Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹೆಬ್ರಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ...

ಹೆಬ್ರಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಬೆಂಕಿ ಬಗ್ಗೆ ಅನುಮಾನ: ಸಮಗ್ರ ತನಿಖೆಗೆ ಗ್ರಾಮಸ್ಥರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ21 Feb 2026 9:49 PM IST
share
ಹೆಬ್ರಿ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಬೆಂಕಿ ಬಗ್ಗೆ ಅನುಮಾನ: ಸಮಗ್ರ ತನಿಖೆಗೆ ಗ್ರಾಮಸ್ಥರ ಆಗ್ರಹ

ಉಡುಪಿ, ಫೆ.21: ಹೆಬ್ರಿಯಲ್ಲಿರುವ, ಆಸುಪಾಸಿನ 16 ಗ್ರಾಪಂಗಳ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಕಳೆದ ಜ.14ರಂದು ಕಂಡುಬಂದ ಬೆಂಕಿ ಅಕಸ್ಮಿಕದ ಕುರಿತಂತೆ ಹೆಬ್ರಿಯ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಈ ಕುರಿತಂತೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಲೋಕಾಯುಕ್ತಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.

ಜ.14ರಂದು ಹೆಬ್ರಿ ತಾಲೂಕು ಪಂಚಾಯತ್ ಅಧೀನದಲ್ಲಿರುವ ಹೆಬ್ರಿಯ ಎಂಆರ್‌ಎಫ್ ಘಟಕಕ್ಕೆ ಅಕಸ್ಮಿಕವಾಗಿ ಬೆಂಕಿ ಬಿದ್ದು ಕೋಟ್ಯಾಂತರ ರೂ. ಮೌಲ್ಯದ ಸೊತ್ತುಗಳು, ಯಂತ್ರೋಪಕರಣಗಳು ನಾಶವಾಗಿರುವ ಬಗ್ಗೆ ಹೆಬ್ರಿ ತಾಪಂ ಕಾರ್ಯನಿರ್ವಹಣಾಧಿಕಾರಿಯವರು ಮಾಹಿತಿ ನೀಡಿದ್ದರು. ಬೆಂಕಿ ಅಕಸ್ಮಿಕಕ್ಕೆ ವಿದ್ಯುತ್ ಶಾರ್ಟ್‌ಸರ್ಕ್ಯೂಟ್ ಕಾರಣ ಎಂಬ ಸಂಶಯವಿದೆ ಎಂದವರು ತಿಳಿಸಿದ್ದರು.

ಆದರೆ ಕಳೆದ ಆರೇಳು ತಿಂಗಳುಗಳಿಂದ ಈ ಘಟಕ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಇಲ್ಲಿ ಯಾವುದೇ ಕಸಗಳ ವಿಲೇವಾರಿ ನಡೆಯುತ್ತಿ ರಲಿಲ್ಲ. ಇದರ ವಿದ್ಯುತ್ ಸಂಪರ್ಕವೂ ಕಡಿತಗೊಂಡಿತ್ತು ಎಂದು ಹೆಬ್ರಯ ಪ್ರಗತಿಪರ ಸೇವಾ ಸಮಿತಿಯ ಅಧ್ಯಕ್ಷ ಕೆರೆಬೆಟ್ಟು ಸಂಜೀವ ಶೆಟ್ಟಿ ಹಾಗೂ ಶ್ರೀಕಾಂತ್ ಹೆಬ್ರಿ ಹೇಳುತ್ತಾರೆ.

ಒಂದು ವಾರದಲ್ಲಿ ಮೂರನೇ ಘಟಕಕ್ಕೆ ಹೀಗೆ ಬೆಂಕಿ ಬೀಳುತ್ತಿದೆ. ಇದು ಖಂಡಿತ ಅಕಸ್ಮಿಕವಲ್ಲ. ಉದ್ದೇಶಪೂರ್ವಕ. ಯಾರೋ ಉದ್ದೇಶಪೂರ್ವಕವಾಗಿ ಬೆಂಕಿ ಹಾಕಿರಬಹುದು. ಹೀಗಾಗಿ ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಸತ್ಯ ಬಹಿರಂಗ ಪಡಿಸುವಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಲೋಕಾಯುಕ್ತಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದ್ದೇವೆ ಎಂದವರು ತಿಳಿಸಿದರು.

