ಶಂಕರನಾರಾಯಣ | ಬೈಕ್ ಢಿಕ್ಕಿ: ಪಾದಾಚಾರಿ ಮೃತ್ಯು

ಸಾಂದರ್ಭಿಕ ಚಿತ್ರ
ಶಂಕರನಾರಾಯಣ, ಡಿ.7: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆಳ್ವೆ ಗ್ರಾಮದ ಬೆಳ್ವೆ ಮಸೀದಿಯ ಬಳಿ ನಡೆದಿದೆ.
ಮೃತರನ್ನು ಲಕ್ಷ್ಮಣ ನಾಯ್ಕ್(58) ಎಂದು ಗುರುತಿಸಲಾಗಿದೆ.
ಡಿ.6ರಂದು ರಾತ್ರಿ ಗೋಳಿಯಂಗಡಿ ಕಡೆಯಿಂದ ಅಲ್ಬಾಡಿ ಕಡೆಗೆ ಹೋಗುತ್ತಿದ್ದ ಬೈಕ್, ರಸ್ತೆಯ ಬದಿಯ ಮಣ್ಣು ರಸ್ತೆಯಲ್ಲಿ ಅಲ್ಬಾಡಿ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ಲಕ್ಷ್ಮಣ್ ನಾಯ್ಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಸೈಕಲ್ ಸವಾರ ವಂಸತ್ ನಾಯ್ಕ್ ಹಾಗೂ ಪಾದಾಚಾರಿ ಲಕ್ಷ್ಮಣ ನಾಯ್ಕ್ ರಸ್ತೆಗೆ ಬಿದ್ದು ಗಾಯಗೊಂಡರು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಲಕ್ಷ್ಮಣ ನಾಯ್ಕ್ ಡಿ.7ರಂದು ಬೆಳಗ್ಗೆ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





