Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎಸ್‌ಐಆರ್ ಪ್ರಕ್ರಿಯೆ| ಡಿಜಿಟಲೀಕರಣದಲ್ಲಿ...

ಎಸ್‌ಐಆರ್ ಪ್ರಕ್ರಿಯೆ| ಡಿಜಿಟಲೀಕರಣದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ

ವಾರ್ತಾಭಾರತಿವಾರ್ತಾಭಾರತಿ25 July 2026 7:49 PM IST
share
ಎಸ್‌ಐಆರ್ ಪ್ರಕ್ರಿಯೆ| ಡಿಜಿಟಲೀಕರಣದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ
ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿ.ಅನ್ಬುಕುಮಾರ್ ಶ್ಲಾಘನೆ

ಉಡುಪಿ, ಜು.25: ರಾಜ್ಯದಲ್ಲಿ ಈಗ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) 2026ಕ್ಕೆ ಸಂಬಂಧಿಸಿ ದಂತೆ ಮತದಾರರಿಂದ ಪಡೆದುಕೊಂಡ ಎನ್ಯುಮರೇಷನ್ ಫಾರಂಗಳ ಡಿಜಿಟಲೀಕರಣ ಕಾರ್ಯದಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಾದ ವಿ.ಅನ್ಬುಕುಮಾರ್ ಶ್ಲಾಘಿಸಿದ್ದಾರೆ.

ಶನಿವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ನಡೆದ ಜಿಲ್ಲೆಯ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡುತ್ತಿದ್ದರು.

‘ಪ್ರಜಾಪ್ರಭುತ್ವದ ಅಡಿಪಾಯವನ್ನು ಭದ್ರಪಡಿಸುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯು ದೋಷರಹಿತ ಹಾಗೂ ಯಾವುದೇ ಗೊಂದಲಗಳಿಗೆ ಅವಕಾಶ ನೀಡ ದಂತೆ ನಿರ್ವಹಿಸಿ ಗುಣಮಟ್ಟದ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಂತೆ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಗಳು ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್ ಮನೆಮನೆ ಸಮೀಕ್ಷೆಯ ನಮೂನೆಗಳಲ್ಲಿ 2002ರ ಮತದಾರರ ಪಟ್ಟಿಯಲ್ಲಿ ಮ್ಯಾಪಿಂಗ್ ಆಗದವರು ಸಹ ವೈಯಕ್ತಿಕ ವಿವರಗಳನ್ನು ಎನ್ಯುಮರೇಷನ್ ಫಾರ್ಮ್‌ನ ಕೊನೆಯ ಕಾಲಂ ನಲ್ಲಿ ವಿವರಗಳನ್ನು ಭರ್ತಿ ಮಾಡಿ, ಬಿಎಲ್‌ಓಗಳಿಗೆ ನೀಡಬಹುದಾಗಿದೆ ಎಂದರು.

