ಪತ್ತೊಂಜಿಕಟ್ಟೆ ಶಾಲೆಗೆ ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲ ವತಿಯಿಂದ ಎಲ್ಇಡಿ ಟಿವಿ ಕೊಡುಗೆ

ಕಾರ್ಕಳ : ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲ ಹಾಗೂ ಶ್ರೀ ಮಹಾಲಿಂಗೇಶ್ವರ ಮಹಿಳಾ ಮಂಡಲ ಇದರ ವತಿಯಿಂದ ದಾನಿಗಳ ನೆರವಿನಿಂದ ಪತ್ತೊಂಜಿಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ "ಎಲ್ಇಡಿ ಟಿವಿ "ಹಸ್ತಾಂತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾಲಿಂಗೇಶ್ವರ ಯುವಕ ಮಂಡಲದ ಅಧ್ಯಕ್ಷರಾದ ಪ್ರಸಾದ್ ದೇವಾಡಿಗ ಇವರು ವಹಿಸಿದ್ದರು. ವೇದಿಕೆಯಲ್ಲಿ ಮಹಿಳಾ ಮಂಡಲದ ಅಧ್ಯಕ್ಷರಾದ ರೂಪಾ ಹರೀಶ್ ಶೆಟ್ಟಿ, ಯುವಕ ಮಂಡಲದ ಕಾರ್ಯದರ್ಶಿ ರಘುನಾಥ್ ಪೂಜಾರಿ ಮತ್ತು ಮಹಿಳಾ ಮಂಡಲದ ಕಾರ್ಯದರ್ಶಿ ಮಮತಾ ಸುವರ್ಣ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಹರ್ಷಿಣಿ ಮತ್ತು ಶಾಲಾ ಮುಖ್ಯೋಪಾಧ್ಯಾಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಯುವಕ ಮಂಡಲದ ಮತ್ತು ಮಹಿಳಾ ಮಂಡಲ ಪದಾಧಿಕಾರಿಗಳು ಸದಸ್ಯರು ಮತ್ತು ಯುವಕ ಮಂಡಲದ ಗೌರವ ಸಲಹೆಗಾರರು ಉಪಸ್ಥಿತರಿದ್ದರು.
Next Story





