ಶಿರೂರು | ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

ಉಡುಪಿ, ನ.26: ಖಿದ್ಮಾ ಫೌಂಡೇಶನ್ ವತಿಯಿಂದ ಶಿರೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರವನ್ನು ಗುರುವಾರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಖಿದ್ಮಾ ಫೌಂಡೇಶನ್ ಕುಂದಾಪುರ ಮತ್ತು ಬೈಂದೂರು ತಾಲೂಕು ಅಧ್ಯಕ್ಷ ಶೇಖ್ ಅಬು ಮುಹಮ್ಮದ್ ಕುಂದಾಪುರ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಅಕಾಡೆಮಿ ಆಫ್ ಎಜುಕೇಶನಲ್ ಡೆವಲಪ್ಮೆಂಟ್ ಟ್ರಸ್ಟ್ ಉಡುಪಿ ಇದರ ಅಧ್ಯಕ್ಷ ಅಮ್ಜದ್ ಅಲಿ ಇಬ್ರಾಹಿಂ ಶೈಖ್ ವಿದ್ಯಾರ್ಥಿ - ಪೋಷಕರಿಗೆ ವೃತ್ತಿ ಮಾರ್ಗದರ್ಶನ ನೀಡಿದರು.
ಎಸೆಸೆಲ್ಸಿ ಮತ್ತು ಪಿಯುಸಿ ನಂತರದ ಕೋರ್ಸ್ ಗಳ ವಿವರಣೆ ನೀಡಿದ ಅವರು, ಸರಿಯಾದ ವೃತ್ತಿಯನ್ನು ಹೇಗೆ ಆಯ್ಕೆ ಮಾಡಬಹುದು ಮತ್ತು ವೃತ್ತಿ ಮಾರ್ಗದರ್ಶನದಲ್ಲಿ ಪಾಲಕರ ಪಾತ್ರ ಏನು ಎಂಬುವುದರ ಬಗ್ಗೆ ಬೆಳಕು ಚೆಲ್ಲಿದರು.
ಅತಿಥಿಗಳಾದ ಶಿರೂರು ಗ್ರಾಪಂ ಅಧ್ಯಕ್ಷ ನಾಗರತ್ನ, ಕಾಲೇಜಿನ ಪ್ರಾಂಶುಪಾಲ ದೇವೇಂದ್ರ ಕೆ.ಮೊಗೇರ, ಉಪಪ್ರಾಂಶುಪಾಲ ಜಯಂತಿ ಶೇಡ್ತಿ, ನಮ್ಮ ನಾಡ ಒಕ್ಕೂಟ, ಬೈಂದೂರು ತಾಲೂಕು ಅಧ್ಯಕ್ಷ ಸೈಯದ್ ಅಜ್ಮಲ್ ಶಿರೂರು, ಎಸ್.ಡಿ.ಎಂ.ಸಿ ಅಧ್ಯಕ್ಷ ಮುಹಮ್ಮದ್ ಗೌಸ್ ಮಾತನಾಡಿದರು.
ಸಂಸ್ಥೆಯ ಸದಸ್ಯರಾದ ಅಬ್ದುಲ್ ರಹ್ಮಾನ್ ಶಿರೂರು, ಹನೀಫ್ ಖ್ವಾಜಾ ಕುಂದಾಪುರ, ಇಬ್ರಾಹಿಂ ಬೇಂದ್ರೆ, ಎನ್.ಎಸ್.ರಿಝ್ವಾನ್ ನಾಗೂರು, ಎನ್.ಎಸ್.ಇರ್ಫಾನ್ ನಾಗೂರು, ಅಶ್ರಫ್ ನಾಗೂರು, ಅಸ್ಲಂ ತಲ್ಲೂರು, ಜಲಾಲ್ ಕಂಡ್ಲೂರು ಮೊದಲಾದವರು ಉಪಸ್ಥಿತರಿದ್ದರು.
ಮೌಲಾನಾ ಝಮೀರ್ ಅಹ್ಮದ್ ರಶಾದಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಖಿದ್ಮಾ ಫೌಂಡೇಶನ್ ಕುಂದಾಪುರ ಮತ್ತು ಬೈಂದೂರು ತಾಲೂಕು ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರಫೀಕ್ ವಂಡ್ಸೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.







