Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. SIR ನಿರ್ಲಕ್ಷ್ಯಿಸಬೇಡಿ; ಎಲ್ಲಾ...

SIR ನಿರ್ಲಕ್ಷ್ಯಿಸಬೇಡಿ; ಎಲ್ಲಾ ಜಮಾಅತ್‌ಗಳಲ್ಲಿ ಜಾಗೃತಿ ಮೂಡಿಸಿ: ಕುಂಬೋಳ್ ತಂಙಳ್ ಕರೆ

ವಾರ್ತಾಭಾರತಿವಾರ್ತಾಭಾರತಿ2 July 2026 9:23 PM IST
share
SIR ನಿರ್ಲಕ್ಷ್ಯಿಸಬೇಡಿ; ಎಲ್ಲಾ ಜಮಾಅತ್‌ಗಳಲ್ಲಿ ಜಾಗೃತಿ ಮೂಡಿಸಿ: ಕುಂಬೋಳ್ ತಂಙಳ್ ಕರೆ

ಉಡುಪಿ: ಜಿಲ್ಲಾ ಸಂಯುಕ್ತ ಜಮಾಅತ್ ಸಮಿತಿ ವತಿಯಿಂದ ಮೂಳೂರು ಅಲ್ ಇಹ್ಸಾನ್ ಶಾಲಾ ಸಭಾಂಗಣದಲ್ಲಿ ನಡೆದ ಜಿಲ್ಲಾ ಜಮಾಅತ್ ಅಸ್ಸೆಂಬ್ಲೇಜ್ ಕಾರ್ಯಕ್ರಮದಲ್ಲಿ ಮಾತನಾಡಿದ ಕುಂಬೋಳ್ ತಂಙಳ್, ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಯಾರೂ ನಿರ್ಲಕ್ಷ್ಯಿಸಬಾರದು ಎಂದು ಕರೆ ನೀಡಿದರು.

ಪ್ರತಿಯೊಂದು ಜಮಾಅತ್, ಮೊಹಲ್ಲಾ ಹಾಗೂ ಸ್ಥಳೀಯ ಸಮಿತಿಗಳಲ್ಲಿ ಎಸ್‌ಐಆರ್ ಕುರಿತು ಜನರಿಗೆ ಸರಿಯಾದ ಮಾಹಿತಿ ನೀಡಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಉಳಿಸಿಕೊಳ್ಳಲು ಅಗತ್ಯ ದಾಖಲೆಗಳನ್ನು ಸಕಾಲದಲ್ಲಿ ಸಲ್ಲಿಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು.

ಅದೇ ರೀತಿ, ತಲಾಕ್, ಫಸ್ಕ್ ಹಾಗೂ ಇತರ ವೈಯಕ್ತಿಕ ಮತ್ತು ಸಾಮೂಹಿಕ ಸಮಸ್ಯೆಗಳಿಗೆ ಆಯಾ ಜಮಾಅತ್‌ ಗಳಲ್ಲಿಯೇ ಪರಿಹಾರ ಕಂಡುಕೊಳ್ಳುವ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದ ಅವರು, ಜಮಾಅತ್ ಮಟ್ಟದಲ್ಲಿಯೇ ಬಗೆಹರಿಸಬಹುದಾದ ಸಮಸ್ಯೆಗಳಿಗಾಗಿ ಅನಗತ್ಯವಾಗಿ ಕೋರ್ಟ್ ಹಾಗೂ ಪೊಲೀಸ್ ಠಾಣೆಗಳಿಗೆ ಅಲೆದಾಡುವ ಪರಿಸ್ಥಿತಿಗೆ ಕಡಿವಾಣ ಹಾಕಬೇಕು ಎಂದು ನಿರ್ದೇಶನ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಪಿ. ಅಬೂಬಕ್ಕರ್ ನೇಜಾರು ವಹಿಸಿದ್ದರು. ಉಡುಪಿ ಜಿಲ್ಲಾ ಸಹಾಯಕ ಖಾಝಿ ಬಹು. ಅಬ್ದುರ್ರಹ್ಮಾನ್ ಮದನಿ ಮೂಳೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮೊಹಲ್ಲಾ ಆಡಳಿತ ಎಂಬ ವಿಷಯದ ಬಗ್ಗೆ ಬಹು ಹಂಝ ಮದನಿ ಮಿತ್ತೂರು ಹಾಗೂ ನಮ್ಮ ಮಕ್ಕಳು ದಾರಿ ತಪ್ಪುತ್ತಿ ದ್ದಾರೆ ಎಂಬ ಹಿರಿಯ ಪೊಲೀಸ್ ಅಧಿಕಾರಿ ಅಬ್ದುರಝಾಕ್ ವಿಷಯ ಮಂಡಿಸಿದರು, ಯು.ಕೆ. ಮುಸ್ತಫಾ ಸಅದಿ ಮೂಳೂರು ಮುನ್ನುಡಿ ಭಾಷಣ ಮಾಡಿದರು. ಚರ್ಚಾಗೋಷ್ಠಿಗೆ ಕೆ.ಎ. ಅಬ್ದುರ್ರಹ್ಮಾನ್ ರಝ್ವಿ ಅಲ್ ಫುರ್ಖಾನಿ ಕಲ್ಕಟ್ಟ ನೇತೃತ್ವ ನೀಡಿದರು.

ಜಿಲ್ಲಾ ಉಲಮಾ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಮದನಿ ಮಾವಿನಕಟ್ಟೆ, ಸುಲೈಮಾನ್ ಸಅದಿ ಅಫ್ಳಲಿ ಕಾರ್ಕಳ, ಹಾಫಿಳ್ ಅಶ್ರಫ್ ಸಖಾಫಿ ಮೂಳೂರು, ಅಬ್ದುಲ್ ಲತೀಫ್ ಫಾಳಿಲಿ ನಾವುಂದ ಹಾಗೂ ಅಬ್ದುರ್ರಶೀದ್ ಸಖಾಫಿ ಮಜೂರು ಸಾಂದರ್ಭಿಕವಾಗಿ ಮಾತನಾಡಿದರು.

ಎಸ್‌ಜೆಎಂ ಜಿಲ್ಲಾಧ್ಯಕ್ಷ ಅಬ್ದುರ್ರಝಾಖ್ ಖಾಸಿಮಿ, ಎಸ್‌ಎಂಎ ಜಿಲ್ಲಾಧ್ಯಕ್ಷ ಹುಸೈನ್ ಮೋನು, ಹಾಜಿ ಪಿ.ಎಚ್. ಉಸ್ಮಾನ್, ಮುರಾದ್ ಅಲಿ ಮೂಳೂರು, ಮನ್ಸೂರು ಮೆಕ್ಕಾಸ್ ಸೇರಿದಂತೆ ಅನೇಕ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಜಿ ಎಂ.ಎ. ಬಾವು ಮೂಳೂರು ಸ್ವಾಗತಿಸಿದರು. ಅಶ್ರಫ್ ಫುರ್ಖಾನಿ ಕಾರ್ಯಕ್ರಮ ನಿರೂಪಿಸಿ, ಎನ್.ಸಿ. ರಹೀಂ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X