Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಪೊಲೀಸರಿಂದ ಶಸ್ತ್ರಾಸ್ತ್ರಗಳ...

ಉಡುಪಿ ಪೊಲೀಸರಿಂದ ಶಸ್ತ್ರಾಸ್ತ್ರಗಳ ವಿಶೇಷ ತಪಾಸಣೆ; 4 ಮಾರ್ಪಾಡು ಮಾಡಿದ ಶಸ್ತ್ರಾಸ್ತ್ರಗಳ ಪತ್ತೆ: ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ2 Oct 2026 8:33 PM IST
share
ಉಡುಪಿ ಪೊಲೀಸರಿಂದ ಶಸ್ತ್ರಾಸ್ತ್ರಗಳ ವಿಶೇಷ ತಪಾಸಣೆ; 4 ಮಾರ್ಪಾಡು ಮಾಡಿದ ಶಸ್ತ್ರಾಸ್ತ್ರಗಳ ಪತ್ತೆ: ಪ್ರಕರಣ ದಾಖಲು

ಉಡುಪಿ : ಉಡುಪಿ ಜಿಲ್ಲಾ ಪೊಲೀಸರು ನಡೆಸಿದ ಶಸ್ತ್ರಾಸ್ತ್ರಗಳ ವಿಶೇಷ ತಪಾಸಣೆ ವೇಳೆ ನಾಲ್ಕು ಮಾರ್ಪಡು ಮಾಡಲಾದ ಶಸ್ತ್ರಾಸ್ತ್ರಗಳು ಪತ್ತೆಯಾಗಿದ್ದು, ಈ ಸಂಬಂಧ ನಾಲ್ಕು ಪ್ರತ್ಯೇಕ ಠಾಣೆಗಳಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಉಡುಪಿ ಜಿಲ್ಲೆಯಲ್ಲಿ ಶಸ್ತ್ರಾಸ್ತ್ರಗಳ ಬಳಕೆಗೆ ಸಂಬಂಧಿಸಿದಂತೆ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾದ್ಯಂತ ಶಸ್ತ್ರಾಸ್ತ್ರ ಹೊಂದಿರುವ ವ್ಯಕ್ತಿಗಳ ಹಿನ್ನೆಲೆ, ಅವರು ಹೊಂದಿರುವ ಶಸ್ತ್ರಾಸ್ತ್ರಗಳ ಸ್ಥಿತಿ ಹಾಗೂ ಅವುಗಳಲ್ಲಿ ಯಾವುದೇ ರೀತಿಯ ಅನಧಿಕೃತ ಮಾರ್ಪಾಡು ಮಾಡಲಾಗಿದೆಯೇ ಎಂಬುದನ್ನು ಪರಿಶೀಲಿಸುವ ಸಲುವಾಗಿ ವಿಶೇಷ ತಪಾಸಣಾ ಕಾರ್ಯಾಚರಣೆಯನ್ನು ನಡೆಸಲಾಯಿತು.

ಈ ವಿಶೇಷ ಕಾರ್ಯಾಚರಣೆಯು ಕಳೆದ ಒಂದು ತಿಂಗಳು ಕಾಲ ನಡೆದಿದ್ದು, ಈ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಎಸ್‌ಬಿಎಂಎಲ್- 1,759, ಎಸ್‌ಬಿಬಿಎಲ್- 554, ಡಿಬಿಬಿಎಲ್- 318, ಡಿಬಿಎಂಎಲ್- 6, ಪಿಸ್ತೂಲ್- 120, ರಿವಾಲ್ವರ್- 119, ರೈಫಲ್- 30, ಬೋರ್ ಗನ್- 13, ಎನ್‌ಪಿ ಬೋರ್- 6 ಸಹಿತ ಒಟ್ಟು 2,925 ಶಸ್ತ್ರಾಸ್ತ್ರಗಳನ್ನು ಪರಿಶೀಲಿಸಲಾಗಿದೆ. ಈ ವೇಲೆ ಒಟ್ಟು 4(ಪ್ರತ್ಯೇಕ ಪೊಲೀಸ್ ಠಾಣೆಗಳಲ್ಲಿ) ಶಸ್ತ್ರಾಸ್ತ್ರಗಳಲ್ಲಿ ಅನಧಿಕೃತ ಮಾರ್ಪಾಡು ಮಾಡಿರುವುದು ಕಂಡುಬಂದಿದೆ.

ಈ ಸಂಬಂಧವಾಗಿ ಶಂಕರನಾರಾಯಣ, ಕೋಟ, ಬ್ರಹ್ಮಾವರ ಹಾಗೂ ಕಾರ್ಕಳ ನಗರ ಪೊಲೀಸ್ ಠಾಣೆಗಳಲ್ಲಿ, ಪ್ರತ್ಯೇಕ ಪ್ರತ್ಯೇಕವಾಗಿ ಶಸ್ತ್ರಾಸ್ತ್ರಗಳಲ್ಲಿ ಅನಧಿಕೃತ ಮಾರ್ಪಾಡು ಮಾಡಿದ ಆರೋಪಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದ್ದು, ಈ ಕುರಿತು ತನಿಖೆ ನಡೆಲಾಗುತ್ತಿದೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ಅಲ್ಲದೆ ಜಿಲ್ಲೆಯಲ್ಲಿ ರೌಡಿ ಹಾಳೆ ಹೊಂದಿರುವ ಹಾಗೂ ಶಸ್ತ್ರಾಸ್ತ್ರ ಪರವಾನಗಿ ಹೊಂದಿರುವ ವ್ಯಕ್ತಿಗಳ ಪ್ರಸ್ತುತ ನಡವಳಿಕೆ, ಅವರು ಶಸ್ತ್ರಾಸ್ತ್ರ ಹೊಂದಿದ ನಂತರ ಯಾವುದೇ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ಬಗ್ಗೆಯೂ ವಿಶೇಷವಾಗಿ ಪರಿಶೀಲನೆ ನಡೆಸಲಾಗಿದೆ.

ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಶಸ್ತ್ರಾಸ್ತ್ರಗಳ ಅಕ್ರಮ ಬಳಕೆ ಮತ್ತು ಅನಧಿಕೃತ ಮಾರ್ಪಾಡುಗಳ ವಿರುದ್ಧ ಇದೇ ರೀತಿಯಾಗಿ ಮುಂದಿನ ದಿನಗಳಲ್ಲಿಯೂ ನಿರಂತರವಾಗಿ ನಿಗಾ ವಹಿಸಿ, ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

‘ಸಾರ್ವಜನಿಕರು ಯಾವುದೇ ರೀತಿಯ ಅನಧಿಕೃತ ಶಸ್ತ್ರಾಸ್ತ್ರ ಬಳಕೆ, ಮಾರ್ಪಾಡು ಅಥವಾ ಸಂಗ್ರಹದ ಬಗ್ಗೆ ಮಾಹಿತಿ ದೊರೆತಲ್ಲಿ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಅಥವಾ ಉಡುಪಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ದೂ. ಸಂಖ್ಯೆಗಳಾದ: 08202526444, 0820- 2526709 9480805400(ವಾಟ್ಸಾಪ್ ನಂಬರ್) ಗೆ ಕರೆ ಮಾಡಿ ಮಾಹಿತಿ ನೀಡುವ ಮೂಲಕ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಲು ಸಹಕರಿಸಬೇಕು’

-ಹರಿರಾಂ ಶಂಕರ್, ಎಸ್ಪಿ ಉಡುಪಿ

Tags

weaponspoliceUdupi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X