ಆಸುಪಾಸಿನಹೆಬ್ರಿ, ಚಾರ, ಬೆಳಂಜೆ, ಮಡಾಮಕ್ಕಿ ಸೇರಿದಂತೆ 16 ಗ್ರಾಪಂ ಗಳ ತ್ಯಾಜ್ಯಗಳ ನಿರ್ವಹಣೆಗಾಗಿ ಸುಮಾರು 3ರಿಂದ 4 ಕೋಟಿ ರೂ.ವೆಚ್ಚದಲ್ಲಿ ಈ ಘಟಕವನ್ನು ನಿರ್ಮಿಸಲಾಗಿದೆ. ಕೆಲವು ದಿನಗಳ ಹಿಂದೆ ಬೆಳ್ವೆಯ ಎಂಆರ್‌ಎಫ್ ಘಟಕಕ್ಕೆ ಬೆಂಕಿ ಬಿದ್ದಿತ್ತು ಎಂದು ಶ್ರೀಕಾಂತ್ ಹೆಬ್ರಿ ತಿಳಿಸಿದರು.

ಕೆಲವು ತಿಂಗಳ ಹಿಂದೆಯೇ ಘಟಕಕ್ಕೆ ಬೀಗ ಹಾಕಲಾಗಿದ್ದು, ಕೀಯನ್ನು ತಾಲೂಕು ಪಂಚಾಯತ್‌ಗೆ ನೀಡಲಾಗಿತ್ತು ಎಂದು ತಿಳಿದುಬಂದಿದೆ. ಅಲ್ಲಿನ ವಿದ್ಯುತ್ ಸಂಪರ್ಕವೂ ಕಡಿತಗೊಂಡಿರುವ ಬಗ್ಗೆ ಮಾಹಿತಿ ಇದೆ. ಹೀಗಾಗಿ ಬೆಂಕಿ ಬಿದ್ದಿರುವ ಘಟನೆ ಅನುಮಾನಕ್ಕೆ ಕಾರಣವಾಗಿದೆ ಎಂದು ಹಿರಿಯ ಹೋರಾಟಗಾರರಾದ ಸಂಜೀವ ಶೆಟ್ಟಿ ತಿಳಿಸಿದರು.

ದುಬಾರಿ ಯಂತ್ರೋಪಕರಣಗಳು, ತಾಂತ್ರಿಕ ಸೌಲಭ್ಯಗಳು ಮತ್ತು ಮೂಲ ಸೌಕರ್ಯಗಳು ಬೆಂಕಿಗೆ ಆಹುತಿಯಾಗಿ ರುವುದರಿಂದ ಸಾರ್ವಜನಿಕ ಹಣದ ದುರುಪಯೋಗವಾಗುತ್ತಿದೆ ಎಂಬ ಗಂಭೀರ ಆರೋವನ್ನು ಅವರು ಮಾಡಿದ್ದಾರೆ. ಇದೀಗ ಗುತ್ತಿಗೆದಾರರು ಇನ್ಸೂರೆನ್ಸ್ ಹಣ ಪಡೆಯಲು ಪ್ರಯತ್ನ ನಡೆಸುತ್ತಿರುವ ಬಗ್ಗೆಯೂ ನಮಗೆ ಮಾಹಿತಿ ಇದೆ ಎಂದು ಶ್ರೀಕಾಂತ್ ಹೆಬ್ರಿ ತಿಳಿಸಿದರು.

ಆದ್ದರಿಂದ ಬೆಂಕಿ ಅಕಸ್ಮಿಕದ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಿ ಎಲ್ಲವನ್ನೂ ಬಹಿರಂಗ ಪಡಿಸುವಂತೆ ಅವರು ಒತ್ತಾಯಿಸಿದ್ದಾರೆ.


Tags

SuspicionfireHebriwastemanagementunit
share
ವಾರ್ತಾಭಾರತಿ
ವಾರ್ತಾಭಾರತಿ
Next Story
X