Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕ್ರೀಡೆಯಿಂದ ಮಾನಸಿಕ, ದೈಹಿಕ ಆರೋಗ್ಯ...

ಕ್ರೀಡೆಯಿಂದ ಮಾನಸಿಕ, ದೈಹಿಕ ಆರೋಗ್ಯ ಸದೃಢ : ಎಸ್ಪಿ ಹರಿರಾಮ್ ಶಂಕರ್

ವಾರ್ತಾಭಾರತಿವಾರ್ತಾಭಾರತಿ17 May 2026 1:58 PM IST
share
ಕ್ರೀಡೆಯಿಂದ ಮಾನಸಿಕ, ದೈಹಿಕ ಆರೋಗ್ಯ ಸದೃಢ : ಎಸ್ಪಿ ಹರಿರಾಮ್ ಶಂಕರ್
ಕೊಡವೂರು ಮಹಾರುದ್ರಯಾಗ: ಬೀಚ್ ಕ್ರೀಡೋತ್ಸವ ಉದ್ಘಾಟನೆ

ಉಡುಪಿ : ಕೊಡವೂರು ಮಹತೋಭಾರ ಶ್ರೀಶಂಕರ ನಾರಾಯಣ ದೇವಸ್ಥಾನದಲ್ಲಿ ಪ್ರಸಾದ್‌ರಾಜ್ ಕಾಂಚನ್ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಆಯೋಜಿಸಿರುವ ಮಹಾರುದ್ರಯಾಗದ ಪ್ರಯುಕ್ತ ಮಲ್ಪೆ ಬೀಚ್‌ನಲ್ಲಿ ಬೀಚ್ ಕ್ರೀಡೋತ್ಸವಕ್ಕೆ ಚಾಲನೆ ನೀಡಲಾಯಿತು.

ಕ್ರೀಡೋತ್ಸವವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಮಾತನಾಡಿ, ಮಕ್ಕಳು ಮೊಬೈಲ್ ಅನ್ನು ಪಕ್ಕಕ್ಕಿಟ್ಟು ಲಗೋರಿಯಂತಹ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದ ರಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯ ಸದೃಢಗೊಳ್ಳುತ್ತದೆ ಎಂದು ಹೇಳಿದರು.

ಮಹಾರುದ್ರಯಾಗದ ಜೊತೆ ಕ್ರೀಡೆಯಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿರುವುದು ಬಹಳ ಸಂತೋಷದ ವಿಚಾರ. ಇಂತಹ ಕಾರ್ಯಕ್ರಮಗಳು ಹೆಚ್ಚೆಚ್ಚು ಆಯೋಜನೆಗೊಳ್ಳಬೇಕು. ಇದಕ್ಕೆ ಪೊಲೀಸ್ ಇಲಾಖೆಯ ಸಹಕಾರ, ಪ್ರೋತ್ಸಾಹ ಸದಾ ಇರಲಿದೆ ಎಂದು ಅವರು ತಿಳಿಸಿದರು.

ಮಹಾರುದ್ರಯಾಗ ಸಮಿತಿಯ ಕಾರ್ಯಾಧ್ಯಕ್ಷ ಪ್ರಸಾದ್‌ರಾಜ್ ಕಾಂಚನ್ ಮಾತನಾಡಿ, ಮಕ್ಕಳಿಗೆ ಧಾರ್ಮಿಕತೆಯ ಜೊತೆಗೆ ಸಾಮಾಜಿಕ ಬದ್ಧತೆಯನ್ನು ಕಲಿಸಬೇಕು. ಕರಾವಳಿ ಜಿಲ್ಲೆಯ ಮಕ್ಕಳ ಶಿಕ್ಷಣಕ್ಕೆ ತಕ್ಕಂತೆ ಉದ್ಯೋಗ ಲಭಿಸುತ್ತಿಲ್ಲ. ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವುದರ ಜೊತೆ ಅವರಿಗೆ ಸೂಕ್ತ ಉದ್ಯೋಗ ಕಲ್ಪಿಸುವ ಕೆಲಸ ಆಗಬೇಕು. ಆ ನಿಟ್ಟಿನಲ್ಲಿ ನಾಳೆ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಿದ್ದೇವೆ. ಏಳೂವರೆ ಸಾವಿರ ಉದ್ಯೋಗ ಅವಕಾಶಗಳು ಲಭ್ಯವಿರಲಿದೆ. ಎಸ್ಸೆಸ್ಸೆಲ್ಸಿ, ಪಿಯುಸಿ ಕಲಿತಿರುವ ಮಕ್ಕಳಿಗೆ ಹೆಚ್ಚು ಆದ್ಯತೆ ಸಿಗುವ ಉದ್ಯೋಗವನ್ನು ಕಲ್ಪಿಸುತ್ತಿದ್ದೇವೆ ಎಂದರು.

ಕ್ರೀಡಾ ಸಮಿತಿ ಸಂಚಾಲಕ ಶಾನ್ ರಾಜ್ ಕೋಟ್ಯಾನ್, ಸಮಾಜ ಸೇವಕ ಪಾಡುರಂಗ ಮಲ್ಪೆ, ಸಮಿತಿಯ ಸಂಚಾಲಕರಾದ ತಾರಾನಾಥ ಪೂಜಾರಿ, ನಂದಕಿಶೋರ್ ಮೊದಲಾದವರು ಉಪಸ್ಥಿತರಿದ್ದರು. ಸತೀಶ್ ಚಿತ್ರಾಪುರ ಕಾರ್ಯಕ್ರಮ ನಿರೂಪಿಸಿದರು. ಲಗೋರಿ, ಕೈರಂಪಣಿ ಬಲೆ ಬೀಸುವ ಸ್ಪರ್ಧೆ, ಮರಳಿನಲ್ಲಿ ಶಿವನ ಕಲಾಕೃತಿ ಬಿಡಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

Tags

SP Hariram Shankar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X