ಶಿರ್ವ | ನಾಗರಹಾವು ಕಡಿತದಿಂದ ವ್ಯಕ್ತಿ ಮೃತ್ಯು

ಸಾಂದರ್ಭಿಕ ಚಿತ್ರ
ಶಿರ್ವ, ಡಿ.6: ನಾಗರಹಾವು ಕಡಿತಕ್ಕೆ ಒಳಗಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕುತ್ಯಾರ್ ಎಂಬಲ್ಲಿ ಡಿ.5ರಂದು ಬೆಳಗ್ಗೆ ನಡೆದಿದೆ.
ಮೃತರನ್ನು ಮರ್ಣೆ ಗ್ರಾಮದ ಸುರೇಂದ್ರ ಕಿಟ್ಟು ಪೂಜಾರಿ (54) ಎಂದು ಗುರುತಿಸಲಾಗಿದೆ.
ಕುತ್ಯಾರು ಗ್ರಾಮದ ಪ್ರಕಾಶ್ ಶೆಟ್ಟಿ ಎಂಬವರ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ಸುರೇಂದ್ರ ಅವರು, ಅಡಿಕೆ ಮರಕ್ಕೆ ಮದ್ದು ಸಿಂಪಡನೆ ಮಾಡುತ್ತಿದ್ದ ವೇಳೆ ನಾಗರಹಾವು ಕಚ್ಚಿತ್ತೆನ್ನಲಾಗಿದೆ.
ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಇವರು, ಕಿನ್ನಿಗೋಳಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ.
ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





