Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹೊಸಂಗಡಿ| ಯುವಕ ಅನುಮಾನಾಸ್ಪದ ಸಾವು...

ಹೊಸಂಗಡಿ| ಯುವಕ ಅನುಮಾನಾಸ್ಪದ ಸಾವು ಪ್ರಕರಣ; ತೋಟದ ವಿದ್ಯುತ್ ತಂತಿ ತಗುಲಿ ಮೃತ್ಯು

ಸಾವು ಮರೆಮಾಚಿದ್ದ ಮಾಲಕನ ಬಂಧನ

ವಾರ್ತಾಭಾರತಿವಾರ್ತಾಭಾರತಿ7 Oct 2026 9:11 PM IST
share
ಹೊಸಂಗಡಿ| ಯುವಕ ಅನುಮಾನಾಸ್ಪದ ಸಾವು ಪ್ರಕರಣ; ತೋಟದ ವಿದ್ಯುತ್ ತಂತಿ ತಗುಲಿ ಮೃತ್ಯು

ಅಮಾಸೆಬೈಲು: ಹೊಸಂಗಡಿಯ ಮಾತಿನಮಠ ಎಂಬಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಹೊಸಂಗಡಿ ತಾರ್ಕಿ ಮಕ್ಕಿ ನಿವಾಸಿ ಕವೀನಾ ನಾಯ್ಕ್(26) ಎಂಬವರ ಸಾವಿನ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ತೋಟಕ್ಕೆ ಅಳವಡಿಸಿದ ಅಕ್ರಮ ವಿದ್ಯುತ್ ತಂತಿಯ ಆಘಾತದಿಂದ ಮೃತಪಟ್ಟಿರುವುದು ತನಿಖೆಯಿಂದ ತಿಳಿದು ಬಂದಿದೆ.

ಈ ಸಂಬಂಧ ಸಾವಿನ ಪ್ರಕರಣವನ್ನು ಮರೆಮಾಚಿದ್ದ ತೋಟದ ಮಾಲಕ ಶೇಖರ ನಾಯ್ಕ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಟಿಪ್ಪರ್ ಇಟ್ಟುಕೊಂಡು ವ್ಯವಹಾರ ಮಾಡಿಕೊಂಡಿದ್ದ ಕವೀನಾ ನಾಯ್ಕ್ ಸೆ.2ರಿಂದ ನಾಪತ್ತೆಯಾಗಿರುವ ಬಗ್ಗೆ ಅವರ ಸಹೋದರ ಪ್ರವೀಣ್ ನಾಯ್ಕ್ ಅ.2ರಂದು ನೀಡಿದ ದೂರಿನಂತೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಅ.5ರಂದು ಕವೀನಾ ಮೃತದೇಹವು ಮಾತಿನಮಠ ಎಂಬಲ್ಲಿ ಖಾಸಗಿ ಜಾಗವೊಂದರಲ್ಲಿ ಪತ್ತೆಯಾಗಿತ್ತು.

ಮೃತದೇಹ ಅಂಗಾಂತನೇ ಬಿದ್ದು, ಕೊಳೆತ ಸ್ಥಿತಿಯಲ್ಲಿ ಇರುವುದು ಕಂಡುಬಂದಿದ್ದು, ಮೃತದೇಹ ಸಿಕ್ಕ ಸ್ಥಳ ಅವರ ಮನೆಗೆ ಹೋಗುವ ದಾರಿ ಆಗಿರಲಿಲ್ಲ ಮತ್ತು ಮೃತರ ಕಾಲಿನಲ್ಲಿ ಚಪ್ಪಲಿ ಇರಲಿಲ್ಲ ಎಂಬುದು ಸಂಶಯಕ್ಕೆ ಕಾರಣ ವಾಗಿತ್ತು. ಅದೇ ರೀತಿ ಈ ಸ್ಥಳದಲ್ಲಿ ಕಾಲಿನ ಚಪ್ಪಲಿ ಕೂಡ ದೊರೆತಿರಲಿಲ್ಲ. ಆದುದರಿಂದ ಕವೀನಾ ಸಾವಿನಲ್ಲಿ ಬಗ್ಗೆ ಸಂಶಯ ಇರುವುದಾಗಿ ಸಹೋದರ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಅಮಾಸೆಬೈಲು ಪೊಲೀಸರು, ತನಿಖೆ ತೀವ್ರಗೊಳಿಸಿದರು.

