Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪಿವಿಜಿಟಿ ಸಮುದಾಯಕ್ಕೆ ಉದ್ಯೋಗ...

ಪಿವಿಜಿಟಿ ಸಮುದಾಯಕ್ಕೆ ಉದ್ಯೋಗ ನೇಮಕಾತಿಯಲ್ಲಿ ಪ್ರತ್ಯೇಕ ವ್ಯವಸ್ಥೆಗೆ ಕೊರಗ ಒಕ್ಕೂಟದಿಂದ ಮುಖ್ಯಮಂತ್ರಿಗೆ ಮನವಿ: ಸುಶೀಲಾ ನಾಡ

ವಾರ್ತಾಭಾರತಿವಾರ್ತಾಭಾರತಿ26 March 2025 8:19 PM IST
share
ಪಿವಿಜಿಟಿ ಸಮುದಾಯಕ್ಕೆ ಉದ್ಯೋಗ ನೇಮಕಾತಿಯಲ್ಲಿ ಪ್ರತ್ಯೇಕ ವ್ಯವಸ್ಥೆಗೆ ಕೊರಗ ಒಕ್ಕೂಟದಿಂದ ಮುಖ್ಯಮಂತ್ರಿಗೆ ಮನವಿ: ಸುಶೀಲಾ ನಾಡ

ಉಡುಪಿ: ರಾಜ್ಯದಲ್ಲಿ ಅಂಚಿಗೆ ತಳ್ಳಲ್ಪಟ್ಟ ಬುಡಕಟ್ಟು ಸಮುದಾಯ (ಪಿವಿಜಿಟಿ) ಎಂದು ಕೇಂದ್ರ ಸರಕಾರದಿಂದ 1986ರಲ್ಲಿ ಗುರುತಿಸಲ್ಪಟ್ಟ ಕೊರಗರು ಹಾಗೂ ಜೇನು ಕುರುಬ ಸಮುದಾಯದ ವಿದ್ಯಾವಂತರು ಈಗಲೂ ಸಮಾಜದ ಮುಖ್ಯವಾಹಿನಿಯಲ್ಲಿ ಸ್ಥಾನ ಪಡೆಯಲು ವಿಫಲರಾಗುತಿದ್ದು, ಇವರಿಗಾಗಿ ಪ್ರತ್ಯೇಕ ವ್ಯವಸ್ಥೆಯ ಮೂಲಕ ಸರಕಾರಿ ಉದ್ಯೋಗಗಳಿಗೆ ನೇರ ಆಯ್ಕೆ ಸಾಧ್ಯವಾಗುವಂತೆ ಮೀಸಲಾತಿಯನ್ನು ನೀಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ನಿಯೋಗದೊಂದಿಗೆ ತೆರಳಿ ಮನವಿ ಅರ್ಪಿಸಿದ್ದು, ಅವರು ನಮ್ಮ ಬಹುಮುಖ್ಯ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂಧಿಸಿದ್ದಾರೆ ಎಂದು ಕರ್ನಾಟಕ-ಕೇರಳ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷೆ ಸುಶೀಲಾ ನಾಡ ತಿಳಿಸಿದ್ದಾರೆ.

ಉಡುಪಿ ಪ್ರೆಸ್ ಕ್ಲಬ್‌ನಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಒಟ್ಟು 75 ಪಿವಿಟಿಜಿ ಗುಂಪುಗಳಲ್ಲಿ ರಾಜ್ಯದ ಈ ಎರಡು ಸಮುದಾಯಗಳಿದ್ದು, ಈಗಲೂ ಅಸಹಾಯಕ, ದುರ್ಬಲ ಸ್ಥಿತಿಯಲ್ಲಿದೆ. ಹೀಗಾಗಿ ಪರಿಶಿಷ್ಟ ಪಂಗಡದಲ್ಲಿರುವ ಶೇ.7 ಮೀಸಲಾತಿ ಬಲಿಷ್ಠ ಸಮುದಾಯಗಳ ಪಾಲಾಗುತಿದ್ದು, ಕೊರಗ ಯುವಜನತೆ ಸರಕಾರಿ ಉದ್ಯೋಗಗಳಿಗೆ ಆಯ್ಕೆಯಾಗಲು ವಿಫಲರಾಗುತಿದ್ದಾರೆ ಎಂದವರು ಹೇಳಿದರು.

ಈ ಹಿನ್ನೆಲೆಯಲ್ಲಿ ಸರಕಾರಿ ಉದ್ಯೋಗಗಳಿಗೆ ನೇರ ನೇಮಕಾತಿ ಹಾಗೂ ಕೃಷಿಭೂಮಿ ಹಂಚಿಕೆಗಾಗಿ ಒತ್ತಾಯಿಸಿ ಕಳೆದ ಜುಲೈ ತಿಂಗಳಲ್ಲಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು 10ದಿನಗಳ ಕಾಲ ಧರಣಿ ಸತ್ಯಾಗ್ರಹ ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಸೋಮವಾರಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಅವರ ಸಹಕಾರದಿಂದ ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟದ ನಿಯೋಗವೊಂದು ಮುಖ್ಯಮಂತ್ರಿ ಅವರನ್ನು ಬೆಂಗಳೂರಿನ ಸಿಎಂ ನಿವಾಸ ಕಾವೇರಿಯಲ್ಲಿ ಭೇಟಿ ಬೇಡಿಕೆಗಳ ಮನವಿಯನ್ನು ಸಲ್ಲಿಸಿದೆ ಎಂದು ನಾಡ ತಿಳಿಸಿದರು.