ಒಂದೊಮ್ಮೆ ಬಿಎಲ್‌ಒಗಳು ಮನೆ ಭೇಟಿ ನೀಡಿದ ಸಂದರ್ಭದಲ್ಲಿ ಮತದಾರರು ಮನೆಯಲ್ಲಿ ಇಲ್ಲದಿದ್ದಲ್ಲಿ ಅವರ ಪರವಾಗಿ ಕುಟುಂಬದ ಯಾವುದೇ ಒಬ್ಬ ವಯಸ್ಕರು ಸಹಿ ಹಾಕಿ ಗಣತಿ ನಮೂನೆಗಳನ್ನು ಬಿಎಲ್‌ಒಗೆ ನೀಡಬಹು ದಾಗಿದೆ ಎಂದೂ ಅನ್ಬುಕುಮಾರ್ ತಿಳಿಸಿದರು. ಎನ್ಯುಮರೇಶನ್ ಫಾರಂಗಳ ಡಿಜಿಟಲೀಕರಣ ಕಾರ್ಯದಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನದಲ್ಲಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಶೇ.88.39 ಸಾಧನೆ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮಾತನಾಡಿ, ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕ ರಣೆ (ಎಸ್‌ಐಆರ್-2026) ಪ್ರಕ್ರಿಯೆಯು ವ್ಯವಸ್ಥಿತವಾಗಿ ನಡೆಯುತ್ತಿದ್ದು, ಜಿಲ್ಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು ವಿತರಿಸುವ ಪ್ರಕ್ರಿಯೆಯಲ್ಲಿ ಶೇ.100 ಪ್ರಗತಿ ಸಾಧಿಸಿದ್ದಾರೆ. ಇಂದು (ಜುಲೈ 25 ಸಂಜೆ 4ಗಂಟೆ) ಸಂಜೆವರೆಗೆ ಒಟ್ಟು 9,40,340 ಗಣತಿ ನಮೂನೆಯನ್ನು ಡಿಜಿಟಲೀಕರಣ ಗೊಳಿಸಿ ಶೇ. 88.39ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ವಿವರಿಸಿದರು.

ಜಿಲ್ಲೆಯಲ್ಲಿ ಇದುವರೆಗೆ ಮನೆಮನೆ ಭೇಟಿ ವೇಳೆ 14,835 ಮತದಾರರು ಮೃತಪಟ್ಟಿರುವುದು ಕಂಡುಬಂದಿದೆ. 14,426 ಮತದಾರರು ಖಾಯಂ ಆಗಿ ಬೇರೆ ಕಡೆಗೆ ವರ್ಗಾವಣೆಗೊಂಡಿದ್ದು, 5225 ಮತದಾರರು ಈಗಾಗಲೇ ತಮ್ಮ ಸ್ವದಾಖಲಾತಿ ಮಾಡಿರುತ್ತಾರೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಸಹಾಯಕ ಕಮಿಷನರ್ ರಶ್ಮಿ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಶೇ.100 ಸಾಧಕ ಬಿಎಲ್‌ಒಗಳಿಗೆ ಅಭಿನಂದನೆ

ಇದೇ ಸಂದರ್ಭದಲ್ಲಿ ತಮ್ಮ ವ್ಯಾಪ್ತಿಯ ಎನ್ಯುಮರೇಷನ್ ಫಾರಂಗಳ ಡಿಜಿಟಲಿಕರಣ ಕಾರ್ಯದಲ್ಲಿ ಪ್ರಥಮವಾಗಿ ಶೇ.100 ಸಾಧನೆ ಮಾಡಿದ ಪ್ರತಿ ವಿಧಾನಸಭಾ ಕ್ಷೇತ್ರದ ಒಬ್ಬೊಬ್ಬ ಬಿಎಲ್‌ಒಗಳನ್ನು ಮುಖ್ಯ ಚುನಾವಣಾಧಿಕಾರಿ ಗಳು ಅಭಿನಂದನಾ ಪತ್ರ ನೀಡಿ ಗೌರವಿಸಿದರು.

118-ಬೈಂದೂರು ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 125ರ ಬಿಎಲ್‌ಒ ಪವಿತ್ರ ಪೂಜಾರಿ, 119-ಕುಂದಾಪುರ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 135ರ ಲಕ್ಷ್ಮೀ ಶೆಡ್ತಿ, 120-ಉಡುಪಿ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 33ರ ಪ್ರಸನ್ನಿ, 121-ಕಾಪು ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 190ರ ಹೇಮಾ ಪೂಜಾರ್ತಿ, 122-ಕಾರ್ಕಳ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 41ರ ಜ್ಯೋತಿರಾವ್ ಸೇರ್ವೆಗಾರ್ ಇವರಿಗೆ ವಿ.ಅನ್ಬುಕುಮಾರ್ ಅಭಿನಂದನಾ ಪತ್ರವನ್ನು ನೀಡಿದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X