Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ...

ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆಗೆ ವಿಶೇಷ ಆದ್ಯತೆ; ಲೀಡ್ ಬ್ಯಾಂಕ್ ಸಭೆಯಲ್ಲಿ ಜಿಪಂ ಸಿಇಓ ಪ್ರತೀಕ್ ಬಾಯಲ್

ವಾರ್ತಾಭಾರತಿವಾರ್ತಾಭಾರತಿ25 Nov 2026 7:04 PM IST
share
ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆಗೆ ವಿಶೇಷ ಆದ್ಯತೆ; ಲೀಡ್ ಬ್ಯಾಂಕ್ ಸಭೆಯಲ್ಲಿ ಜಿಪಂ ಸಿಇಓ ಪ್ರತೀಕ್ ಬಾಯಲ್

ಉಡುಪಿ ನ.25: ಜಿಲ್ಲೆಯಲ್ಲಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆಗೆ ಬ್ಯಾಂಕುಗಳು ಆರ್ಥಿಕ ನೆರವನ್ನು ಕಲ್ಪಿಸಿ ಹೆಚ್ಚು ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಪ್ರೋತ್ಸಾಹಿಸಬೇಕು ಎಂದು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದ್ದಾರೆ.

ಜಿಲ್ಲಾ ಲೀಡ್ ಬ್ಯಾಂಕ್ ವತಿಯಿಂದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಸಮಾಲೋಚನಾ ಸಮಿತಿ ಮತ್ತು ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ಧಗೊಳಿಸುವಿಕೆ ಯೋಜನೆ (ಪಿ.ಎಂ.ಎಫ್.ಎಅ.ಇ)ಯಡಿ ವಿವಿಧ ಘಟಕಗಳ ಸ್ಥಾಪನೆಗೆ ಕೇಂದ್ರ ಮತ್ತು ರಾಜ್ಯ ಸರಕಾರದ ವತಿಯಿಂದ 15 ಲಕ್ಷ ರೂ. ಗಳ ಅನುದಾನ ನೀಡಲಾಗುತ್ತಿದ್ದು, ಶೇ.50ರಷ್ಟು ಸಹಾಯಧನ ಸೌಲಭ್ಯ ಲಭ್ಯವಿದೆ. ಈ ಯೋಜನೆಯಡಿ ಸಹಾಯಧನ ಸೌಲಭ್ಯ ಪಡೆಯಲು ಯಾವುದೇ ಇಲಾಖೆಗೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಫಲಾಪೇಕ್ಷಿಗಳು ತಮ್ಮ ಮೊಬೈಲ್ ಮೂಲಕವೇ ಜಿಲ್ಲಾ ಸಂಪನ್ಮೂಲ ವ್ಯಕ್ತಿಗೆ ಅವಶ್ಯಕತೆ ದಾಖಲೆಗಳನ್ನು ಸಲ್ಲಿಸಿ, ಅವರ ಮಾರ್ಗದರ್ಶನದ ಅನುಸಾರ ಬ್ಯಾಂಕ್‌ಗಳಿಂದ ಆರ್ಥಿಕ ನೆರವು ಪಡೆಯ ಬಹುದಾಗಿದೆ ಎಂದರು.

ಠೇವಣಿ ಅನುಪಾತ ಏರಿಕೆ: ಕೇಂದ್ರ ಹಾಗೂ ರಾಜ್ಯ ಸರಕಾರದ ಪ್ರಾಯೋಜಿತ ಯೋಜನೆಗಳನ್ನು ಜನಸಾಮಾನ್ಯ ರಿಗೆ ತಲುಪಿಸುವಲ್ಲಿ ಬ್ಯಾಂಕುಗಳ ಪಾತ್ರ ಮಹತ್ವದ್ದಾಗಿದ್ದು, ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸಿ, ನಿಗಧಿತ ಗುರಿ ಸಾಧನೆಗೆ ಮುಂದಾಗಬೇಕು. ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ ಸಾರ್ವಜನಿಕರ ಅರ್ಜಿಗಳನ್ನು ಬಾಕಿ ಉಳಿಸಿಕೊಳ್ಳದೇ ಆದ್ಯತೆಯ ಮೇಲೆ ಅವುಗಳ ವಿಲೇವಾರಿಗೆ ಗಮನಹರಿಸಬೇಕು ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿನ ಎಲ್ಲಾ ಬ್ಯಾಂಕುಗಳ ವತಿಯಿಂದ 78,101.82 ಕೋಟಿ ರೂ. ನಷ್ಟು ವಹಿವಾಟು ನಡೆದಿದ್ದು, ಕಳೆದ ವರ್ಷಕ್ಕೆ ಹೋಲಿಸಿದ್ದಲ್ಲಿ ಹೆಚ್ಚು ವಹಿವಾಟು ನಡೆದಿದೆ. ಕಳೆದ ವರ್ಷದ ಸೆಪ್ಟಂಬರ್ ತಿಂಗಳಲ್ಲಿ ಬ್ಯಾಂಕಿಂಗ್ ಠೇವಣಿ ಅನುಪಾತವು ಶೇ.48.62 ಇದ್ದು, ಪ್ರಸ್ತುತ ಶೇ.49.32ರಷ್ಟು ಏರಿಕೆಯಾಗಿದೆ. ಆರ್‌ಬಿಐನ ನಿಯಮಾನುಸಾರ ಸಿ.ಡಿ ಅನುಪಾತದ ಹೆಚ್ಚಿಸಲು ಎಲ್ಲಾ ಬ್ಯಾಂಕ್‌ಗಳು ಕಾರ್ಯಪ್ರವೃತ್ತರಾಗಬೇಕು ಎಂದರು.