ಈ ಸಂದರ್ಭದಲ್ಲಿ ನಿಯೋಗ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಣದೀಪ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಕೋಶದ ನಿರ್ದೇಶಕಿ ಊರ್ಮಿಳಾ, ಬುಡಕಟ್ಟು ಕಲ್ಯಾಣ ಇಲಾಖೆಯ ನಿರ್ದೇಶಕ ಕೆ.ಯೋಗಿಶ್ ಅವರನ್ನು ಭೇಟಿ ಮಾಡಿ ಸಮುದಾಯದ ಸಮಸ್ಯೆಗಳ ಕುರಿತು ಚರ್ಚಿಸಿ ಅವರಿಗೆ ಕರಾವಳಿಯಲ್ಲಿ ಅತ್ಯಂತ ಹಿಂದುಳಿದ ಕೊರಗ ಜನಾಂಗ ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಲಾಗಿದೆ ಎಂದರು.

ಜನಸಂಖ್ಯೆ ಇಳಿಮುಖ: 2011ರ ಜನಗಣತಿಯಂತೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿರುವ ಕೊರಗ ಸಮುದಾಯದ ಒಟ್ಟು ಜನಸಂಖ್ಯೆ 16,000 ಆಗಿತ್ತು. ಅದೀಗ 10ರಿಂದ 11ಸಾವಿರಕ್ಕೆ ಇಳಿದಿದೆ ಎಂದು ಅಂದಾಜಿಸಲಾಗಿದೆ. ಐಟಿಡಿಪಿ ಇಲಾಖೆಯ ಅಂದಾಜಿನಂತೆ ಉಡುಪಿ ಜಿಲ್ಲೆಯಲ್ಲಿ 7ರಿಂದ 8ಸಾವಿರ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುಮಾರು ಮೂರು ಸಾವಿರ ಕೊರಗರಿದ್ದಾರೆ.

1986ರಲ್ಲಿ ಕೇಂದ್ರ ಸರಕಾರ ಅತ್ಯಂತ ಹಿಂದುಳಿದ, ಅಸಹಾಯಕ, ದುರ್ಬಲ ಬುಡಕಟ್ಟು ಪಂಗಡವಾಗಿದ್ದ ಕೊರಗ ಸಮುದಾಯವನ್ನು ಪಿವಿಟಿಜಿ ಎಂದು ಘೋಷಿಸಿದ ಬಳಿಕ ಸಮುದಾಯದಲ್ಲಿ ಸ್ವಲ್ಪ ಮಟ್ಟಿನ ಜಾಗೃತಿ ಮೂಡತೊಡಗಿದ್ದು, ಶಿಕ್ಷಣ, ಆರೋಗ್ಯ, ಭೂಮಿ, ಘನತೆಯ ಬದುಕಿನ ವಿಷಯವನ್ನು ಮುಂದಿಟ್ಟು ಹೋರಾಟಗಳನ್ನು ಸಂಘಟಿಸಲಾಗಿತ್ತು. ಅದರಲ್ಲೂ ಕಳೆದ 40 ವರ್ಷಗಳಲ್ಲಿ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಲಾಯಿತು ಎಂದು ಸುಶೀಲಾ ನಾಡ ತಿಳಿಸಿದರು.

200 ಪದವೀಧರರು: ಕೊರಗ ಸಮುದಾಯದಲ್ಲಿ ಈಗ ಸುಮಾರು 200ರಷ್ಟು ಮಂದಿ ಪದವೀಧರರಿದ್ದಾರೆ. 70 ಮಂದಿ ಸ್ನಾತಕೋತ್ತರ ಪದವೀಧರರಿದ್ದಾರೆ. ನಾಲ್ವರು ವಿವಿಧ ವಿಷಯಗಳಲ್ಲಿ ಡಾಕ್ಟರೇಟ್ ಮಾಡಿದ್ದಾರೆ. ಮೂವರು ಇಂಜಿನಿಯರ್‌ಗಳು, ಒಬ್ಬ ಹೆಣ್ಣುಮಗಳು ಎಂಬಿಬಿಎಸ್ ಮುಗಿಸಿ ವೈದ್ಯೆ ಎನಿಸಿಕೊಂಡಿದ್ದಾರೆ. ನಾಲ್ವರು ಕಾನೂನು ಪದವೀಧರರೂ ಇದ್ದಾರೆ ಎಂದು ನಾಡ ವಿವರಿಸಿದರು.

