Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗ್ಯಾಸ್ ಸಿಲಿಂಡರ್‌ಗೆ ನಿಗದಿತ ದರಕ್ಕಿಂತ...

ಗ್ಯಾಸ್ ಸಿಲಿಂಡರ್‌ಗೆ ನಿಗದಿತ ದರಕ್ಕಿಂತ ಹೆಚ್ಚು ಪಡೆದರೆ ನಿರ್ದಾಕ್ಷಿಣ್ಯ ಕ್ರಮ: ಉಡುಪಿ ಡಿಸಿ ಸ್ವರೂಪಾ ಟಿ.ಕೆ. ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ31 March 2026 8:40 PM IST
share
ಗ್ಯಾಸ್ ಸಿಲಿಂಡರ್‌ಗೆ ನಿಗದಿತ ದರಕ್ಕಿಂತ ಹೆಚ್ಚು ಪಡೆದರೆ ನಿರ್ದಾಕ್ಷಿಣ್ಯ ಕ್ರಮ: ಉಡುಪಿ ಡಿಸಿ ಸ್ವರೂಪಾ ಟಿ.ಕೆ. ಎಚ್ಚರಿಕೆ

ಉಡುಪಿ, ಮಾ.31: ವಾಹನಕ್ಕೆ ಬಳಕೆ ಮಾಡುವ ಎಲ್‌ಪಿಜಿ ಹಾಗೂ ಸಿಎನ್‌ಜಿ ಅನಿಲಗಳನ್ನು ತೈಲ ಕಂಪೆನಿಗಳು ನಿಗದಿಪಡಿಸಿರುವ ದರದಲ್ಲಿಯೇ ವಿತರಿಸಬೇಕು. ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು. ಪ್ರತಿ ಸಿಲಿಂಡರ್‌ಗೆ ನಿಗದಿಪಡಿಸಿರುವ ಮೊತ್ತವನ್ನು ಹಾಗೂ ದಾಸ್ತಾನನ್ನು ತಮ್ಮ ವಿತರಣಾ ಕೇಂದ್ರದಲ್ಲಿ ಜನಸಾಮಾನ್ಯರಿಗೆ ಕಾಣುವ ರೀತಿಯಲ್ಲಿ ಪ್ರದರ್ಶಿಸಬೇಕು. ಒಂದೊಮ್ಮೆ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣ ಪಡೆದಲ್ಲಿ ಅಂಥವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಎಚ್ಚರಿಸಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಗೃಹ ಬಳಕೆಯ ಅನಿಲ ಸೇರಿದಂತೆ ಜಿಲ್ಲೆಯಲ್ಲಿ ವಿವಿಧ ಅನಿಲ ವಿತರಣೆ ಕುರಿತಂತೆ ಕರೆದ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ಗೃಹ ಬಳಕೆಯ ಸಿಲಿಂಡರ್‌ಗಳನ್ನು ಇತರ ಉದ್ದೇಶಗಳಿಗೆ ಬಳಸದಂತೆ ನೋಡಿಕೊಳ್ಳಬೇಕು. ಒಂದೊಮ್ಮೆ ಇತರೆ ಉದ್ದೇಶಕ್ಕೆ ಬಳಸಿದಲ್ಲಿ ಅಂತವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.‌


ಏಕಬಳಕೆ ಸಿಲಿಂಡರ್ ಹೊಂದಿರುವ ಗ್ರಾಹಕರು ಸಿಲಿಂಡರ್ ಪಡೆದ 25 ದಿನಗಳ ನಂತರ ಹಾಗೂ ಎರಡು ಸಿಲಿಂಡರ್‌ ಗಳನ್ನು ಹೊಂದಿರುವ ಗ್ರಾಹಕರು ಅನಿಲ ಪೂರೈಕೆ ಮಾಡಿದ 35 ದಿನಗಳ ನಂತರ ಮತ್ತೊಂದು ಸಿಲಿಂಡರ್‌ಗೆ ಬುಕ್ಕಿಂಗ್ ಮಾಡಲು ಅವಕಾಶವಿದೆ. ಆದಷ್ಟು ಮನೆ ಮನೆಗೆ ಗೃಹ ಬಳಕೆಯ ಸಿಲಿಂಡರ್‌ಗಳನ್ನು ವಿತರಣೆ ಮಾಡುವ ಮೂಲಕ ಏಜನ್ಸಿಗಳ ಮುಂದೆ ಬಳಕೆದಾರರು ಸಾಲುಗಟ್ಟಿ ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲೆಯ ಅನಿಲ ವಿತರಕರಿಗೆ ಜಿಲ್ಲಾಧಿಕಾರಿ ಸೂಚನೆಗಳನ್ನು ನೀಡಿದರು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲೆಯ ಗೃಹ ಬಳಕೆ ಗ್ರಾಹಕರಿಗೆ ಎಲ್‌ಪಿಜಿ ಸಿಲಿಂಡರ್‌ಗಳ ವಿತರಣೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಉಂಟಾಗದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಹಾಗೂ ಸಿಲಿಂಡರ್ ವಿತರಣಾ ಸಂಸ್ಥೆಗಳಿಗೆ ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಗೃಹಬಳಕೆ ಸಿಲಿಂಡರ್‌ಗಳ ವಿತರಣೆಯಲ್ಲಿ, ಅದರಲ್ಲೂ ವಿಶೇಷವಾಗಿ ಏಕ ಸಿಲಿಂಡರ್ ಹೊಂದಿರುವವರಿಗೆ ವಿತರಣೆ ಯಲ್ಲಿ ಸಮಸ್ಯೆಗಳಾಗುತ್ತಿರುವ ಬಗ್ಗೆ ನನಗೆ ದೂರುಗಳು ಬಂದಿವೆ. ಈ ಹಿಂದೆ ಬೇಡಿಕೆಗೆ ಅನುಗುಣವಾಗಿ ಅನಿಲ ಲಭ್ಯವಾಗುತ್ತಿತ್ತು. ಆದರೆ ಪಶ್ಚಿಮ ಏಷ್ಯಾ ದೇಶಗಳಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ಸದ್ಯ ಸಮರ್ಪಕವಾಗಿ ಅನಿಲಗಳು ಆಮದು ಆಗದೆ ಇರುವ ಹಿನ್ನೆಲೆಯಲ್ಲಿ ಸ್ವಲ್ಪ ತೊಂದರೆಗಳಾಗಿವೆ ಎಂದರು.

