Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಶಿರ್ವ| ಮಹಿಳೆಯ ಚಿನ್ನದ ಸರ ಸುಲಿಗೆ...

ಶಿರ್ವ| ಮಹಿಳೆಯ ಚಿನ್ನದ ಸರ ಸುಲಿಗೆ ಪ್ರಕರಣ: ಮೂರೇ ಗಂಟೆಯಲ್ಲಿ ಮೂವರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ21 Feb 2026 6:13 PM IST
share
ಶಿರ್ವ| ಮಹಿಳೆಯ ಚಿನ್ನದ ಸರ ಸುಲಿಗೆ ಪ್ರಕರಣ: ಮೂರೇ ಗಂಟೆಯಲ್ಲಿ ಮೂವರು ಆರೋಪಿಗಳ ಬಂಧನ

ಶಿರ್ವ, ಫೆ.21: ಕುರ್ಕಾಲು ಗ್ರಾಮದ ಶಂಕರಪುರ ಎಂಬಲ್ಲಿ ಫೆ.21ರಂದು ಬೆಳಗ್ಗೆ ನಡೆದ ಮಹಿಳೆಯ ಚಿನ್ನದ ಸರ ಸುಲಿಗೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೇವಲ ಮೂರು ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕುರ್ಕಾಲು ಗ್ರಾಮದ ಶಂಕರಪುರದ ಹೆಲೆನ್ ಡಿಸೋಜ(69) ಎಂಬವರು ತನ್ನ ಮನೆಯ ಹಿಂಬದಿಯಲ್ಲಿ ಗೀತಾ ಅವರೊಂದಿಗೆ ಮಲ್ಲಿಗೆ ಕಟ್ಟುತ್ತಿದ್ದ ವೇಳೆ, ಈ ಹಿಂದೆ ಬಾಡಿಗೆಗೆ ಇದ್ದ ಆನಂದ ಹಾಗೂ ಇನ್ನಿಬ್ಬರು ಬಾಡಿಗೆ ರೂಮ್ ವಿಚಾರಿಸಲು ಬಂದಿದ್ದರು. ಬಾಡಿಗೆ ರೂಮ್ ಇಲ್ಲದಕ್ಕೆ ಇವರು ಅಲ್ಲೇ ಸಮೀಪದ ಬೇರೆ ಮನೆ ಕಡೆಗೆ ಹೋದರು.