ಆದರೆ ದುರಾದೃಷ್ಟದ ಸಂಗತಿ ಎಂದರೆ, ಕೊರಗ ಸಮುದಾಯಕ್ಕೆ ಸರಕಾರಿ ಉದ್ಯೋಗ ಎಂಬುದು ಮರೀಚಿಕೆ ಎಂಬಂತಾಗಿದೆ. ಹೆಚ್ಚಿನವರೆಲ್ಲಾ ನಿರುದ್ಯೋಗಿಗಳಾಗಿದ್ದಾರೆ. ಹೆಚ್ಚಿನವರು ಸಿಕ್ಕ ಉದ್ಯೋಗ ಮಾಡುತಿದ್ದಾರೆ. ಒಂದಿಬ್ಬರು ಮಾತ್ರ ಸರಕಾರಿ ಉದ್ಯೋಗದಲ್ಲಿದ್ದಾರೆ. ಪೌರಕಾರ್ಮಿಕರಾಗಿ ದುಡಿಯುತಿದ್ದವರ 200-300 ಮಂದಿ ಮಕ್ಕಳು ಅನುಕಂಪದ ಆಧಾರದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಚಿಕ್ಕಪುಟ್ಟ ಕೆಲಸಗಳನ್ನು ಪಡೆದಿದ್ದಾರೆ ಎಂದವರು ಬೇಸರದಿಂದ ಹೇಳಿದರು.

ಕೊರಗ ಸಮುದಾಯದಲ್ಲಿ ನಾಲ್ವರು ಡಾಕ್ಟರೇಟ್ ಪಡೆದಿದ್ದರೂ ಕೇವಲ ಒಬ್ಬರಿಗೆ ಮಾತ್ರ ಮಂಗಳೂರು ವಿವಿಯಲ್ಲಿ ಖಾಯಂ ಉದ್ಯೋಗ ಸಿಕ್ಕಿದೆ. ಉಳಿದವರು ಅತಿಥಿ ಉಪನ್ಯಾಸಕರಾಗಿ ದುಡಿಯುತಿದ್ದಾರೆ. ಇದೇ ಸ್ಥಿತಿ ಉಳಿದ ಪದವೀಧರರದ್ದೂ ಆಗಿದೆ. ಪ.ಪಂಗಡದಲ್ಲಿರುವ ಬಲಾಢ್ಯ ಸಮುದಾಯಗಳ ಮುಂದೆ ಕೊರಗರು ಮೀಸಲಾತಿಯನ್ನೂ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನಮಗೆ ನೇರ ನೇಮಕಾತಿಗೆ ವ್ಯವಸ್ಥೆ ಕಲ್ಪಿಸುವಂತೆ ಮುಖ್ಯಮಂತ್ರಿ ಗಳಿಗೆ ಮನದಟ್ಟು ಮಾಡಿದ್ದು, ಶೀಘ್ರದಲ್ಲೇ ಕಾರ್ಯರೂಪಕ್ಕೆ ಬರಬಹುದೆಂಬ ವಿಶ್ವಾಸ ನಮಗಿದೆ ಎಂದರು.

ತಲಾ ಒಂದು ಎಕರೆ ಭೂಮಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸುಮಾರು 800 ಕುಟುಂಬಗಳು ಭೂಮಿಗಾಗಿ ಅರ್ಜಿ ಹಾಕಿದ್ದು, ಡಾ.ಮಹಮ್ಮದ್ ಪೀರ್ ವರದಿಯಾಧಾರದಲ್ಲಿ ಇವರಿಗೆ ತಲಾ ಒಂದು ಎಕರೆ ಭೂಮಿ ನೀಡುವಂತೆಯೂ ಮನವಿ ಮಾಡಲಾಗಿದೆ. ಅಲ್ಲದೇ ಬೇರೆ ಬೇರೆ ವಿಧದಲ್ಲಿ ನಿಷೇಧಿತ ಅಜಲು ಪದ್ಧತಿ ಈಗಲೂ ಜೀವಂತವಾಗಿದ್ದು, ಅದನ್ನು ಸಂಪೂರ್ಣವಾಗಿ ತೊಡೆದುಹಾಕುವಂತೆ, ಕೊರಗರ ಜನಸಂಖ್ಯೆ ಕುಸಿಯುತ್ತಿರುವ ಬಗ್ಗೆ, ಅವರ ಆರೋಗ್ಯ ಸಮಸ್ಯೆಗಳ ಕುರಿತು ಅಧ್ಯಯನ ನಡೆಸಿ ಸೂಕ್ತ ಕ್ರಮಕೈಗೊಳ್ಳುವಂತೆಯೂ ಒತ್ತಾಯಿಸಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಸಂಯೋಜಕ ಕೆ.ಪುತ್ರ, ಮುಖಂಡರಾದ ಬೋಗ್ರ ಕೊಕ್ಕರ್ಣೆ, ದಿವಾಕರ, ಚಂದ್ರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X