ಸರಕಾರ ಬದ್ಧ: ಆದರೂ ಗೃಹಬಳಕೆ ಅನಿಲಗಳ ವಿತರಣೆಯಲ್ಲಿ ಯಾವುದೇ ತೊಂದರೆ ಉಂಟಾಗದಂತೆ ವಿತರಿಸಲು ಸರಕಾರ ಬದ್ಧವಿದೆ. ಗೃಹ ಬಳಕೆ ವಿತರಣೆಯಲ್ಲಿ ಏಕ ಸಿಲಿಂಡರ್ ಹೊಂದಿರುವ ಗ್ರಾಹಕರಿಗೆ ತೊಂದರೆ ಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳು ಹಾಗೂ ವಿತರಣಾ ಸಂಸ್ಥೆಗಳಿಗೆ ಸೂಚಿಸಿದರು.

ವಾಣಿಜ್ಯ ಬಳಕೆಯ ಗ್ರಾಹಕರಿಗೆ ನಿಗದಿಯ ಶೇ.20ರಷ್ಟು ಪ್ರಮಾಣದಲ್ಲಿ ಕೊಡುವ ಉದ್ದೇಶವನ್ನು ಹೊಂದಿರುವ ಬಗ್ಗೆ ಸರಕಾರ ತಿಳಿಸಿದೆ. ವಿದ್ಯಾರ್ಥಿ ನಿಲಯಗಳಿಗೆ, ಆಸ್ಪತ್ರೆ, ಶಾಲೆ ಸೇರಿದಂತೆ ತುರ್ತು ಮತ್ತು ಅತೀ ಅಗತ್ಯವಿರುವ ಸಂಸ್ಥೆಗಳಿಗೆ ಆದ್ಯತೆಯ ಮೇಲೆ ವಾಣಿಜ್ಯ ಸಿಲಿಂಡರ್‌ಗಳ ವಿತರಣೆಯನ್ನು ಮಾಡಬೇಕು ಎಂದೂ ಅವರು ಸ್ಪಷ್ಟ ನಿರ್ದೇಶನ ನೀಡಿದರು.


ಮಣಿಪಾಲ ವ್ಯಾಪ್ತಿಯಲ್ಲಿ ವಾಣಿಜ್ಯ ಸಿಲಿಂಡರ್ ನೋಂದಾಯಿತ ಗ್ರಾಹಕರಿಗೆ ನೋಂದಣಿ ಮಾಡಿಕೊಂಡ ಸಂಸ್ಥೆ ಗಳಿಂದ ಅನಿಲ ವಿತರಣೆ ಆಗುತ್ತಿಲ್ಲ. ಇದರಿಂದ ತೊಂದರೆ ಉಂಟಾಗುತ್ತಿದೆ. ನೋಂದಣಿಯನ್ನು ಇತರೆ ಸಂಸ್ಥೆಗಳಿಗೆ ವರ್ಗಾಯಿಸುವ ಅಗತ್ಯವಿದ್ದು, ಈ ಬಗ್ಗೆ ಅನಿಲ ಕಂಪನಿ ಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಎಂದರು.

ತೈಲಗಳಿಗೆ ಸಮಸ್ಯೆಯಿಲ್ಲ: ಜಿಲ್ಲೆಯಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ವಿತರಣೆಯಲ್ಲಿ ಯಾವುದೇ ರೀತಿಯ ಸಮಸ್ಯೆ ಗಳಿಲ್ಲ. ಆದರೆ ಅನಧಿಕೃತವಾಗಿ ದಾಸ್ತಾನು ಮಾಡದಂತೆ ಎಚ್ಚರ ವಹಿಸಬೇಕು. ಈಗಾಗಲೇಸಾಕಷ್ಟು ದಿನಗಳಿಂದ ಜನರೇಟರ್‌ಗಳಿಗೆ ಹಾಗೂ ಮೀನುಗಾರಿಕಾ ಬೋಟ್‌ಗಳಿಗೆ, ನಿರಂತರವಾಗಿ ಕೊಂಡೊಯ್ಯುವವರಿಗೆ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್‌ಪಿ ಸುಧಾಕರ್ ನಾಯಕ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ರವೀಂದ್ರ, ಜಿಲ್ಲೆಯ ವಿವಿಧ ಗ್ಯಾಸ್ ಏಜನ್ಸಿಗಳ ಹಾಗೂ ಬಂಕುಗಳ ಮಾಲಕರು, ವಿತರಕರು ಸಭೆಯಲ್ಲಿ ಉಪಸ್ಥಿತರಿದ್ದರು.




Tags

StrictgascylinderchargedprescribedrateUdupiDC Swaroopa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X