ವಿದ್ಯಾರ್ಥಿನಿ ಆತ್ಮಹತ್ಯೆ

ಕೊಲ್ಲೂರು, ಆ.6: ಕ್ಷುಲ್ಲಕ ಕಾರಣಕ್ಕಾಗಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.6ರಂದು ಬೆಳಗ್ಗೆ ನಡೆದಿದೆ.
ಮೃತರನ್ನು ಬೆಳ್ಳಾಲ ಗ್ರಾಮದ ಚಂದ್ರಾವತಿ ಹಾಗೂ ಪ್ರಭಾಕರ ನಾಯಕ್ ದಂಪತಿ ಪುತ್ರಿ ಪ್ರಮಿತಾ(18) ಎಂದು ಗುರುತಿಸಲಾಗಿದೆ. ಕುಂದಾಪುರ ಬಿಬಿ ಹೆಗ್ಡೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದ ಪ್ರಮಿತಾ, ಬಟ್ಟೆಗಳನ್ನು ರೂಮಿನಲ್ಲಿ ಇಡುವ ಬಗ್ಗೆ ತಂಗಿ ಜೊತೆ ಜಗಳ ಆಡಿದ್ದಳು. ಇದೇ ವಿಚಾರವಾಗಿ ತಾಯಿ ಇಬ್ಬರಿಗೂ ಬೈದಿದ್ದರು. ಇದೇ ಸಿಟ್ಟಾಲ್ಲಿ ಪ್ರಮಿತಾ, ಮನೆಯ ಕೋಣೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




