ಶೂಟೌಟ್ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

ಕುಂದಾಪುರ, ಆ.5: ನಗರದ ಚರ್ಚ್ ರಸ್ತೆಯಲ್ಲಿ ಕಳೆದ ಮೇ 31 ರಂದು ನಸುಕಿನ ಜಾವ ನಡೆದ ಬಾರ್ಕೂರಿನ ಐವನ್ ರಿಚರ್ಡ್ ಮಸ್ಕರೇನಸ್ (45) ಅವರನ್ನು ರೈಫಲ್ನಿಂದ ಗುಂಡಿಕ್ಕಿ ಕೊಲೆಗೈದ ಪ್ರಕರಣದ ಆರೋಪಿ ಡೆರಿಕ್ ಕ್ರಾಸ್ತ (55) ಎಂಬಾತನನ್ನು ಬುಧವಾರ ಕುಂದಾಪುರ ಪೊಲೀಸರು ಒಂದನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಆರೋಪಿಯನ್ನು ಭಟ್ಕಳದ ಬೆಳಕೆ ಗ್ರಾಮದ ಹೇರಬುಡಿಕೆ ಎಂಬಲ್ಲಿ ಆ.1 ರಂದು ಪೊಲೀಸರು ಬಂಧಿಸಿದ್ದು ಹೆಚ್ಚಿನ ತನಿಖೆಗಾಗಿ ಆ.2 ರಂದು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ವಿಚಾರಣೆ ಬಹುತೇಕ ಮುಗಿದ ಹಿನ್ನೆಲೆಯಲ್ಲಿ ಬುಧವಾರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದರು.
Next Story