ನಂತರ ಅವರಲ್ಲಿ ಒಬ್ಬ ವಾಪಾಸ್ಸು ಹೆಲೆನ್ ಡಿಸೋಜ ಅವರ ಬಳಿಗೆ ಬಂದು, ಮೊಬೈಲ್ ನಂಬರ್ ಕೇಳಿದನು. ಹೆಲೆನ್ ಡಿಸೋಜ ಮೊಬೈಲ್ ನಂಬರ್ ಹೇಳುತ್ತಿರುವಾಗ ಆತ ಹೆಲೆನ್ ಅವರ ಕುತ್ತಿಗೆಗೆ ಕೈ ಹಾಕಿ ಕುತ್ತಿಗೆಯಲ್ಲಿದ್ದ 3,50,000ರೂ. ಮೌಲ್ಯದ 28 ಗ್ರಾಂ ತೂಕದ ಚಿನ್ನದ ಸರವನ್ನು ಎಳೆದುಕೊಂಡು ಹೋದನು. ಆಗ ಆತನನ್ನು ತಡೆಯಲು ಬಂದ ಹೆಲೆನ್ ಅವರ ಅಕ್ಕ ತೆರಜ ಎಂಬವರನ್ನು ದೂಡಿ ಹಾಕಿ ಮೂವರು ಬೈಕ್‌ನಲ್ಲಿ ಪರಾರಿಯಾದರು. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕೂಡಲೇ ಕಾರ್ಯಪ್ರವರ್ತರಾದ ಶಿರ್ವ ಠಾಣಾಧಿಕಾರಿ ಹಾಗೂ ಸಿಬ್ಬಂದಿ, ಘಟನಾ ಸ್ಥಳಕ್ಕೆ ತೆರಳಿ ಎಲ್ಲಾ ಆಯಾಮ ಗಳಲ್ಲಿ ಪರಿಶೀಲಿಸಿ, ಕೂಡಲೇ ಅಲ್ಲಿಯ ಸಮೀಪದಲ್ಲಿ ಲಭ್ಯವಿರುವ ಸಿಸಿಟಿವಿಗಳನ್ನು ಪರಿಶೀಲಿಸಿದರು. ಅದರಲ್ಲಿ ಪಲ್ಸರ್ ಬೈಕ್‌ನಲ್ಲಿ ಮೂವರು ಆರೋಪಿಗಳು ಬಂದು ಕೃತ್ಯ ಎಸಗಿರುವುದು ಕಂಡುಬಂತು. ಕೂಡಲೇ ಜಿಲ್ಲಾ ನಿಯಂತ್ರಣ ಕೊಠಡಿಯ ಮೂಲಕ ಜಿಲ್ಲೆಯ ಎಲ್ಲಾ ಚೆಕ್‌ಪೋಸ್ಟ್‌ಗಳಿಗೆ ಮಾಹಿತಿ ನೀಡಿ, ಸಿಸಿಟಿವಿ ಫೂಟೇಜ್‌ಗಳನ್ನು ಕಳುಹಿಸಲಾಯಿತು.

ಅದರಂತೆ ಎಲ್ಲಾ ಕಡೆ ಸರಿಯಾದ ರೀತಿಯಲ್ಲಿ ನಾಕಾಬಂದಿ ನಡೆಸಿ ಆರೋಪಿಗಳನ್ನು ಕೃತ್ಯ ನಡೆದ ಕೇವಲ ಮೂರರಿಂದ ನಾಲ್ಕು ಗಂಟೆಯ ಒಳಗಾಗಿ ಶಿರೂರ ಚೆಕ್ ಪೋಸ್ಟ್‌ನಲ್ಲಿ ಬೈಂದೂರು ಪೊಲೀಸರು ಆರೋಪಿಗಳನ್ನು ತಡೆದು ನಿಲ್ಲಿಸಿ, ಶಿರ್ವ ಪೊಲೀಸರ ವಶಕ್ಕೆ ನೀಡಿದರು.

ಶಿರ್ವ ಪೊಲೀಸರು ಆರೋಪಿಗಳಿಂದ ಒಂದು ಬಂಗಾರದ ಚೈನ್ ಹಾಗೂ ಕೃತ್ಯಕ್ಕೆ ಬಳಸಿದ ಬೈಕ್‌ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕಾರ್ಯಾಚರಣೆಯನ್ನು ಕಾಪು ವೃತ್ತ ನಿರೀಕ್ಷಿಕ ಕಾಪು ಅಜ್ಮತ್ ಅಲಿ ನೇತೃತ್ವದಲ್ಲಿ ಶಿರ್ವ ಠಾಣಾಧಿಕಾರಿ ಮಂಜುನಾಥ ಮರಬದ, ಬೈಂದೂರು ಎಸ್ಸೈ ಸುನಿಲ್ ಕುಮಾರ್, ಶಿರ್ವ ಠಾಣೆಯ ದಯಾನಂದ ಪ್ರಭು, ಅನ್ವರ ಅಲಿ, ಹರೀಶ, ಯಲಾಲ್ಲಿಂಗ ಸುರೇಶ ಹಾಗೂ ಬೈಂದೂರು ಠಾಣೆಯ ಸಿಬ್ಬಂದಿಗಳು ನಡೆಸಿದ್ದಾರೆ.

Tags

Shirvagoldchainextortioncaseaccusearrest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X