ಶೀರೂರು ಪರ್ಯಾಯದ ವಿಶೇಷ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ, ಜ.7: ಜ.18ರಂದು ನಡೆಯುವ ಶೀರೂರು ಪರ್ಯಾಯದ ವಿಶೇಷ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಮಾಧ್ಯಮ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಇಂದು ರಥಬೀದಿಯಲ್ಲಿರುವ ಶೀರೂರು ಮಠದ ಆವರಣದಲ್ಲಿ ನಡೆಯಿತು.
ಉಡುಪಿ ಶಾಸಕ ಹಾಗೂ ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಯಶ್ ಪಾಲ್ ಸುವರ್ಣ ಮಾಧ್ಯಮ ಕೇಂದ್ರವನ್ನು ಉದ್ಘಾಟಿಸಿದರು. ಪರ್ಯಾಯದ ವಿಶೇಷ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಆನೆಗುಡ್ಡೆ ಕ್ಷೇತ್ರದ ಮೊಕ್ತೇಸರ ಶ್ರೀರಮಣ ಉಪಾಧ್ಯಾಯ, ಈ ಬಾರಿಯ ಪರ್ಯಾಯ ಸಾಂಗವಾಗಿ ನಡೆಯಲಿ ಎಂದು ಶುಭ ಹಾರೈಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಧಾನ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ, ಈ ಬಾರಿಯ ಪರ್ಯಾಯದ ವಿವಿಧ ಕಾರ್ಯಕ್ರಮಗಳ ಹಾಗೂ ವ್ಯವಸ್ಥೆಗಳ ಕುರಿತಂತೆ ಸಮಗ್ರ ಮಾಹಿತಿ ನೀಡಿದರು.
ಕಾಯಕ್ರಮದಲ್ಲಿ ಮಠದ ದಿವಾನರಾದ ಡಾ.ಉದಯಕುಮಾರ್ ಸರಳತ್ತಾಯ, ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಯಶ್ ಪಾಲ್ ಸುವರ್ಣ, ಪುರಪ್ರವೇಶ ಮೆರವಣಿಗೆಯ ಸಂಚಾಲಕ ಗಣೇಶ್ ರಾವ್, ಹೊರೆಕಾಣಿಕೆ ಸಂಚಾಲಕ ಸುಪ್ರಸಾದ್ ಶೆಟ್ಟಿ, ಕಾರ್ಯದರ್ಶಿ ಮೋಹನ್ ಭಟ್ ಭಾಗವಹಿಸಿದ್ದರು.
ವೇದಿಕೆಯಲ್ಲಿ ವಿವಿಧ ಸಮಿತಿಗಳ ಬಾಲಾಜಿ ಯೋಗೀಶ್ ಶೆಟ್ಟಿ, ಕೋಶಾಧಿಕಾರಿ ಜಯಪ್ರಕಾಶ್ ಕೆದ್ಲಾಯ, ಇಂದ್ರಾಳಿ ಜಯಕರ ಶೆಟ್ಟಿ, ಸಗ್ರಿ ಗೋಪಾಲಕೃಷ್ಣ ಸಾಮಗ, ಗಣೇಶ್ ರಾವ್, ರಮೇಶ್ ಕಾಂಚನ್, ರಮೇಶ್ ಬಂಗೇರ, ಪ್ರಚಾರ ಸಮಿತಿ ಸಂಚಾಲಕ ನಂದನ್ ಜೈನ್, ಮಧುಕರ ಮುದ್ರಾಡಿ ಮೊದಲಾದವರು ಉಪಸ್ಥಿತರಿದ್ದರು. ಅಶ್ವಥ್ ಭಾರಧ್ವಜ್ ಕಾರ್ಯಕ್ರಮ ನಿರೂಪಿಸಿದರು.