ಅಕ್ರಮ ವಿದ್ಯುತ್ ಸಂಪರ್ಕ: ಪೊಲೀಸರು ತನಿಖೆ ನಡೆಸಿದಾಗ ಕವೀನಾ ತಂತಿ ಬೇಲಿಗೆ ನೀಡಿದ ಕರೆಂಟ್ ತಾಗಿ ಶಾಕ್‌ನಿಂದಾಗಿ ಮೃತ ಪಟ್ಟಿರುವುದು ತಿಳಿದುಬಂದಿದೆ. ಮಾತಿನ ಮಠದ ಶೇಖರ ನಾಯ್ಕ ಎಂಬಾತ ಕಾಡು ಪ್ರಾಣಿಗಳಿಂದ ತಮ್ಮ ಕೃಷಿ ರಕ್ಷಣೆಗೆ ತೋಟದ ಸುತ್ತಲಿರುವ ತಂತಿ ಬೇಲಿಗೆ ಮನೆಯ ಕರೆಂಟ್ ಕಳ್ಳತನ ಮಾಡಿ ಅಕ್ರಮವಾಗಿ ಸಂಪರ್ಕ ನೀಡಿದ್ದನು.

ಅ.2ರ ಸಂಜೆ ವೇಳೆ ಸಂಬಂಧಿಕರಿಗೆ ಹಣದ ಅವಶ್ಯಕತೆ ಇರುವುದನ್ನು ತಿಳಿದುಕೊಂಡ ಕವೀನಾ, ಹಣ ನೀಡಲು ಶೇಖರ್ ನಾಯ್ಕ ತೋಟದ ಮೂಲಕ ಅವರ ಮನೆಗೆ ಹೋಗಿದ್ದರು. ಆಗ ತೋಟದಲ್ಲಿದ್ದ ತಂತಿ ಬೇಲಿಗೆ ನೀಡಿದ ಕರೆಂಟ್ ತಾಗಿ ಕವೀನಾ ವಿದ್ಯುತ್ ಶಾಕ್‌ನಿಂದ ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ.

ಮೃತದೇಹ ನೋಡಿದ ಶೇಖರ ನಾಯ್ಕ, ಕವೀನಾನ ಮೃತದೇಹದ ಅಡಿಯಲ್ಲಿರುವ ಬೇಲಿಯ ಎರಡು ತಂತಿಯನ್ನು ತುಂಡು ಮಾಡಿ ಪಕ್ಕದಲ್ಲಿರುವ ಕಂಬಗಳಿಗೆ ಸುತ್ತಿ ಇಟ್ಟಿದ್ದು ಈ ಸಾವು ಕರೆಂಟ್ ಶಾಕ್‌ನಿಂದಾಗಿ ಅಗಿದ್ದನ್ನು ಮರೆಮಾಚಿ ಕವೀನಾ ಮನೆಯವರಿಗೆ ತಿಳಿಸಿದ್ದನು.

ಆರೋಪಿ ಶೇಖರ್ ನಾಯ್ಕ್, ಮನೆಗೆ ನೀಡಿದ ವಿದ್ಯುತ್‌ನ್ನು ಅಕ್ರಮವಾಗಿ ತೋಟದ ತಂತಿ ಬೇಲಿಗೆ ನೇರವಾಗಿ ಸಂಪರ್ಕ ನೀಡಿ ನಿರ್ಲಕ್ಷತನ ವಹಿಸಿರುವುದಲ್ಲದೆ ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕವೀನಾ ಅವರ ಸಾವಿನ ಕಾರಣವನ್ನು ಮರೆ ಮಾಚಿರುವುದು ಪೊಲೀಸ್ ತನಿಖೆಯಿಂದ ತಿಳಿದು ಬಂದಿದೆ. ಆ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Tags

SuspiciousdeathyouthHosangadi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X