ಶಿರಸಿಯ ಯಕ್ಷಶಾಲ್ಮಲಾ ಸಂಸ್ಥೆಗೆ ಶ್ರೀವಿಶ್ವೇಶತೀರ್ಥ ಪ್ರಶಸ್ತಿ
ಉಡುಪಿ: ಯಕ್ಷಗಾನ ಹಾಗೂ ತಾಳಮದ್ದಲೆಯ ಪಾರಂಪರಿಕ ಸೊಬಗಿನ ಉಳಿವು ಬೆಳವಣಿಗೆಗಾಗಿ ಕಳೆದ 25 ವರ್ಷಗಳಿಂದ ಶ್ರಮಿಸುತ್ತಿರುವ ಶಿರಸಿಯ ಯಕ್ಷಶಾಲ್ಮಲ ಸಂಸ್ಥೆಯು ಉಡುಪಿಯ ಯಕ್ಷಗಾನ ಕಲಾರಂಗ ಕೊಡಮಾಡುವ ಈ ಬಾರಿಯ ಪ್ರತಿಷ್ಠಿತ ‘ಶ್ರೀವಿಶ್ವೇಶತೀರ್ಥಪ್ರಶಸ್ತಿ’ಗೆ ಆಯ್ಕೆಗೊಂಡಿದೆ.
ಸ್ವರ್ಣವಲ್ಲಿ ಮಠಾಧೀಶರಾದ ಶ್ರೀಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಅವರ ಗೌರವಾಧ್ಯಕ್ಷತೆಯಲ್ಲಿ ಮಠದ ಆಶ್ರಯದಲ್ಲಿ ಯಕ್ಷಗಾನದ ಏಳಿಗೆಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಥೆಗೆ ಹೊಸ್ತೋಟ ಮಂಜುನಾಥ ಭಾಗವತ ಮತ್ತು ಪ್ರೊ.ಎಂ.ಎ. ಹೆಗಡೆ ಅವರು ಮಾರ್ಗದರ್ಶಕರಾಗಿದ್ದರು.
50,000ರೂ.ನಗದು ಪುರಸ್ಕಾರಗಳನ್ನೊಳಗೊಂಡ ಪ್ರಶಸ್ತಿಯನ್ನು ನವೆಂಬರ್ 18ರ ಶನಿವಾರದಂದು ಶ್ರೀಕ್ಷೇತ್ರ ಕಟೀಲಿನಲ್ಲಿ ನಡೆಯುವ ಸಮಾರಂಭದಲ್ಲಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪ್ರದಾನ ಮಾಡಲಾಗುವುದು ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.
Next Story





