ಹಾಸ್ಟೆಲ್‌ನಿಂದ ವಿದ್ಯಾರ್ಥಿ ನಾಪತ್ತೆ

ಉಡುಪಿ, ಜ.16: 76 ಬಡಗುಬೆಟ್ಟು ಗ್ರಾಮದ ಕುಕ್ಕಿಕಟ್ಟೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಯೊಬ್ಬ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ನಾಪತ್ತೆಯಾದ ವಿದ್ಯಾರ್ಥಿಯನ್ನು ಚಿತ್ರದುರ್ಗ ಮೂಲದ ದರ್ಶನ್ ಎಸ್ (23) ಎಂದು ಗುರುತಿಸಲಾಗಿದೆ. ಈತ ಜ.12ರಂದು ರಾತ್ರಿ ಯಾರಿಗೂ ಹೇಳದೆ ಹಾಸ್ಟೆಲ್‌ನಿಂದ ಹೋದವನು ಮನೆಗೂ ಹೋಗದೆ ನಾಪತ್ತೆಯಾಗಿ ದ್ದಾನೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





