇರಿದಂತೆ ಹಲವರು ಈ ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿದರು.

ದಲಿತ ಮುಖಂಡ ಚಂದ್ರಮ ತಲ್ಲೂರು ಮಾತನಾಡಿ, ಗ್ರಾಮ ಪಂಚಾಯತ್‌ನ ಸರಕಾರಿ ಹೌಸ್‌ಸೈಟ್‌ನಲ್ಲಿ ಮನೆ ನಿರ್ಮಿಸಿಕೊಂಡಿರುವ ಮಹಾಬಲ ಎಂಬವರಿಗೆ ತೊಂದರೆ ನೀಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಜೊತೆಗೆ, ತಲ್ಲೂರು ಗ್ರಾಮದ ದಲಿತರಿಗೆ ಚಾಲನಾ ಪರವಾನಗಿ ನೀಡುವ ಉದ್ದೇಶದಿಂದ ಪೊಲೀಸ್ ಇಲಾಖೆ ಹಾಗೂ ಆರ್‌ಟಿಒ ಇಲಾಖೆಯ ಜಂಟಿ ಶಿಬಿರವನ್ನು ಗ್ರಾಮ ದಲ್ಲಿಯೇ ಆಯೋಜಿಸಬೇಕು ಎಂದು ಮನವಿ ಮಾಡಿದರು.

ಉಮೇಶ್ ಎಸ್.ಕೆ. ಅವರು ಬೀಟ್ ಪೊಲೀಸ್ ಸಿಬ್ಬಂದಿ ಗ್ರಾಮಸ್ಥರಿಗೆ ಅಗತ್ಯ ಸಮಯದಲ್ಲಿ ಲಭ್ಯರಾಗಿರಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿದರು. ಕಾಲೇಜು ವಿದ್ಯಾರ್ಥಿ ಗೌತಮ್ ತಲ್ಲೂರು, ದೊಡ್ಡಮನೆ ಸಮೀಪ ಪಾಚಿ ಕಟ್ಟಿರುವ ಕಾಂಕ್ರೀಟ್ ರಸ್ತೆಯಲ್ಲಿ ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಜಾರಿ ಬೀಳುತ್ತಿರುವ ಅಪಾಯದ ಬಗ್ಗೆ ಸಂಬಂಧಪಟ್ಟ ಇಲಾಖೆ ತುರ್ತು ಗಮನ ಹರಿಸಬೇಕೆಂದು ಮನವಿ ಸಲ್ಲಿಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಠಾಣಾಧಿಕಾರಿ ನಂಜನಾಯ್ಕ, ಪರಿಶಿಷ್ಟ ಜಾತಿ/ಪಂಗಡದವರ ಕಾನೂನುಬದ್ಧ ಹಕ್ಕುಗಳು ಹಾಗೂ ರಕ್ಷಣಾ ಕ್ರಮಗಳ ಕುರಿತು ವಿವರಿಸಿದರು. ಯಾವುದೇ ಸಮಸ್ಯೆ ಎದುರಾದಾಗ ತಕ್ಷಣ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕು ಹಾಗೂ ಪೊಲೀಸ್ ಸಹಾಯವಾಣಿಯ ಸೌಲಭ್ಯವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮ ಘರ್ಜನೆ) ರಾಜ್ಯ ಸಂಚಾಲಕ ಉದಯಕುಮಾರ ತಲ್ಲೂರು ಮಾತನಾಡಿ, ಗ್ರಾಮಸ್ಥರು ಯಾವುದೇ ಸಮಸ್ಯೆಯನ್ನು ನೇರವಾಗಿ ಠಾಣಾಧಿಕಾರಿಗಳ ಗಮನಕ್ಕೆ ತರಬೇಕು. ಹೊರಗಿನಿಂದ ಬರುವವರು ಅಹಿತಕರ ಚಟುವಟಿಕೆಗಳಲ್ಲಿ ತೊಡಗುವ ಮುನ್ನವೇ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಎಎಸ್‌ಐ ವಿಲ್ಫ್ರೆಡ್ ಡಿಸೋಜ, ಎಎಸ್‌ಐ ರಾಜು ಬೋವಿ, ಪೊಲೀಸ್ ಸಿಬ್ಬಂದಿ ಚಂದ್ರ ಶೆಟ್ಟಿ, ಪ್ರವೀಣ್ ನೇಜಾ, ಹೆಡ್ ಕಾನ್‌ಸ್ಟೇಬಲ್ ಗಿರೀಶ್, ಜೈ ಕರ್ನಾಟಕ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಸುದೀರ್, ಗ್ರಾಪಂ ಮಾಜಿ ಸದಸ್ಯ ಅಕ್ಷಯ್ ಹಾಗೂ ಗ್ರಾಮಸ್ಥರಾದ ಜ್ಯೋತಿ ಟೀಚರ್, ಅಮೀನ, ಬಾಬಿ, ಪ್ರಕಾಶ್, ರಮೇಶ್, ಮಂಜು, ರಂಜೀತ್, ಬಾಲಚಂದ್ರ, ನಿತೀನ್, ಯೋಗೀಶ್, ಮುನ್ನ, ಗಗನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸಭೆಯಲ್ಲಿ ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕೆ ಪೊಲೀಸ್ ಇಲಾಖೆ ಸ್ಪಂದಿಸುವ ಭರವಸೆ ನೀಡಿದರೆ, ಗ್ರಾಮಸ್ಥರು ಪೊಲೀಸ್ ಇಲಾಖೆಯೊಂದಿಗೆ ಸಹಕಾರದಿಂದ ಸಮಾಜದ ಶಾಂತಿ, ಸುರಕ್ಷತೆ ಹಾಗೂ ಅಭಿವೃದ್ಧಿಗೆ ಕೈಜೋಡಿಸುವ ಸಂಕಲ್ಪ ವ್ಯಕ್ತಪಡಿಸಿದರು.

Tags

SC/STTalluruUdupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X