ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ 27ರಂದು ಉಡುಪಿಗೆ

ಡಾ.ನಾಗಲಕ್ಷ್ಮೀ ಚೌಧರಿ
ಉಡುಪಿ, ನ.21: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ನ.26 ಮತ್ತು 27ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ನ.26ರ ಸಂಜೆ ಉಡುಪಿಗೆ ಆಗಮಿಸಿ ವಾಸ್ತವ್ಯ ಮಾಡುವ ಡಾ.ಚೌಧರಿ, ನ.27ರಂದು ಬೆಳಗ್ಗೆ 10 ಗಂಟೆಗೆ ಉಡುಪಿ ಜಿಲ್ಲಾ ಆಸ್ಪತ್ರೆಗೆ ಭೇಟಿ, ಅಪರಾಹ್ನ 12 ಗಂಟೆಗೆ ಸಖಿ ಒನ್ ಸ್ಟಾಪ್ ಸೆಂಟರ್ ಗೆ ಭೇಟಿ ನೀಡಿ ನಂತರ ಮಂಗಳೂರಿಗೆ ತೆರಳಿ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