ಶೇ.62.41 ಗುರಿ ಸಾಧನೆ: ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಡಿವಿಜನಲ್ ಮ್ಯಾನೆಜರ್ ಅರ್ಚನಾ ಎನ್. ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಗೆ ಪ್ರಸಕ್ತ ಸಾಲಿನಲ್ಲಿ ಆದ್ಯತೆಯ ಮತ್ತು ಆದ್ಯತೆಯೇತರ ವಲಯ ಗಳೆರಡಕ್ಕೂ ಒಟ್ಟಾರೆಯಾಗಿ 18,532.26 ಕೋಟಿ ರೂ.ಗಳ ವಾರ್ಷಿಕ ಕ್ರೆಡಿಟ್ ಯೋಜನೆ ಗುರಿಯನ್ನು ನಿಗದಿಪಡಿಸಲಾಗಿದ್ದು, 2026ರ ಸೆಪ್ಟಂಬರ್ ಅಂತ್ಯದವರೆಗೆ 11,565.64 ಕೋಟಿ ರೂ. ಗುರಿ ಸಾಧಿಸಿ, ಶೇ. 62.41 ಸಾಧನೆ ಮಾಡಲಾಗಿದೆ ಎಂದರು.

ಕೃಷಿ ವಲಯದಲ್ಲಿ 4,801.25 ಕೋಟಿ ರೂ. ನಿಗಧಿತ ಗುರಿಗೆ 2,644.45 ಕೋಟಿ ರೂ. ಗುರಿ ಸಾಧಿಸಿ ಶೇ.55.08, ಎಂ.ಎಸ್.ಎಅ.ಇ ವಲಯಕ್ಕೆ 4,192.82 ಕೋಟಿ ರೂ. ನಿಗಧಿತ ಗುರಿಗೆ 3,201.20 ಕೋಟಿ ರೂ. ಗುರಿ ಸಾಧಿಸಿ ಶೇ. 76.35ರಷ್ಟು, ಶಿಕ್ಷಣ ವಲಯದಲ್ಲಿ 231.82 ಕೋಟಿ ರೂ. ನಿಗಧಿತ ಗುರಿಗೆ 142.58 ಕೋಟಿ ರೂ. ಗುರಿ ಸಾಧಿಸಿ ಶೇ. 61.51 ರಷ್ಟು, ವಸತಿ ಕ್ಷೇತ್ರಗಳಿಗೆ 264.54 ಕೋಟಿ ರೂ. ನಿಗಧಿತ ಗುರಿಗೆ 140.90 ಕೋಟಿ ರೂ. ಗುರಿ ಸಾಧಿಸಿ ಶೇ. 53.26 ರಷ್ಟು, ಇತರೆ ಕ್ಷೇತ್ರಗಳಿಗೆ 373.47 ಕೋಟಿ ರೂ. ನಿಗಧಿತ ಗುರಿಗೆ, 307.89 ಕೋಟಿ ರೂ. ಗುರಿ ಸಾಧಿಸಿ ಶೇ. 82.44 ಸೇರಿದಂತೆ ಒಟ್ಟು ಆದ್ಯತಾ ವಲಯಕ್ಕೆ 9,863.89 ನಿಗಧಿತ ಗುರಿಗೆ 6,437.03 ರಷ್ಟು ಗುರಿ ಸಾಧಿಸಿ ಶೇ.65.26 ರಷ್ಟು ಸಾಧನೆ ಮಾಡಲಾಗಿದೆ. ಹಾಗೂ ಆದ್ಯತೇತರ ವಲಯಗಳಿಗೆ 8,668.37 ಕೋಟಿ ರೂ. ನಿಗಧಿತ ಗುರಿಗೆ, 5,128.61 ಕೋಟಿ ರೂ. ಗುರಿ ಸಾಧಿಸಿ ಶೇ. 59.16 ರಷ್ಟು ಸಾಧನೆ ಮಾಡಲಾಗಿದೆ ಎಂದರು.

ಸಭೆಯಲ್ಲಿ ನಬಾರ್ಡ್‌ನ ಡಿ.ಡಿ.ಎಂ ಸಂಗೀತಾ ಕಾರ್ಥಾ, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್ ಜಿ, ಎಸ್‌ಸಿಡಿಸಿಸಿ ಬ್ಯಾಂಕಿನ ಜೆ.ಜೆ.ಎಂ ವಿಶ್ವನಾಥ ಶೆಟ್ಟಿ, ರುಡ್ಸೆಟ್ ಸಂಸ್ಥೆಯ ನಿರ್ದೇಶಕ ಡಾ.ಬೊಮ್ಮಯ್ಯ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕುಗಳ ಮುಖ್ಯಸ್ಥರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Tags

Special priorityestablishmentmicro foodprocessingenterprises
share
ವಾರ್ತಾಭಾರತಿ
ವಾರ್ತಾಭಾರತಿ
Next Story
X