ರಾಜ್ಯ ಮಟ್ಟದ ಸ್ಕೇಟಿಂಗ್ : ಜನಿಟ ಡಿಸೋಜಗೆ ಮೂರು ಚಿನ್ನ

ಕಾರ್ಕಳ, ನ.12: ಕರ್ನಾಟಕ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಬೆಂಗಳೂರಿನಲ್ಲಿ ಆಯೋಜಿಸಿದ್ದ 41ನೇ ಕರ್ನಾಟಕ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ ನಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 2ನೇ ವರ್ಷದ ವಿದ್ಯಾರ್ಥಿನಿ ಜೆನಿಟ ವೆಲಿಕ ಡಿಸೋಜ ಮೂರು ಚಿನ್ನದ ಪದಕಗಳನ್ನು ಗೆದ್ದು ಉತ್ತಮ ಸಾಧನೆ ಮಾಡಿದ್ದಾರೆ.
ಉಡುಪಿಯ ಕರಾವಳಿ ರೋಲರ್ ಸ್ಕೇಟಿಂಗ್ ಕ್ಲಬ್ ನಲ್ಲಿ ತರಬೇತಿ ಪಡೆಯುತ್ತಿರುವ ಜೆನಿಟ, 18 ವರ್ಷ ಮೇಲ್ಪಟ್ಟವರ ವಿಭಾಗದ ಸ್ಪೀಡ್ ಕ್ವಾಡ್ ಸ್ಪರ್ಧೆಯಲ್ಲಿ ಅದ್ಭುತ ಪ್ರದರ್ಶನ ನೀಡಿ ಚಾಂಪಿಯನ್ ಶಿಪ್ ನಲ್ಲಿ ಒಟ್ಟು ಮೂರು ಚಿನ್ನದ ಪದಕ ಗೆದ್ದುಕೊಂಡರಲ್ಲದೇ, ಮುಂದಿನ ರಾಷ್ಟ್ರೀಯ ರೋಲರ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುವ ಅವಕಾಶವನ್ನೂ ಪಡೆದುಕೊಂಡರು.
ಜೆನಿಟ ಅವರು ಉಡುಪಿಯ ಆಗ್ನೆಲ್ಲೊ ಡಿಸೋಜ ಹಾಗೂ ಜೆಸಿಂತಾ ರೋಜ್ ಡಿಸೋಜ ಅವರ ಪುತ್ರಿಯಾಗಿದ್ದು, ಮನೀಶ್ ಬಂಗೇರ ಮತ್ತು ಕಿಶೋರ್ ಕುಮಾರ್ ಇವರಿಗೆ ಮಾರ್ಗದರ್ಶನ ನೀಡಿದ್ದಾರೆ.
Next Story





