Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ...

ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿಯಲ್ಲಿ ಉಸ್ತುವಾರಿ ಸಚಿವರಿಂದ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ31 Oct 2024 7:36 PM IST
share
ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ, ಅ.31: ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕ ಸರಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟ ಪಡಿಸಿದ್ದಾರೆ.

ಉಡುಪಿಯ ಬನ್ನಂಜೆಯಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಹೆಬ್ಬಾಳ್ಕರ್, ಶಕ್ತಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರಿಗೆ ಅನುಕೂಲ ಆಗಿದೆ. ಯಾರೋ ಒಂದಿಬ್ಬರು ಯೋಜನೆ ನಿಲ್ಲಿಸಿ ಎಂದು ಹೇಳಿದಾಕ್ಷಣ ಸರಕಾರ ಯೋಜನೆಯನ್ನು ನಿಲ್ಲಿಸಲು ಸಾಧ್ಯವೇ ಎಂದರು.

ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಸಾರಿಗೆ ಸಂಸ್ಥೆಯ ನಿಗಮಗಳು ಒಳ್ಳೆಯ ಹೆಸರು ಪಡೆದಿದ್ದು, ಉತ್ತಮ ಲಾಭದಲ್ಲಿವೆ. ಮಹಿಳೆಯರ ಪಾಲಿಗೆ ಶಕ್ತಿ ಯೋಜನೆ ಸಂಜೀವಿನಿಯಾಗಿದೆ ಎಂದು ಅವರು ಬಣ್ಣಿಸಿದರು.

ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ರಾಜ್ಯದ ಮಹಿಳೆಯರು ಬೆಲೆ ಏರಿಕೆ ಬಗ್ಗೆ ತಮ್ಮ ಅಳಲು ತೋಡಿ ಕೊಂಡಿದ್ದರು. ಮಹಿಳೆಯರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಡಿ.ಕೆ.ಶಿವಕುಮಾರ್ ಅವರು ‘ನಾ ನಾಯಕಿ’ ಎಂಬ ಕಾರ್ಯಕ್ರಮ ರೂಪಿಸಿದರು. ಬೆಲೆ ಏರಿಕೆ ಬರೆಯನ್ನ ಅಳಿಸುವ ಸಲುವಾಗಿ ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನವೇ ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು. ಚುನಾವಣೆಗೂ ಮುನ್ನ ಪ್ರಿಯಾಂಕಾ ಗಾಂಧಿಯವರೇ ಶಕ್ತಿ ಯೋಜನೆ ಯನ್ನು ಘೋಷಿಸಿದ್ದರು. ಅದರಂತೆಯೇ ಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದವರು ವಿವರಿಸಿದರು.

ಡಿ.ಕೆ.ಶಿವಕುಮಾರ್ ಅವರ ಕಲ್ಪನೆಯ ಯೋಜನೆಯೇ ಶಕ್ತಿ ಯೋಜನೆಯಾಗಿದ್ದು, ಇದನ್ನು ನಿಲ್ಲಿಸಲು ಸಾಧ್ಯವೇ ಇಲ್ಲ. ಯೋಜನೆಯನ್ನು ನಿಲ್ಲಿಸಲಾಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ವಿಷಯ ಎಂದು ಸಚಿವರು ಸ್ಪಷ್ಟವಾಗಿ ನುಡಿದರು.

3 ಕ್ಷೇತ್ರ ಕಾಂಗ್ರೆಸ್ ಪಾಲು: ಮುಂಬರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಗಳಿಸಲಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದ್ದು, ಸರ್ವೇ ಜನ ಸುಖಿನೋ ಭವಂತು ಅನ್ನೋ ಹಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಕೆಲಸ ಮಾಡುತ್ತಿದೆ. ಜನರು ನಮ್ಮನ್ನು ಕೈ ಹಿಡಿಯುವ ವಿಶ್ವಾಸವಿದೆ ಎಂದು ಸಚಿವರು ಹೇಳಿದರು.

ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ: ವಕ್ಫ್ ಮಂಡಳಿಗೆ ಜಮೀನು ಬಿಟ್ಟು ಕೊಡುವಂತೆ ರೈತರಿಗೆ ನೋಟೀಸ್ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಈ ವಿಷಯವನ್ನು ಸ್ಪಷ್ಟಪಡಿಸಿದ್ದು, ರೈತರ ಒಂದು ಇಂಚೂ ಜಾಗ ಬಿಟ್ಟು ಕೊಡುವುದಿಲ್ಲ ಅಂತ ಹೇಳಿದ್ದಾರೆ ಎಂದರು.

ನಾವು ಪಕ್ಷಾತೀತ, ಜಾತ್ಯತೀತವಾಗಿ ಸರಕಾರ ನಡೆಸುತ್ತೇವೆ. ಇಂಥ ವಿಚಾರಗಳಿಗೆ ಕಿವಿ ಕೊಡಬೇಡಿ. ರೈತರಿಗೆ ನೀಡಿ ರುವ ನೋಟೀಸ್ ಅನ್ನು ಹಿಂಪಡೆಯುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಕೂಡ ರೈತರಿಗೆ ಅನ್ಯಾಯ ವಾಗಲು ಬಿಡುವುದಿಲ್ಲ. ಯಾವುದೇ ಸಂಘಟನೆ, ಜಾತಿಯನ್ನು ಓಲೈಸುವ ಕೆಲಸ ಆಗಬಾರದು ಎಂದರು.

ಆಯೋಗಕ್ಕೆ ಸಿಎಂ ಪತ್ರ: ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಆಯೋಗಕ್ಕೆ ಪತ್ರ ಬರೆಯು ತ್ತೇನೆ ಎಂದಿದ್ದಾರೆ. ಜಾತಿ ಗಣತಿ ಬಗ್ಗೆ ಆದಷ್ಟು ಬೇಗ ಮುಖ್ಯಮಂತ್ರಿಗಳು ಮಾತನಾಡುತ್ತಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X