Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ರೈತರಿಗಾಗಿ ವಾರಾಹಿ ಯೋಜನಾ ಕಾಮಗಾರಿ...

ರೈತರಿಗಾಗಿ ವಾರಾಹಿ ಯೋಜನಾ ಕಾಮಗಾರಿ ಶೀಘ್ರ ಮುಗಿಸಲು ಕ್ರಮ: ಕುಂದಾಪುರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ26 March 2026 8:23 PM IST
share
ರೈತರಿಗಾಗಿ ವಾರಾಹಿ ಯೋಜನಾ ಕಾಮಗಾರಿ ಶೀಘ್ರ ಮುಗಿಸಲು ಕ್ರಮ: ಕುಂದಾಪುರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
‘ಉಪಚುನಾವಣೆಯ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ’

ಕುಂದಾಪುರ, ಮಾ.26: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ ಕ್ಷೇತ್ರಗಳ ಮುಂದಿನ ತಿಂಗಳು ನಡೆಯುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಗಳಿಸುವುದು ನಿಶ್ಚಿತ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹೆರಂಜಾಲು ಸಮೀಪ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ ಸಚಿವರು, ಕೋಟೇಶ್ವರ ಸಮೀಪದ ಯುವ ಮೆರಿಡಿಯನ್ ಹೆಲಿಪ್ಯಾಡ್ ಬಳಿ ಗುರುವಾರ ಮಾಧ್ಯಮಗಳ ಜೊತೆ ಮಾತನಾಡು ಚುನಾವಣೆಯಲ್ಲಿ ಗೆಲುವಿನ ತುಂಬು ಭರವಸೆ ವ್ಯಕ್ತಪಡಿಸಿದರು.

ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರದಲ್ಲಿರುವ ಪಕ್ಷದ ಕಡೆಗೆ ಮತದಾರರ ಒಲವಿರುತ್ತದೆ. ನಮ್ಮ ಸರಕಾರದ ಗ್ಯಾರಂಟಿ ಯೋಜನೆಗಳು ನಾಡಿನ ಮನೆ ಮನೆಗೆ ತಲುಪಿವೆ. ಅಭಿವೃದ್ಧಿಯ ಜೊತೆಗೆ ಜನರ ಆದಾಯ ಕೂಡ ಜಾಸ್ತಿ ಆಗಿದೆ. ಅದರಲ್ಲೂ ಮಹಿಳಾ ಮತದಾರರು ಸಂತೋಷ ದಲ್ಲಿದ್ದಾರೆ. ಹೀಗಾಗಿ ಎರಡು ಕ್ಷೇತ್ರಗಳಲ್ಲೂ ಗೆದ್ದೇ ಗೆಲ್ಲುತ್ತೇವೆ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಟಿಕೆಟ್ ಕೇಳುವ ಹಕ್ಕಿದೆ. ಗೆಲುವೊಂದೇ ನಮಗೆ ಮಾನದಂಡ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಲಾಗಿದೆ. ಇದು ಹೈಕಮಾಂಡ್ ನಿರ್ಧಾರವಾಗಿದ್ದು ಇದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.

ವಾರಾಹಿ ಯೋಜನೆ: ಕಳೆದ ನಾಲ್ಕೈದು ದಶಕಗಳಿಂದ ನಡೆಯುತ್ತಿರುವ ವಾರಾಹಿ ಯೋಜನಾ ಕಾಮಗಾರಿಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಲ್ಲಿನ ರೈತರಿಗೆ ಅನ್ಯಾಯ ಆಗಲು ಬಿಡಲ್ಲ ಎಂದರು. ವಾರಾಹಿ ಯೋಜನೆಗೆ ಸಂಬಂಧಪಟ್ಟಂತೆ ಈಗಾಗಲೇ ಎರಡು ಕಡೆಯ ರೈತರು ಮನವಿ ನೀಡಿದ್ದು, ಯಾರಿಗೂ ಅನ್ಯಾಯ ಆಗಬಾರದು ಎಂಬುದೇ ಜಿಲ್ಲಾಡಳಿತ ಹಾಗೂ ಸರಕಾರದ ಆಶಯವಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನುಡಿದರು.

ಈಗಾಗಲೇ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಮಸ್ತ ರೈತಾಪಿ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸುವ ಬಗ್ಗೆ ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ಬೈಂದೂರಿನಲ್ಲಿ ಇತ್ತೀಚೆಗೆ ಉದ್ಘಾಟನೆಗೊಂಡ ನೂತನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಒಂದಷ್ಟು ಸರಕಾರಿ ಬಸ್‌ಗಳು ಪ್ರವೇಶಿಸದ ವಿಷಯವನ್ನು ಸಚಿವರ ಗಮನಕ್ಕೆ ತಂದಾಗ ಉತ್ತರಿಸಿ ಈ ಬಗ್ಗೆ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಸಭೆ ಕರೆದು ಶೀಘ್ರವೇ ಸಮಸ್ಯೆ ಬಗೆಹರಿಸಲಾಗುವುದು ಎಂದರು.

ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಜಿಲ್ಲಾ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ, ಪ್ರಮುಖರಾದ ಅರವಿಂದ ಪೂಜಾರಿ, ಸಂಪಿಗೇಡಿ ಸಂಜೀವ ಶೆಟ್ಟಿ, ಶೇಖರ ಪೂಜಾರಿ, ರಮೇಶ್ ಕಾಂಚನ್, ಸಂತೋಷ ಶೆಟ್ಟಿ ಬಲಾಡಿ, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಕುಂದಾಪುರ ಉಪವಿಭಾಗ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್, ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ಕುಂದಾಪುರ ಇನ್‌ಸ್ಪೆಕ್ಟರ್ ಜಯರಾಮ್ ಗೌಡ, ಯುವ ಮೆರಿಡಿಯನ್ ಆಡಳಿತ ಪಾಲುದಾರ ಬಿ. ಉದಯ್‌ಕುಮಾರ್ ಶೆಟ್ಟಿ ಈ ವೇಳೆ ಉಪಸ್ಥಿತರಿದ್ದರು.

Tags

Varahi schemeworkfarmersMinister Lakshmi HebbalkarKundapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X